ಪ್ರವೀಣ್ ಹತ್ಯೆ : ಕೊಲೆಗಡುಕರಿಗೆ ಉಗ್ರ ಶಿಕ್ಷೆ ನೀಡುತ್ತೇವೆ : ಸಿಎಂ ಬೊಮ್ಮಾಯಿ
ಎನ್ಐಎಗೆ ಕೊಡಲು ಕೆಲ ಷರತ್ತುಗಳು ಇವೆ...ಯಾರಿಗೂ ಯಾವುದೇ ಅನುಮಾನ ಬೇಡ
Team Udayavani, Jul 27, 2022, 5:31 PM IST
ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೂ ಆವೇಶಕ್ಕೆ ಒಳಗಾಗಬೇಕಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಜಿ ಅವರ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ..ಘಟನೆ ಹಿಂದೆ ಯಾರೇ ಇದ್ದರೂ ಬಂಧಿಸುತ್ತೇವೆ . ಯಾರೂ ಆವೇಶಕ್ಕೆ ಒಳಗಾಗಬಾರದು, ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.
ಮಂಗಳೂರು ಎಸ್ಪಿ ಅವರು ಕಾಸರಗೋಡು ಎಸ್ಪಿ ಜೊತೆ ಮಾತಾಡಿದ್ದಾರೆ.ರಾಜ್ಯದ ಡಿಜಿಪಿ ಕೇರಳ ಡಿಜಿಪಿ ಜೊತೆ ಮಾತನಾಡಿದ್ದಾರೆ.ಆರೋಪಿ ಬೆನ್ನತ್ತಿರುವ ತಂಡದ ಜೊತೆ ಡಿಜಿಪಿ ನಿರಂತರ ಸಂಪರ್ಕದಲ್ಲಿದ್ದಾರೆ.ಆದಷ್ಟು ಬೇಗ ಕೊಲೆಗಡುಕರನ್ನು ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸುತ್ತೇವೆ. ಇದರಲ್ಲಿ ಯಾರಿಗೂ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
ಇದರ ಹಿಂದೆ ಇರುವ ವ್ಯಕ್ತಿಗಳು ಹಾಗೂ ಸಂಘಟನೆಗಳು ಯಾರೇ ಇದ್ದರೂ ,ಅವರನ್ನು ಸದೆಬಡಿಯುವ ಕೆಲಸ ಮಾಡುತ್ತೇವೆ.ಸಮಾಜದಲ್ಲಿ ಹಿಂಸೆ ಮಾಡಿ ದುಷ್ಕೃತ್ಯ ಎಸಗುವವರನ್ನು ದಮನ ಮಾಡುವವರೆಗೂ ನಾನು ವಿಶ್ರಮಿಸುವುದಿಲ್ಲ.ಯಾರೂ ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆ ಕಾಪಾಡಬೇಕು.ಯಾರು ಪ್ರಚೋದನಕಾರಿ ಹೇಳಿಕೆ ಕೊಡದೆ, ತನಿಖೆಗೆ ಎಲ್ಲರು ಸಹಕಾರ ಕೊಡಬೇಕು.ಎನ್ಐಎಗೆ ಕೊಡಲು ಕೆಲ ಷರತ್ತುಗಳು ಇವೆ.ಆ ರೀತಿ ಇದ್ದರೆ , ಪ್ರಾಥಮಿಕ ತನಿಖೆ ಆಧರಿಸಿ, ಮುಂದೆ ಎನ್ಐಎ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.