ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ: ಜೈಶಂಕರ್
Team Udayavani, Aug 13, 2022, 2:58 PM IST
ಬೆಂಗಳೂರು: 40 ವರ್ಷಗಳ ಹಿಂದೆ ನಾನು ವಿದೇಶಾಂಗ ಸೇವೆಗೆ ಸೇರಿಕೊಂಡಾಗ ಜಾಗತಿಕ ಮಟ್ಟದಲ್ಲಿ ಭಾರತದ ದನಿಯೇ ಇರಲಿಲ್ಲ. ಆದರೆ ಪ್ರಧಾನಿ ಮೋದಿಯವರ ದಕ್ಷ ನಾಯಕತ್ವದಿಂದಾಗಿ ಈಗ ನಮ್ಮ ದನಿಗೆ ಅಭೂತಪೂರ್ವ ಬೆಲೆ ಬಂದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದರು.
ರಾಮನಗರದ ಜೈನ್ ವಿವಿ ಆವರಣದಲ್ಲಿ ಶನಿವಾರ ನಡೆದ ಹರ್ ಘರ್ ತಿರಂಗಾ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ವಿದೇಶಾಂಗ ನೀತಿಯು ದೇಶದ ಜನರ ದಿನನಿತ್ಯದ ಬದುಕಿನ ಮೇಲೆ ಅಪಾರ ಪರಿಣಾಮ ಬೀರುತ್ತದೆ. ಇದರಲ್ಲಿ ಭಾರತೀಯರ ಹಿತಾಸಕ್ತಿ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ನಾವು ತಾಳುವ ನಿಲುವು ನಿರ್ಣಾಯಕ ಪಾತ್ರ ವಹಿಸುತ್ತವೆ. ಎಂಟು ವರ್ಷಗಳಿಂದ ಈಚೆಗೆ ನಮ್ಮ ಯೋಗ, ಆಹಾರ, ಅಧ್ಯಾತ್ಮ, ಸಂಸ್ಕೃತಿ ಹಾಗೂ ಪರಂಪರೆಗಳಿಗೆ ವಿಶ್ವ ಮಟ್ಟದಲ್ಲಿ ಅಪಾರ ಗೌರವ ಪ್ರಾಪ್ತಿಯಾಗಿದೆ ಎಂದು ಅವರು ಹೇಳಿದರು.
ಮೋದಿ ಅವರ ನಾಯಕತ್ವವು ಜಗತ್ತಿಗೆ ಗೊತ್ತಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಜಗತ್ತಿನ ನಾನಾ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 70 ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ. ಹಾಗೆಯೇ ವಿದೇಶಗಳಲ್ಲಿ ಓದುತ್ತಿರುವ 12 ಲಕ್ಷ ಭಾರತೀಯ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವುದು ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.
ಪರಸ್ಪರ ಬೆಸೆದುಕೊಂಡಿರುವ ಜಗತ್ತಿನಲ್ಲಿ ವಿದೇಶಾಂಗ ಸಚಿವರು ದೇಶದ ಹೂಡಿಕೆ, ತಂತ್ರಜ್ಞಾನ, ಮಧುರ ಬಾಂಧವ್ಯ, ಸಹಭಾಗಿತ್ವ, ಸಹಕಾರ ಇತ್ಯಾದಿಗಳನ್ನು ಗಮನಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾದ್ದು ಬಹಳ ಮುಖ್ಯ. ಉಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ ನಾವು ಕಡಿಮೆ ಬೆಲೆಗೆ ತೈಲೋತ್ಪನ್ನಗಳನ್ನು ಪಡೆದು ಕೊಂಡಿರುವುದು ಇದಕ್ಕೆ ಸೂಕ್ತ ನಿದರ್ಶನವಾಗಿದೆ ಎಂದು ಜೈಶಂಕರ್ ನುಡಿದರು.
ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಣವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದು ಅವರು ಬಣ್ಣಿಸಿದರು.
ಇದನ್ನೂ ಓದಿ:ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ 19 ಸೋಂಕು, ಐಸೋಲೇಶನ್
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ರಾಮನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಂಗವಾಗಿ 50 ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ ಎಂದರು.
ಮೋದಿ ಅವರ ನಾಯಕತ್ವದಡಿ ರಾಜ್ಯದಲ್ಲಿ ಎನ್ಇಪಿ ಜಾರಿಯಾಗುತ್ತಿದೆ. ಗುಣಮಟ್ಟದ ಶಿಕ್ಷಣ ನಮ್ಮಲ್ಲಿ ಇದ್ದು, ಉಚಿತವಾಗಿ ಅತ್ಯುತ್ತಮ ಕೋರ್ಸುಗಳನ್ನು ಕಡ್ಡಾಯವಾಗಿ ಕಲಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜೈಶಂಕರ್ ಅವರಂತಹ ಪ್ರತಿಭಾವಂತರು ವಿದೇಶಾಂಗ ಸಚಿವರಾಗಿರುವುದು ದೇಶದ ಸುದೈವವಾಗಿದೆ. ಇಂತಹ ಸಮರ್ಥರಿಂದ ಭಾರತದ ದಿಕ್ಕುದೆಸೆಯೇ ಬದಲಾಗುತ್ತಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಎಸ್ಪಿ ಸಂತೋಷ್ ಬಾಬು, ಎಂ ಎಲ್ ಸಿ ದೇವೇಗೌಡ, ಜೈನ್ ವಿವಿ ಸ್ಥಾಪಕ ಚೆನ್ ರಾಜ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.