ತಾಂತ್ರಿಕ, ವೈದ್ಯ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಲು ಸಿದ್ಧತೆ
Team Udayavani, Sep 25, 2017, 7:56 AM IST
ಬೆಂಗಳೂರು: ಪದವಿ ಕಾಲೇಜಿನ ವಿದ್ಯಾರ್ಥಿಗಳ ಜತೆಗೆ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ಡಿಪ್ಲೊಮಾ ಕೋರ್ಸ್‌ಗೆ ಸರ್ಕಾರಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಗಳಿಗೂ ಸಹ ಉಚಿತ ಲ್ಯಾಪ್‌ಟಾಪ್ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡುವ ಉದ್ದೇಶದಿಂದ 2017ರ ಬಜೆಟ್‌ನಲ್ಲಿ 225 ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದೆ. ಆದರೆ, ಆರಂಭದಲ್ಲಿ ಈ ಯೋಜನೆಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಮಾತ್ರ ಮೀಸಲಿಟ್ಟಿದ್ದರು. ವಿದ್ಯಾರ್ಥಿಗಳಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಯೋಜನೆ ವಿಸ್ತರಿಸಲಾಯಿತು. ಆದರೆ, ಖಾಸಗಿ ಕೋಟಾದಡಿ ಎಂಜನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳು ಸೇರಿ ಕಾನೂನು ಪದವಿ, ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಈ ಯೋಜನೆಯಿಂದ ಹೊರಗಿಟ್ಟಿದ್ದಾರೆ.
ನಿಯಮ ಸಡಿಲಿಕೆ: ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ವರಮಾನ 2.50 ಲಕ್ಷ ರೂ. ಇದ್ದರೆ ಮಾತ್ರ ಲ್ಯಾಪ್‌ಟಾಪ್ ಪಡೆಯಲು ಸಾಧ್ಯ. ಈ ಮಿತಿಯನ್ನು ಹೆಚ್ಚಿಸುವ ಚಿಂತನೆ ಸರ್ಕಾರದ ಹಂತದಲ್ಲಿ ನಡೆಯುತ್ತಿದೆ. 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಸಲು ಬೇಕಾದ ಚರ್ಚೆ ಮತ್ತು ಅದರಿಂದ ಆಗಬಹುದಾದ ಆರ್ಥಿಕ ಹೊರೆಯ ಲೆಕ್ಕಾಚಾರ ಆರಂಭವಾಗಿದೆ. ಒಂದು ವೇಳೆ ವಾರ್ಷಿಕ ಆದಾಯದ ಮಿತಿ 2.50 ಲಕ್ಷದಿಂದ 6 ಲಕ್ಷಕ್ಕೆ ಏರಿಕೆಯಾದರೆ ಶೇ.10ರಷ್ಟು ಹೆಚ್ಚು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಸಿಗಲಿದೆ. ತಾಂತ್ರಿಕ ಕೋರ್ಸ್‌ನ ವಿದ್ಯಾರ್ಥಿಗಳ ಹಾಗೂ ಸಾಮಾನ್ಯ ಪದವಿ ಕೋರ್ಸ್‌ನ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಮಾದರಿ ವಿಭಿನ್ನವಾಗಿದೆ.
ವಿದ್ಯಾರ್ಥಿಗಳಿಂದ ಬೇಡಿಕೆ: ಕಾನೂನು ಪದವಿ, ಭಾರತೀಯ ವೈದ್ಯಪದ್ಧತಿಯ ಕೋರ್ಸ್ ಹಾಗೂ ಕೃಷಿ ವಿಜ್ಞಾನ ಮತ್ತು ಪಶುಸಂಗೋಪನೆ ಕೋರ್ಸ್ ವಿದ್ಯಾರ್ಥಿಗಳು ನಮಗೂ ಲ್ಯಾಪ್‌ಟಾಪ್ ನೀಡಬೇಕು. ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಿ, ನಮಗೆ ಲ್ಯಾಪ್‌ಟಾಪ್ ಭಾಗ್ಯ ಕಲ್ಪಿಸದಿರುವುದು ಅನ್ಯಾಯ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.