ಮೈಸೂರು ದಸರಾ ಉದ್ಘಾಟನೆ ಮಾಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು
Team Udayavani, Sep 10, 2022, 7:47 PM IST
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಕ್ಷಣಗಣನೇ ಆರಂಭವಾಗಿದ್ದು, ಈ ಬಾರಿ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಈ ಬಾರಿ ಮೈಸೂರು ದಸರಾ ಉತ್ಸವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಈ ಬಾರಿ ಮೈಸೂರು ದರಸಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5 ವರೆಗೆ ನಡೆಯಲಿದೆ. ಪ್ರತಿಷ್ಠಿತ ಮೈಸೂರು ದಸರಾಗೆ ಸರ್ಕಾರ ಈಗಾಗಲೇ ಹಲವು ಸುತ್ತಿನ ಪೂರ್ವಭಾವಿ ಸಭೆ ನಡೆಸಿದೆ. ಮೈಸೂರು ಉದ್ಘಾಟನೆಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ 2022ರ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ಈಗಾಗಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ನಾಯಕರನ್ನೊಳಗೊಂಡ ಸಮಿತಿ ಹಲವು ಸುತ್ತಿನ ಸಭೆ ನಡೆಸಿದೆ. ಕೊರೋನಾ ಕಾರಣ 2021ರಲ್ಲಿ ಸರಳ ದಸರಾ ಆಚರಿಸಲಾಗಿತ್ತು. 2021ರ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಉದ್ಘಾಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.