Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೇಂದ್ರಕ್ಕೆ ಪ್ರಸ್ತಾವನೆ
Team Udayavani, Oct 21, 2024, 7:50 AM IST
ಬೆಂಗಳೂರು: ಕೊಲ್ಲೂರಿನ ಪಡುವರಿ ಸೋಮೇಶ್ವರ, ಗೋಕರ್ಣ, ಸವದತ್ತಿ ಯಲ್ಲಮ್ಮ ದೇಗುಲ, ರೋರಿಚ್ ಎಸ್ಟೇಟ್ ಸೇರಿದಂತೆ ರಾಜ್ಯದ 7 ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣಗಳನ್ನು ಜಾಗತಿಕ ಮಟ್ಟಕ್ಕೆ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಮುಂದಾಗಿದ್ದು ಈ ಸಂಬಂಧ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ದೇಶದಲ್ಲಿನ ಸಾಂಪ್ರದಾಯಿಕ ಮತ್ತು ಪಾರಂಪರಿಕ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿಯ ರಾಜ್ಯಗಳಿಗೆ ಬಂಡವಾಳ ಹೂಡಿಕೆಗೆ ವಿಶೇಷ ನೆರವು (ಎಸ್‌ಎಎಸ್‌ಸಿಐ) ಯೋಜನೆಯಡಿ ರಾಜ್ಯದಲ್ಲಿ ಆಯ್ದ ಧಾರ್ಮಿಕ ಸ್ಥಳಗಳು ಹಾಗೂ ಪ್ರವಾಸಿ ಯಾತ್ರಾ ತಾಣಗಳು ಸೇರಿ ಒಟ್ಟು ಏಳು ಸ್ಥಳಗಳನ್ನು ಆಯ್ಕೆ ಮಾಡಿ ಒಟ್ಟು 664 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕಳೆದ ವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಕಳುಹಿಸಿಕೊಟ್ಟಿದೆ.
ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಮಾರ್ಗಸೂಚಿಯಂತೆ ಸಂಬಂಧಪಟ್ಟ ಧಾರ್ಮಿಕ ಸ್ಥಳ ಹಾಗೂ ಪ್ರವಾಸಿ ತಾಣಗಳ ಬಗ್ಗೆ ಆಯಾ ಜಿಲ್ಲಾಡಳಿತದಿಂದ ಸಮಗ್ರ ಯೋಜನಾ ವರದಿ ತರಿಸಿಕೊಂಡು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೇಂದ್ರ ಸರಕಾರದ ಹಂತದಲ್ಲಿನ ಎಲ್ಲ ಪ್ರಕ್ರಿಯೆ ಮುಗಿದು ರಾಜ್ಯ ಸರಕಾರದ ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕರೆ ಮುಂದಿನ ಪ್ರಕ್ರಿಯೆಗಳು ಆರಂಭವಾಗಲಿದೆ. ಒಂದೊಂದು ಸ್ಥಳದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಕಾಲಮಿತಿ ಸಹ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಭಿವೃದ್ಧಿಗೆ ಬೇಕಾದ ಮೊತ್ತ
ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಬೆಂಗಳೂರಿನ ತಾತಾಗುಣಿಯ ರೋರಿಚ್ ಆ್ಯಂಡ್ ದೇವಿಕಾರಾಣಿ ಎಸ್ಟೇಟ್‌ನಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಕಲ್ಚರಲ್ ಹಬ್ ಸ್ಥಾಪನೆಗೆ 99.88 ಕೋಟಿ ರೂ., ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ 100 ಕೋಟಿ ರೂ., ಕೊಲ್ಲೂರಿನ ಪಡುವರಿ ಸೋಮೇಶ್ವರದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ 99.95 ಕೋಟಿ ರೂ., ಲಕ್ಕುಂಡಿ ತಾಣದ ಅಭಿವೃದ್ಧಿಗೆ 57.16 ಕೋಟಿ ರೂ., ಐಹೊಳೆಯನ್ನು ಜಾಗತಿಕ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು 109 ಕೋಟಿ ರೂ., ಕರಕುಶಲ ಅಭಿವೃದ್ಧಿ ನಿಗಮದಿಂದ ಬೆಂಗಳೂರಿನಲ್ಲಿ ಅಮೃತ್ ಭಾರತ್ ಮೆಗಾ ಆರ್ಟ್ ಆ್ಯಂಡ್ ಹೆರಿಟೇಜ್ ಪಾರ್ಕ್ ನಿರ್ಮಾಣಕ್ಕೆ 100 ಕೋಟಿ ರೂ., ಗೋಕರ್ಣದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ 99.29 ಕೋಟಿ ರೂ, ವೆಚ್ಚಗಳ ಪ್ರಸ್ತಾವನೆಗಳನ್ನು ಕೇಂದ್ರದ ಎಸ್‌ಎಎಸ್‌ಸಿಐ ಯೋಜನೆಯಡಿ ಕಳಹಿಸಿಕೊಡಲಾಗಿದೆ.
ಸಾಲ ರೂಪದ ನೆರವು
ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ಯಾತ್ರಾ ತಾಣಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಜಾಗತಿಕ ಮಟ್ಟಕ್ಕೆ ಮಾರ್ಕೆಟಿಂಗ್ ಹಾಗೂ ಬ್ರಾಂಡಿಂಗ್ ಮಾಡಲು 50 ವರ್ಷಗಳ ದೀರ್ಘಾವಧಿಗೆ ಬಡ್ಡಿ ರಹಿತ ಸಾಲದ ರೂಪದಲ್ಲಿ ಕೇಂದ್ರ ಸರಕಾರ ರಾಜ್ಯಗಳಿಗೆ ಆರ್ಥಿಕ ನೆರವು ನೀಡುತ್ತದೆ. ಪ್ರವಾಸೋದ್ಯಮ ಯೋಜನೆಗಳನ್ನು ಸುಸ್ಥಿರವಾಗಿ ಅಭಿವೃದ್ಧಿಪಡಿಸಿ ಅದರ ಮೂಲಕ ಸ್ಥಳೀಯ ಆರ್ಥಿಕತೆಯ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ಮೊದಲು ಬಂದವರಿಗೆ ಆದ್ಯತೆ
“ಫಸ್ಟ್ ಕಮ್ ಫಸ್ಟ್ ಸರ್ವ್’ ಸೂತ್ರದಂತೆ ಮೊದಲು ಬಂದವರಿಗೆ ಮೊದಲ ಆದ್ಯತೆಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ನೀಡಲಿದೆ. ಒಂದು ರಾಜ್ಯ ಗರಿಷ್ಠ 3 ಯೋಜನೆಗಳನ್ನು ಸಲ್ಲಿಸಬಹುದು. 2024-25ರಲ್ಲಿ ಕೇಂದ್ರ ಸರಕಾರ ಈ ಯೋಜನೆಗೆ 2 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಒಂದು ರಾಜ್ಯ ಒಂದು ಯೋಜನೆಗೆ ಗರಿಷ್ಠ 100 ಕೋಟಿ ರೂ. ಅನುದಾನ ಪಡೆದುಕೊಳ್ಳಬಹುದು. ಒಂದು ರಾಜ್ಯ ಗರಿಷ್ಠ 250 ಕೋಟಿ ರೂ. ಅನುದಾನ ಪಡೆದುಕೊಳ್ಳುವ ಅರ್ಹತೆ ಹೊಂದಿರುತ್ತದೆ. ಈ ಯೋಜನೆಯನ್ನು ಕೇಂದ್ರ ಸರಕಾರ 2022-23ರಲ್ಲಿ ಜಾರಿಗೆ ತಂದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಯಾವ್ಯಾವ ತಾಣ ಅಭಿವೃದ್ಧಿ?
ಬೆಂಗಳೂರಿನ ರೋರಿಚ್ ಆ್ಯಂಡ್ ದೇವಿಕಾರಾಣಿ ಎಸ್ಟೇಟ್, ಸವದತ್ತಿ ಯಲ್ಲಮ್ಮ ಗುಡ್ಡ, ಕೊಲ್ಲೂರಿನ ಪಡುವರಿ ಸೋಮೇಶ್ವರ, ಲಕ್ಕುಂಡಿ ತಾಣ, ಐಹೊಳೆ, ಬೆಂಗಳೂರಿನ ಅಮೃತ್ ಭಾರತ್ ಮೆಗಾ ಆರ್ಟ್ ಆ್ಯಂಡ್ ಹೆರಿಟೇಜ್ ಪಾರ್ಕ್, ಗೋಕರ್ಣ.
-ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.