#metoo: ಶ್ರುತಿ ಪರ ಬ್ಯಾಟ್ ಬೀಸಿದ್ದ ಪ್ರಕಾಶ್ ರೈ ಉಲ್ಟಾ!
Team Udayavani, Oct 25, 2018, 11:58 AM IST
ಬೆಂಗಳೂರು:ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ದ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಪರ ಬ್ಯಾಟ್ ಬೀಸಿ ಭಾರೀ ಟ್ರೋಲ್ಗೊಳಗಾಗಿದ್ದ ನಟ ಪ್ರಕಾಶ್ ರೈ ಅವರು ಉಲ್ಟಾ ಹೊಡೆದಿದ್ದು, ಟ್ವೀಟ್ ಮೂಲಕ ನಾನು ಅರ್ಜುನ್ ಸರ್ಜಾ ಅವರನ್ನು ಸಾರಾ ಸಗಟಾಗಿ ಅಪರಾಧಿ ಎನ್ನಲಿಲ್ಲ ಎಂದಿದ್ದಾರೆ.
ಆಚಾರ..ವಿಚಾರಗಳಿಲ್ಲದ ನಾಲಿಗೆಗಳು..ತಮ್ಮ ನೀಚ ಬುದ್ದಿಯಿಂದ ತಮ್ಮ ತಮ್ಮ ಹಿತಾಸಕ್ತಿಗಳ ಬೇಳೆ ಬೇಯಿಸಿಕೊಳ್ಳುತ್ತಾ ಮೀಟೂ ಅಭಿಯಾನವನ್ನು ದಾರಿ ತಪ್ಪಿಸುವ ಮುನ್ನ… ಎಂದು ಪೋಸ್ಟ್ ಮಾಡಿದ್ದಾರೆ.
ಅರ್ಜುನ್ ಸರ್ಜಾ ನನ್ನ ಬಹುಕಾಲದ ಗೆಳೆಯ…ಸಹಪ್ರಯಾಣಿಕ…ಆತನನ್ನು ನಾನು ತುಂಬಾ ಚೆನ್ನಾಗಿ , ನಿಮ್ಮೆಲರಿಗಿಂತ ಆಂತರಿಕವಾಗಿ ಬಲ್ಲೆ …ನಾನು ಎಲ್ಲೂ ಆತನನ್ನು ಸಾರಾಸಗಟಾಗಿ ಅಪರಾಧಿ ಎನ್ನಲಿಲ್ಲ….ಯಾರ ಬಗ್ಗೆಯೂ ಅರ್ಥವಿಲ್ಲದ ದೂಷಣೆ ಮಾಡುವವನು ನಾನಲ್ಲ..ಶ್ರುತಿ..ಎಲ್ಲರೂ ದೂಷಿಸಿರುವಂತೆ ಅವಕಾಶವಾದಿ ಹೆಣ್ಣು ಮಗಳಲ್ಲ..ಅಪ್ಪಟ ಪ್ರತಿಭಾವಂತೆ..ದಿಟ್ಟ ಹೆಣ್ಣು..ನಮ್ಮೆಲ್ಲರಂತೆ ಇವರನ್ನೂ ಬೆಳೆಸಿರುವುದು ನಮ್ಮ ಸಮಾಜವೇ..
ಈ ಇಬ್ಬರೂ ಚಿತ್ರರಂಗದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಕೆಲಸ ಮಾಡಬೇಕಾದವರೂ..ಮಾಡಲು ಸಾಧ್ಯವಿರುವವರು..ಈ ಸತ್ಯದ ಹಿನ್ನಲೆಯಲ್ಲಿ ನಾನು ತುಂಬಾ ಮಾರ್ಮಿಕವಾಗಿ ಕೇಳುತ್ತಿರುವ ಸೂಕ್ಷ್ಮತೆಯ ಪ್ರತಿಕ್ರಿಯೆ ಎಲ್ಲರಿಗೂ ಅರ್ಥವಾದರೆ ಒಳಿತು…ಪಕ್ಷಪಾತವಿಲ್ಲದೆ..ಪೂರ್ವಾಗ್ರಹಪೀಡಿತರಲ್ಲದ ಕೆಲವು ಹಿರಿಯರು ಇಬ್ಬರನ್ನು ಕರೆಸಿ ಕೂರಿಸಿ ತಕ್ಷಣವೆ ಇತ್ಯರ್ಥಿಸಿ… ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.