ಅಂಬಿಗರನಹಳ್ಳಿ ಕುಂಭಮೇಳಕ್ಕೆ ಸಿದ್ಧತೆ ಪೂರ್ಣ: ಸಚಿವ ಕೆ. ಗೋಪಾಲಯ್ಯ
ಸಿಎಂ ಬೊಮ್ಮಾಯಿ, ಉತ್ತರ ಪ್ರದೇಶ ಸಿ.ಎಂ. ಯೋಗಿ ಆದಿತ್ಯನಾಥ್ ಭಾಗಿ
Team Udayavani, Oct 11, 2022, 2:16 PM IST
ಬೆಂಗಳೂರು: ಇದೇ 13ರಿಂದ ಕೆ.ಆರ್. ಪೇಟೆಯ ಅಂಬಿಗರ ಹಳ್ಳಿ, ಸಂಗಾಪುರ ಜಾಗದಲ್ಲಿ ಕುಂಬಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲ ಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು. ಇದೀಗ ಮತ್ತೆ ಆಯೋಜಿಸಲಾಗಿದೆ. ಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ ಎಂದರು.
ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. 40 ಜನ ಸಾಧು ಸಂತರು ಭಾಗಿಯಾಗಲಿದ್ದಾರೆ. ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಸಂಗಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ನುರಿತ ಈಜುಪಟುಗಳು, ಪೊಲೀಸರನ್ನು ನೇಮಕ ಮಾಡಲಾಗಿದೆ. ಬರುವವರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಆದಿ ಚುಂಚನಗಿರಿ ಮಠದ ಡಾ.ನಿರ್ಮಲಾನಂದ ನಾಥ ಸ್ವಾಮೀಜಿ, ಸಿಎಂ ಬೊಮ್ಮಾಯಿ, ಉತ್ತರ ಪ್ರದೇಶ ಸಿ.ಎಂ. ಯೋಗಿ ಆದಿತ್ಯನಾಥ್ ಭಾಗಿಯಾಗಲಿದ್ದಾರೆ ಎಂದರು.
13ರಂದು ಮಾದೇಶ್ವರ ದೇವಸ್ಥಾನದಲ್ಲಿ ಉದ್ಘಾಟನೆ ಆಗಲಿದೆ. ಅದು ಸದಾ ಕಾಲ ತೆರೆದಿರಬೇಕು ಎಂದು ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಸಿಎಂ 2 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಊಟ, ಪ್ರಸಾದಕ್ಕಾಗಿ ದಾನಿಗಳು ವ್ಯವಸ್ಥೆ ಮಾಡಿದ್ದಾರೆ. ಉಳಿದ ಸಣ್ಣ ಪುಟ್ಟ ಖರೀದಿ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಡಾ.ಕೆ.ಸಿ. ನಾರಾಯಣಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.