![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 19, 2022, 9:40 AM IST
ಬೆಂಗಳೂರು: ಕಳೆದ ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ.
ಪ್ರಕರಣದಲ್ಲಿ ನೌಫಲ್(28), ಸೈನುಲ್ ಅಬಿದ್(22), ಮೊಹಮ್ಮದ್ ಸೈಯದ್(32), ಅಬ್ದುಲ್ ಬಶೀರ್(29) ಮತ್ತು ರಿಯಾಜ್(27) ಎಂಬುವರನ್ನು ಎನ್‌ಐಎ ಆರು ದಿನಗಳ (ಆ.23ರವರೆಗೆ) ವಶಕ್ಕೆ ಪಡೆದುಕೊಂಡಿದೆ.
ಜುಲೈ 27ರಂದು ಆರೋಪಿಗಳು ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಅವರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದಿದ್ದರು. ಈ ಸಂಬಂಧ ಕಾನೂನು ಬಾಹಿರ ಚಟುಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
You seem to have an Ad Blocker on.
To continue reading, please turn it off or whitelist Udayavani.