ಬಿಬಿಎಂಪಿ ಮೀಸಲಾತಿ ಸೇರಿ ಮೂರು ವಿಧೇಯಕಗಳ ಮಂಡನೆ
Team Udayavani, Sep 15, 2022, 10:15 PM IST
ಬೆಂಗಳೂರು: ಹಿಂದುಳಿದ ವರ್ಗದವರಿಗೆ ಮೀಸಲು ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ಮಸೂದೆ -2022, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಮಸೂದೆ ಸಹಿತ ಒಟ್ಟು ಮೂರು ಮಸೂದೆಗಳನ್ನು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ಮಂಡಿಸಿದರು.
ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನವನ್ನು ಪಾಲಿಸಲು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಉಪಬಂಧಿಸಲಾದಂತೆ ಬಿಬಿಎಂಪಿಯಲ್ಲಿ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳು, ಇತರೆ ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ಮೀಸಲು ಕಲ್ಪಿಸಲು ಶೇ.50 ಮೀರದಂತೆ ಮೀಸಲಾತಿ ನಿಗದಿಪಡಿಸಲು ವಿಧೇಯಕ ಮಂಡಿಸಲಾಗಿದೆ. ಬಿಬಿಎಂಪಿ ಅಧಿನಿಯಮ 2020ರ 7ನೇ ಮತ್ತ 8ನೇ ಪ್ರಕರಣಕ್ಕೆ ತಿದ್ದುಪಡಿ ಪ್ರಸ್ತಾಪ ಮಾಡಲಾಗಿದೆ.
2022ರ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ(ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಪ್ರಕರಣ 7ರ ಉಪಪ್ರಕರಣ 2ರಡಿಯಲ್ಲಿ ಪರವಾನಗಿ ಶುಲ್ಕ ಅಥವಾ ಅರ್ಜಿ ಶುಲ್ಕ ಅಥವಾ ಬೇರೆ ಯಾವುದಾದರೂ ಹೆಸರಿನಿಂದ ಕರೆಯಲ್ಪಡುವ ಆಲ್ಕೋಹಾಲ…ಯುಕ್ತ ಮದ್ಯದ ಪರವಾನಗಿ ನೀಡುವಿಕೆ ಬಗ್ಗೆಯೂ ಇರಲಿದೆ. 2017ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಸರಕುಗಳ ಪೂರೈಕೆಯಲ್ಲಿ ಅಥವಾ ಸೇವೆಗಳ ಪೂರೈಕೆಯೂ ಅಲ್ಲ ಎಂದು ಪರಿಗಣಿಸಲು ವಿಧೇಯಕವನ್ನು ಮಂಡಿಸಲಾಗಿದೆ. ಈ ಅವಧಿಯಲ್ಲಿ ಸಂಗ್ರಹಿಸಲಾದ ಹಾಗೂ ಸಂಗ್ರಹಿಸಬಾರದಾಗಿದ್ದ ತೆರಿಗೆಯನ್ನು ಪಾವತಿಸದಿರಲು ಈ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡುವ 2022ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.