ಕಾಲೇಜಿನಲ್ಲಿ ಪ್ರಾಯೋಗಿಕ ತರಗತಿಗೆ ಆದ್ಯತೆ
Team Udayavani, Oct 30, 2020, 11:04 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮುಂದಿನ ತಿಂಗಳ 17ರಿಂದ ಪದವಿ ಕಾಲೇಜುಗಳು ಆರಂಭವಾಗುತ್ತಿದ್ದಂತೆ ಥಿಯರಿ ತರಗತಿಗಳಿಗಿಂತ ಪ್ರಾಯೋಗಿಕ ತರಗತಿಗೆ ಆದ್ಯತೆ ನೀಡಲು ಕಾಲೇಜು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ತಾಂತ್ರಿಕ ಕೋರ್ಸ್ ಮತ್ತು ವಿಜ್ಞಾನ ವಿಭಾಗದ ಪದವಿ ಕೋರ್ಸ್‌ಗಳಿಗೆ ಲ್ಯಾಬ್‌ನಲ್ಲಿ ಕಲಿಕೆ ಅತಿ ಮುಖ್ಯವಾಗಿದ್ದು, ವಾಣಿಜ್ಯ ವಿಭಾಗದ ಕೆಲವು ವಿಷಯಕ್ಕೂ ಪ್ರಯೋಗಾತ್ಮಕ ಬೋಧನೆ ಇರುತ್ತದೆ. ಅಲ್ಲದೆ, ಕಂಪ್ಯೂಟರ್ ಅಪ್ಲಿಕೇಷನ್ ವಿಷಯ ಪಡೆದ ಅಭ್ಯರ್ಥಿಗಳು ಕಂಪ್ಯೂಟರ್ ಲ್ಯಾಬ್ ಬಳಕೆ ಮಾಡಲೇ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜು ಆರಂಭದ ಬಳಿಕ ಪ್ರಾಯೋಗಿಕ ತರಗತಿಗಳಿಗೆ ಆದ್ಯತೆ ನೀಡಿ, 10 ಅಥವಾ 15 ವಿದ್ಯಾರ್ಥಿಗಳ ಸಣ್ಣ ಸಣ್ಣ ಗುಂಪುಗಳನ್ನು ಮಾಡಲು ನಿರ್ಧರಿಸಲಾಗಿದೆ.
ಈ ಹಿಂದೆ 25ರಿಂದ 30 ವಿದ್ಯಾರ್ಥಿಗಳು ಏಕಕಾಲದಲ್ಲಿ ಲ್ಯಾಬೊರೇಟರಿ ಬಳಕೆ ಮಾಡುವ ವ್ಯವಸ್ಥೆಯಿತ್ತು. ಈಗ ಕೊರೊನಾ ಕಾರಣದಿಂದ ವಿದ್ಯಾರ್ಥಿಗಳ ಸಂಖ್ಯೆಯನ್ನು 10 ಅಥವಾ 15ಕ್ಕೆ ಇಳಿಸಲಿದ್ದೇವೆ. ದಿನಕ್ಕೆ ಒಂದು ಅಥವಾ ಎರಡು ತರಗತಿಗಳ ಬದಲಿಗೆ ದಿನಪೂರ್ತಿ ಲ್ಯಾಬ್ ಬಳಕೆಗೆ ಬೇಕಾದ ವ್ಯವಸ್ಥೆ ರೂಪಿಸಲು ಚಿಂತನೆ ನಡೆಸುತ್ತಿದ್ದೇವೆ ಎಂದು ಇಲಾಖೆಯ ಓರ್ವ ಉನ್ನತ ಅಧಿಕಾರಿ ತಿಳಿಸಿದ್ದಾರೆ.
ಪ್ರಾಯೋಗಿಕ ತರಗತಿಗಳನ್ನು ಕಾಲೇಜು ಆರಂಭದಲ್ಲೇ ಮುಗಿಸಿಕೊಂಡರೆ, ಮುಂದಿನ ದಿನಗಳಲ್ಲಿ ಕೊರೊನಾ ಪರಿಸ್ಥಿತಿ ಸುಧಾರಿಸದೇ ಇದ್ದರೂ, ಆನ್‌ಲೈನ್ ಅಥವಾ ಆಪ್‌ಲೈನ್ ವ್ಯವಸ್ಥೆ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸ ಬಹುದಾಗಿದೆ. ಹೀಗಾಗಿ ಕಾಲೇಜು ಆರಂಭದಲ್ಲಿ ಪರಿಸ್ಥಿತಿ ಹೇಗಿರುತ್ತದೆ ಎಂಬುದನ್ನು ಗಮನಿಸಿ, ಪ್ರಾಯೋಗಿಕ ತರಗತಿಗೆ ಆದ್ಯತೆ ನೀಡಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಕಾಲೇಜುವಾರು ವೇಳಾಪಟ್ಟಿ
ತರಗತಿಗಳನ್ನು ಪಾಳಿ ಪದ್ಧತಿಯಲ್ಲಿ ನಡೆಸಲು ಅನುಕೂಲ ಆಗುವಂತೆ ವಿದ್ಯಾರ್ಥಿಗಳ ಪ್ರತ್ಯೇಕ ಬ್ಯಾಚ್ ರಚನೆ ಮಾಡ ಲಾಗುತ್ತದೆ ಮತ್ತು ಇದಕ್ಕಾಗಿ ಕಾಲೇಜು ಹಂತದಲ್ಲೇ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತದೆ. ಈ ಹಿಂದೆ ಒಂದು ತರಗತಿಯಲ್ಲಿ 100 ವಿದ್ಯಾರ್ಥಿಗಳವರೆಗೂ ಕುಳಿತುಕೊಳ್ಳಲು ಅವಕಾಶವಿತ್ತು. ಅಲ್ಲದೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣ ವಾಗಿ ತರಗತಿ ಕೊಠಡಿಯ ರಚನೆ ಮಾಡಲಾಗು ತಿತ್ತು. ಈಗ ಸಾಮಾಜಿಕ ಅಂತರ ಕಡ್ಡಾಯ ವಾಗಿರುವುದರಿಂದ ಒಂದು ತರಗತಿ ಕೊಠಡಿ ಯಲ್ಲಿ ಗರಿಷ್ಠ 40 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಅದಕ್ಕಿಂತ ಜಾಸ್ತಿ ವಿದ್ಯಾರ್ಥಿಗಳಿದ್ದರೆ ಬೇರೆ ತರಗತಿ ಕೊಠಡಿ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ.
ಕಾಲೇಜು ಆರಂಭದಲ್ಲಿ ಲ್ಯಾಬ್‌ಗಳನ್ನು ತೆರೆಯುತ್ತೇವೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಗುಂಪುಗಳನ್ನು ಮಾಡಿ, ಪ್ರಾಯೋಗಿಕ ಬೋಧನೆ ಇರಲಿದೆ. ದಿನಪೂರ್ತಿ ಲ್ಯಾಬ್ ಬೋಧನೆಗೆ ಬೇಕಾದ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಈ ಹಿಂದೆ ವಾರಕ್ಕೆ ಎರಡು ಅಥವಾ ಮೂರು ದಿನ ಲ್ಯಾಬ್ ತರಗತಿ ಇರುತ್ತಿದ್ದವು. ಈಗ ದಿನಪೂರ್ತಿ ಲ್ಯಾಬ್ ಬಳಕೆಗೆ ಆದ್ಯತೆ ನೀಡಲಾಗುತ್ತದೆ.
-ಪ್ರೊ.ಎಸ್.ಮಲ್ಲೇಶ್ವರಪ್ಪ, ನಿರ್ದೇಶಕ, ಕಾಲೇಜು ಶಿಕ್ಷಣ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.