ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ? ಗುಜರಾತ್ ಜತೆ ರಾಜ್ಯದಲ್ಲೂ ಚುನಾವಣೆಗೆ ನಡೆದಿದೆ ಚಿಂತನೆ
Team Udayavani, Mar 13, 2022, 7:20 AM IST
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯದಲ್ಲೂ ಅವಧಿಪೂರ್ವ ಚುನಾವಣೆ ಚರ್ಚೆ ಮುನ್ನೆಲೆಗೆ ಬಂದಿದೆ. ವರ್ಷಾಂತ್ಯದಲ್ಲಿ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅದರ ಜತೆ ಯಲ್ಲೇ ಕರ್ನಾಟಕದಲ್ಲೂ ಚುನಾವಣೆ ನಡೆ ಯಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.
ಫಲಿತಾಂಶಕ್ಕೂ ಮುನ್ನ ಕಲಬುರಗಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ಬರಬಹುದು ಎಂದು ಹೇಳಿದ್ದರು. ಈಗ ಪಂಚರಾಜ್ಯ ಫಲಿತಾಂಶದ ಬಳಿಕ ಅವಧಿಪೂರ್ವ ಚುನಾವಣೆ ವಿಚಾರ ಚರ್ಚೆಯಲ್ಲಿದೆ. ಗುಜರಾತ್ ಜತೆಗೆ ಇಲ್ಲೂ ಚುನಾವಣೆ ನಡೆಸುವ ಬಗ್ಗೆ ಎಪ್ರಿಲ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಬಿಜೆಪಿ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡು ಚರ್ಚಿಸುವ ಸಾಧ್ಯತೆಯಿದೆ.
ಎಚ್‌ಡಿಡಿ ಪ್ರಶ್ನೆ
ಈ ಮಧ್ಯೆ, ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಬೇರೆ ರಾಜ್ಯಗಳಿಗೂ ಕರ್ನಾ ಟಕದ ರಾಜಕಾರಣಕ್ಕೆ ವ್ಯತ್ಯಾಸವಿದೆ ಎಂದು ಸ್ವತಃ ಯಡಿಯೂರಪ್ಪನವರು ಹೇಳಿದ್ದಾರೆ. ಅವರೇ ಆಯ್ಕೆ ಮಾಡಿದ ಬೊಮ್ಮಾಯಿ ಅಧಿಕಾರ ನಡೆಸುತ್ತಿದ್ದಾರೆ. ಹೀಗಿರುವಾಗ ಅವಧಿಗೆ ಮೊದಲೇ ಚುನಾವಣೆ ಯಾಕಾಗಬೇಕು ಎಂದು ಪ್ರಶ್ನಿಸಿದ್ದಾರೆ. ಜತೆಗೆ ಅವಧಿಪೂರ್ವ ಚುನಾವಣೆ ಅಷ್ಟು ಸುಲಭವಲ್ಲ ಎಂದೂ ಹೇಳಿದ್ದಾರೆ.
ಇದನ್ನೂ ಓದಿ:ಹೈಕಮಾಂಡ್ ಬುಲಾವ್; ಡಿ.ಕೆ.ಶಿವಕುಮಾರ್ ದಿಲ್ಲಿಗೆ
ನಾವು ಸಿದ್ಧ: ಕಾಂಗ್ರೆಸ್
ಕಲಬುರಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ವಿಧಾನಸಭೆಗೆ ಯಾವಾಗ ಚುನಾವಣೆ ನಡೆದರೂ ನಾವು ಸಿದ್ಧ ಎಂದು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಚುನಾವಣೆ ಮಾಡದೇ ಇರುವವರು, ವಿಧಾನಸಭೆ ಚುನಾವಣೆ ಮಾಡುತ್ತಾರಾ? ತಮಗೇನೂ ಹಾಗೆ ಅನಿಸುವುದಿಲ್ಲ. ಇರುವ ಮಾಹಿತಿ ಪ್ರಕಾರ ಬಿಜೆಪಿ ಅವ ಧಿಗೂ ಮುನ್ನವೇ ಚುನಾವಣೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ನಾಳೆಯೇ ಚುನಾವಣೆ ಘೋಷಿಸಿದರೂ ನಾವು ಸಜ್ಜಾಗಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bigg Boss: ನೇರವಾಗಿ ಫಿನಾಲೆ ತಲುಪಿದ ಬಿಗ್ ಬಾಸ್ ಮನೆಯ ಪ್ರಬಲ ಸ್ಪರ್ಧಿ
Editorial: ಸಂಚಾರ, ಪಾರ್ಕಿಂಗ್; ಸಮನ್ವಯದ ಕ್ರಮ ಆಗಬೇಕು
Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ!
Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.