ವಿಭಿನ್ನ ದಸರಾ ಆಚರಣೆಗೆ ಸಿದ್ಧತೆ: ಸೋಮಣ್ಣ

Team Udayavani, Aug 25, 2019, 3:06 AM IST

vibina

ಮೈಸೂರು: ದಸರೆಯ ವಿಶ್ವವಿಖ್ಯಾತಿಗೆ ಅಪಚಾರ ವಾಗದಂತೆ ಕಾರ್ಯಕ್ರಮಗಳನ್ನು ರೂಪಿಸುವುದರ ಜತೆಗೆ ಪಕ್ಷಾತೀತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ದಸರಾವನ್ನು ಯಶಸ್ವಿಗೊಳಿ ಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ದಸರಾ ಕಾರ್ಯಕಾರಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ದಸರಾ ಆಚರಿಸದೆ, ಈ ಬಾರಿ ವಿಭಿನ್ನವಾಗಿ ದಸರಾ ಆಚರಿಸಲು ಕಾರ್ಯಕ್ರಮ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶೋಭಾ ಕರಂದ್ಲಾಜೆಯವರು ಆರಂಭಿಸಿದ ಗ್ರಾಮೀಣ ದಸರಾ ಸೇರಿ ಬಹುಪಾಲು ಕಾರ್ಯಕ್ರಮಗಳನ್ನು ಮುಂದು ವರಿಸಲಾಗುವುದು. ಮಹಿಳಾ ದಸರಾದಲ್ಲಿ ಈ ಬಾರಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಯಕ್ರಮ ಆಯೋಜಿಸ ಲಾಗುವುದು. ಪ್ರತಿ ವರ್ಷ ತಲೆದೋರುವ ದಸರಾ ಪಾಸ್‌ ಗೊಂದಲವನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

“ಜಿಲ್ಲಾ ಉಸ್ತುವಾರಿ ಸಚಿವನಾಗಿ ಪಕ್ಷಾತೀತ ವಾಗಿ ಎಲ್ಲ ನಾಯಕರಿಗೂ ನಾನೇ ಖುದ್ದಾಗಿ ಫ‌ಲ, ತಾಂಬೂಲ ದೊಂದಿಗೆ ಹೋಗಿ ಆಮಂ ತ್ರಣ ನೀಡುತ್ತೇನೆ. ಜತೆಗೆ, ಎಲ್ಲ ಸ್ವಾಮೀಜಿಗಳು, ಮೌಲ್ವಿಗಳು, ಪಾದ್ರಿಗಳನ್ನೂ ಭೇಟಿ ಮಾಡಿ ನಾಡಹಬ್ಬ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾ ಗುವಂತೆ ಆಹ್ವಾನಿಸುತ್ತೇನೆ. ದಸರೆಯ ಹತ್ತು ದಿನಗಳು ಕೂಡ ರಾಜವಂಶಸ್ಥರು ಸಕ್ರಿಯವಾಗಿ ಭಾಗವಹಿಸುವಂತೆ ಮನವೊಲಿಸಲಾಗುವುದು. ಜತೆಗೆ, ದಸರಾ ಸಂದರ್ಭ ದಲ್ಲೇ ಮೈಸೂರು ರಾಜಮನೆತನದ ಕೊನೆಯ ಅರಸು ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತ ಮಾನೋತ್ಸವ ಕಾರ್ಯಕ್ರಮವನ್ನೂ ಆಯೋಜಿಸ ಲಾಗುವುದು’ ಎಂದು ತಿಳಿಸಿದರು.

ರಾಮದಾಸ್‌ ಗೈರು: ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿ ಸಭೆಯಿಂದ ಜಿಲ್ಲೆಯ ಬಹುತೇಕ ಜನಪ್ರತಿನಿಧಿಗಳು ದೂರ ಉಳಿದಿದ್ದರು. ಅದರಲ್ಲೂ, ಶಾಸಕ ಎಸ್‌.ಎ. ರಾಮದಾಸ್‌ ಗೈರು ಹಾಜರಿ ಎದ್ದು ಕಾಣುತ್ತಿತ್ತು. ನಗರ ದಲ್ಲೇ ಇದ್ದರೂ ರಾಮದಾಸ್‌ ಸಭೆಗೆ ಬರಲಿಲ್ಲ. ವಿ.ಸೋಮಣ್ಣ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ದಿಂದಲೂ ದೂರ ಉಳಿದಿದ್ದರು. ಸಚಿವ ಸಂಪುಟದಲ್ಲಿ ಸ್ಥಾನ ಸಿಗದಿರುವುದರಿಂದ ಅಸಮಾಧಾನಗೊಂಡಿರುವ ಅವರು, ಗಜಪಯಣದ ದಿನ ಸಚಿವರು ಬರುವುದಕ್ಕೂ ಮುನ್ನವೇ ಗಜಪಡೆಗೆ ಪೂಜೆ ಸಲ್ಲಿಸಿ, ಚಾಲನೆ ನೀಡಿದ್ದರು. ಬಿಜೆಪಿ ಸರ್ಕಾರದಲ್ಲಿ ಯಾರ್ಯಾರೋ ಬಂದು ದಸರಾ ಮಾಡಿ ಹೋಗುತ್ತಾರೆ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.