ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
Team Udayavani, Jun 13, 2022, 1:16 PM IST
ಬೆಂಗಳೂರು: ರಾಜ್ಯದ ಎರಡು ದಿನದ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರದ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಅವರು ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಆಯೋಜಿಸಲಾಗಿರುವ ರಾಷ್ಟ್ರೀಯ ಮಿಲಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭ ಹಾಗೂ ಕನಕಪುರ ರಸ್ತೆಯ ಸಮೀಪದಲ್ಲಿರುವ ವಸಂತಪುರದ ವೈಕುಂಠ ಬೆಟ್ಟದಲ್ಲಿ ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘ (ಇಸ್ಕಾನ್) ನೂತನವಾಗಿ ನಿರ್ಮಿಸಿರುವ ರಾಜಾಧಿರಾಜ ಶ್ರೀ ಗೋವಿಂದ ದೇವಾಲಯವನ್ನು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ.
ಇದನ್ನೂ ಓದಿ:ಪ್ರಧಾನಿ ಮೋದಿ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ, ಇದಕ್ಕೆಲ್ಲಾ ನಾವು ಬಗ್ಗಲ್ಲ: ಸಿದ್ದರಾಮಯ್ಯ
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಕಾರ್ಯದರ್ಶಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹಾಗೂ ಇತರ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.