D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ
ಪ್ರಜ್ವಲ್ ಕೇಸ್‌ನಲ್ಲಿ ಸಣ್ಣ ಹಸ್ತಕ್ಷೇಪವಿದ್ದರೂ ಬೆಲೆ ತೆರಲು ಸಿದ್ಧ
Team Udayavani, May 14, 2024, 8:50 PM IST
ಬೆಂಗಳೂರು: ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನನ್ನ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಸೂಚ್ಯವಾಗಿ ಹೇಳಿದರು.
ಪೆನ್‌ಡ್ರೈವ್ ವಿಚಾರದಲ್ಲಿ ಈ ಹಿಂದೆ ಮಹಾನಾಯಕ ಅಂತ ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಅಂತ ಜರಿದಿದ್ದಾರೆ ಎಂದಾಗ, ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ, ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಪ್ರದರ್ಶಕ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ರೇವಣ್ಣ ಸ್ಥಿತಿ ನೋಡಿದ್ರೆ ಬೇಸರ ಆಗುತ್ತೆ:
ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ರೇವಣ್ಣ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ನಾನೂ ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ ಆಗಿದ್ದೇನೆ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.