ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ
ದೇಶದಲ್ಲಿ ನ್ಯಾಯಾಂಗ ನಿಂದನೆ, ಪ್ರಜಾಪ್ರಭುತ್ವಕ್ಕೆ ಮಾರಕ ಬೆಳವಣಿಗೆಗಳು ಆಗುತ್ತಿವೆ
Team Udayavani, Jul 3, 2022, 2:05 PM IST
ಬೆಂಗಳೂರು : ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ (ದ್ರೌಪದಿ ಮುರ್ಮು) ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ.ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಭಾನುವಾರ ಹೇಳಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ಪರಿಪಾಲಿಸಲಿ.ದೇಶದಲ್ಲಿ ಕೋಮು ಧ್ರುವೀಕರಣ ಆಗುತ್ತಿರುವುದನ್ನು ತಡೆಯುವ ಕೆಲಸವಾಗಬೇಕಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ತಡೆಯುವ ಬಗ್ಗೆ ತಮ್ಮ ನಿಲುವು ಪ್ರಕಟಿಸಲಿ ಎಂದು ಸವಾಲು ಹಾಕಿದರು.
ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಬಿಜೆಪಿಯ ಮಾಜಿ ವಕ್ತಾರೆಯ ಬಗ್ಗೆ ತನ್ನ ಅಭಿಪ್ರಾಯ ಹೇಳಿದೆ. ನ್ಯಾಯಾಂಗ ಸಂವಿಧಾನಕ್ಕೆ ಉತ್ತರ ಕೊಡುತ್ತದೆ ರಾಜಕಿಉಯ ಪಕ್ಷಗಳಿಗೆ ಅಲ್ಲ ಅಂತ.ಹೇಳಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರೆ, ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪ್ರಕಟಣೆಗಳು ಬರುತ್ತಿರುವುದು ದೇಶದ ದೌರ್ಭಾಗ್ಯ. ರಾಮಮಂದಿರ ತೀರ್ಪು ಮಂದಾಗ ಇಡೀ ದೇಶವೇ ಮೌನವಾಗಿ ಸ್ವಾಗತಿಸಿದೆ. ಈಗ ಅವರ ವಿರುದ್ಧ ತೀರ್ಪು ಬಂದಾಗ ನ್ಯಾಯಾಂಗ ನಿಂದಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡೆದುಕೊಳ್ಳುವ ಕೆಲಸ ಮಾಡುತ್ತಿದೆ. ಇಡಿ, ಸಿಬಿಐ ಗಳ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ.ಪ್ರತಿಪಕ್ಷಗಳ ಗೌರವಾನ್ವಿತ ನಾಯಕರನ್ನು ಅವಮಾನ ಮಾಡುವ ದೃಷ್ಟಿಯಿಂದ ಇಡಿ ವಿಚಾರಣೆಗೆ ಕರೆಯಲಾಗುತ್ತಿದೆ.ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ, ಮಧ್ಯಪ್ರದೇಶ, ಕರ್ನಾಟಕ, ರಾಜ್ಯಗಳಲ್ಲಿ ಆಗಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದರು.
ದುರ್ದೈವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.