ಶಾಲೆ ಆರಂಭಕ್ಕೆ ಸಿದ್ಧತೆ : ನಾಗೇಶ್
Team Udayavani, Aug 19, 2021, 7:40 AM IST
ಬೆಂಗಳೂರು: ಪ್ರೌಢಶಾಲೆಯ 9 ಮತ್ತು 10ನೇ ತರಗತಿ ಭೌತಿಕ ತರಗತಿಗಳನ್ನು ಆ.23ರಿಂದ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಶಾಲೆ ಪುನರಾರಂಭದ ಪೂರ್ವಸಿದ್ಧತೆ ಪರಿಶೀಲನೆಗೆ ಬುಧವಾರ ಬೆಂಗಳೂರಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೀಡಿಯೊ ಕಾನ್ಫರೆನ್ಸ್ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಶಾಲೆ ಆವರಣದಲ್ಲಿ ಶುಚಿತ್ವ ಕಾಪಾಡುವುದು ಅತಿ ಮುಖ್ಯವಾಗಿದೆ. ಶೌಚಗೃಹ, ಶಾಲಾ ಆವರಣ, ಕೊಠಡಿಗಳು ಸಹಿತ ಎಲ್ಲ ಕಡೆ ಶುಚಿತ್ವ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಆಯಾ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಶಿಕ್ಷಕರದ್ದಾಗಿದೆ ಎಂದರು.
ಶಾಲೆಗಳಲ್ಲಿ ಸುರಕ್ಷಾ ಕ್ರಮಗಳು ಪರಿಪಾಲನೆಯಾಗುತ್ತಿರುವ ಕುರಿತು ಬಿಇಒಗಳು ತಮ್ಮ ವ್ಯಾಪ್ತಿಯ ಕನಿಷ್ಠ ಶೇ.50ರಷ್ಟು ಶಾಲೆಗಳಿಗಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಕೊಠಡಿ ಕೊರತೆಯಾದರೆ ಸಿಬಂದಿ ಕೊಠಡಿ ಬಳಸಿಕೊಳ್ಳಬೇಕು. ಈ ಮೂಲಕ ಶಾಲೆಗಳ ಪುನರಾರಂಭ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.
ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಆರಂಭಿಸಿದ ಬಳಿಕ ಬರುವ ಪ್ರತಿಕ್ರಿಯೆಗಳು 1ರಿಂದ 8ನೇ ತರಗತಿವರೆಗಿನ ಶಾಲೆ ಪುನರಾರಂಭಿಸಲು ನೆರವಾಗುತ್ತವೆ. ರಾಜ್ಯದ ಎಲ್ಲ ಗ್ರಾಮ, ಪಟ್ಟಣ, ತಾಲೂಕು, ನಗರಗಳಲ್ಲಿ ವಯೋಮಿತಿ ಸಹಿತ ಕೋವಿಡ್ ಪ್ರಕರಣಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇದರಿಂದ 1ರಿಂದ 8ನೇ ತರಗತಿ ಶಾಲೆ ಆರಂಭಿಸಲು ಸೂಕ್ತ ಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.