Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
ಪರಮೇಶ್ವರ್ ಕೈಯಲ್ಲಿರುವ ಗೃಹ ಇಲಾಖೆ ಯಾರಿಂದಲೋ "ಹೈಜಾಕ್' ಆಗಿದೆ: ಅಶೋಕ್
Team Udayavani, May 19, 2024, 11:57 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೆ ಸರಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಅದಕ್ಕಾಗಿಯೇ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರವಿವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಪ್ರಕರಣ ಮುಚ್ಚಿ ಹಾಕಲು ಯತ್ನ
ಡಾ| ಜಿ. ಪರಮೇಶ್ವರ್ ಅವರ ಕೈಯಲ್ಲಿರುವ ಗೃಹ ಇಲಾಖೆಯನ್ನು ಯಾರೋ “ಹೈಜಾಕ್’ ಮಾಡಿದ್ದಾರೆ. ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಬಂಧಿಸುವುದಕ್ಕೆ ಯಾರೂ ಅಡ್ಡಿಪಡಿಸುತ್ತಿಲ್ಲ. ಆದರೆ ವೀಡಿಯೋ ಹಂಚಿದವರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ಕಾಂಗ್ರೆಸ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿ ಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ದೂರಿದರು.
ಒಕ್ಕಲಿಗ ನಾಯಕರನ್ನು ಮುಗಿಸಲು ಯೋಜನೆ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿ ಸಿದಂತೆ ಪ್ರಜ್ವಲ್‌ನ ಮಾಜಿ ಚಾಲಕನನ್ನು ಬಂಧಿ ಸಿಲ್ಲ. ಪೊಲೀಸರು ಕಾಂಗ್ರೆಸ್ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ ಹಬ್ಬ
ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೌಡಿಗಳು ಹಾಗೂ ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀ ಚೆಗೆ ಹತ್ಯೆಯಾದ ಅಂಜಲಿ ಕುಟುಂ ಬದವರು ಕೊಲೆಗಾರರನ್ನು ಗಲ್ಲಿಗೇರಿ ಸಬೇಕು ಎಂದು ಹೇಳಿದ್ದಾರೆ.
ದಾಖಲೆ ಬಿಡುಗಡೆ ಭಯದಲ್ಲಿ ದೇವರಾಜೇಗೌಡ ಬಂಧನ
ಬಿಜೆಪಿ ಮುಖಂಡ ದೇವರಾಜೇ ಗೌಡರು ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾ ಗಿಯೇ ಅವರ ಬಂಧನವಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.