HDK ಕಾಲಿಗೆ ಬಿದ್ದು ಧನ್ಯವಾದ ತಿಳಿಸಿದ ಪ್ರತಾಪ್‌ಸಿಂಹ
ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ...
Team Udayavani, Jan 12, 2024, 9:51 PM IST
ರಾಮನಗರ:ಬಿಡದಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಸಹಾಯ ಮಾಡಿದ್ದಕ್ಕೆ ಮೈಸೂರು-ಮಡಿಕೇರಿ ಸಂಸದ ಪ್ರತಾಪ್‌ಸಿಂಹ ಧನ್ಯವಾದ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ಪ್ರತಾಪ್‌ಸಿಂಹ ಸಹೋದರನ ವಿರುದ್ಧ ಕಾಡಿನಲ್ಲಿ ಮರಕಡಿದ ಪ್ರಕರಣ ದಾಖಲು ಮಾಡಿದ್ದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರತಾಪ್‌ಸಿಂಹ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟ್ ಬೀಸಿದ್ದರು. ”ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ”ಎಂದು ಎಕ್ಸ್ ನಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.
ಭೇಟಿ ಸಮಯದಲ್ಲಿ ಇಬ್ಬರ ನಡುವೆ ಸುಮಾರು ಒಂದು ತಾಸುಗಳ ಕಾಲ ಪ್ರತ್ಯೇಕವಾಗಿ ಲೋಕಸಭಾ ಚುನಾವಣೆ ಸಂಬಂಧ, ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆದಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ವಿಚಾರವಾಗಿ, ಲೋಕಸಭೆ ಎಲೆಕ್ಷನ್ ಗೆ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ @hd_kumaraswamy ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ. pic.twitter.com/u5P0t3GlKq
— Pratap Simha (@mepratap) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.