ಸಮಗ್ರ ವರದಿ ಸಿದ್ಧಪಡಿಸಿ ಒಪ್ಪಿಗೆ ಪಡೆಯಲು ಸೂಚನೆ
ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ
Team Udayavani, Oct 9, 2020, 6:08 AM IST
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿ ಸಿದ್ಧಪಡಿಸಿ ಅನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಗುರುವಾರ ಪ್ರವಾಸೋದ್ಯಮ ಇಲಾಖೆಯ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಗುರುತಿ ಸಲಾಗಿರುವ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಗಿರುವ ತೊಡಕು ಗಳನ್ನು ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಗಳೊಂದಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ಸೂಚಿಸಿದರು.
ಕೆಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ: ರವಿ ಸಲಹೆ
ಸಿ.ಟಿ. ರವಿ ಮಾತನಾಡಿ, ಪ್ರವಾಸೋದ್ಯಮ ಬೆಳವಣಿಗೆಗೆ ವಿಪುಲ ಅವಕಾಶಗಳಿರುವ ಜಿಲ್ಲೆ ಗಳನ್ನು ಗುರುತಿಸಿ ಅಲ್ಲಿಗೆ ಅಧಿಕಾರಿಗಳನ್ನು ನಿಯೋಜಿಸಬೇಕು. ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಅಧಿಕಾರಿಗಳಿಲ್ಲದೆ ಪ್ರಗತಿ ಪರಿಶೀಲನೆ ಅಸಾಧ್ಯ ವಾಗಿದೆ. ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶವಿರುವ ಜಿಲ್ಲೆಗಳಲ್ಲಿ ಕೆಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಪ್ರಭಾರ ನೀಡುವ ಬಗ್ಗೆಯೂ ಚಿಂತಿಸಬಹುದು ಎಂದರು.
ಇಲಾಖೆಗೆ ಪ್ರವಾಸೋದ್ಯಮ ಉತ್ತೇಜನ ಮುಖ್ಯ ಧ್ಯೇಯವಾಗಬೇಕಿದ್ದು, ಅಭಿವೃದ್ಧಿ ತಾಣಗಳ ಗುರುತಿಸುವಿಕೆ, ನಿರ್ವಹಣೆ, ಸಂರಕ್ಷಣೆ ಆದ್ಯತೆಯಾಗಬೇಕು ಎಂದರು. ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯ ದರ್ಶಿ ಪಿ. ರವಿಕುಮಾರ್, ಮುಖ್ಯ ಕಾರ್ಯ ದರ್ಶಿ ಟಿ. ಎಂ. ವಿಜಯ ಭಾಸ್ಕರ್, ಪ್ರವಾಸೋ ದ್ಯಮ ಇಲಾಖೆ ಕಾರ್ಯದರ್ಶಿ ಟಿ. ಕೆ. ಅನಿಲ್ ಕುಮಾರ್, ಕೆಎಸ್‌ಟಿಡಿಸಿ ಅಧ್ಯಕ್ಷೆ ಶ್ರುತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕೆಮ್ಮಣ್ಣುಗುಂಡಿ ಅಭಿವೃದ್ಧಿ
ಕೆಮ್ಮಣ್ಣುಗುಂಡಿ ಹಾಗೂ ನಂದಿ ಬೆಟ್ಟದ ಸಮಗ್ರ ಅಭಿವೃದ್ಧಿ ಹೊಣೆ ಯನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸುವುದು, ಬಾದಾಮಿ ಪ್ರವಾಸಿ ತಾಣದ ಅಭಿವೃದ್ಧಿಗೂ ಆದ್ಯತೆ ನೀಡುವುದು, ಅಂತಾರಾಷ್ಟ್ರೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ತಾಣದಲ್ಲಿ ವಿಶ್ವ ದರ್ಜೆಯ ಸೌಲಭ್ಯ ಕಲ್ಪಿಸುವುದು, ಅದಕ್ಕಾಗಿ ಎಪಿಎಂಸಿಗೆ ಸೇರಿದ ಭೂಮಿಯನ್ನು ಕೆಎಸ್‌ಟಿಡಿಸಿಗೆ ಹಸ್ತಾಂತರಿಸಿ ವಾಹನ ನಿಲ್ದಾಣ ಸಹಿತ ಇತರ ಸೌಲಭ್ಯ ಕಲ್ಪಿಸುವುದು. ಶ್ರೀರಂಗಪಟ್ಟಣ, ಮೈಸೂರು ಪ್ರವಾಸಿ ತಾಣ ಅಭಿವೃದ್ಧಿ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.