ಸರಕು ಸಾಗಣಾ ವಾಹನಗಳಲ್ಲಿ ಶಾಲಾ ಮಕ್ಕಳ ಪ್ರಯಾಣ ತಡೆಗಟ್ಟಿ


Team Udayavani, May 1, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಸರಕು ಮತ್ತು ನಿರ್ಮಾಣ ಸಾಮಗ್ರಿಗಳ ಸಾಗಣಾ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಸೂಚನೆ ನೀಡಿದ್ದಾರೆ.

ಈ ಕುರಿತು ಮಂಗಳವಾರ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಅವರು, ಅಪಾಯಕಾರಿ ಮತ್ತು ಕಾನೂನು ಬಾಹಿರವಾದ ಇಂತಹ ಸಾರಿಗೆ ವ್ಯವಸ್ಥೆಯನ್ನು ಕೂಡಲೇ ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು.

ಶಾಲಾ ಮಕ್ಕಳು, ಕೂಲಿ ಕಾರ್ಮಿಕರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಕಾನೂನು ಬಾಹಿರವಾಗಿ ಹಾಗೂ ಅಪಾಯಕಾರಿ ರೀತಿಯಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಿನ್ನೆಲೆಯಲ್ಲಿ ಸಭೆ ನಡೆಸಿ ಮುಖ್ಯ ಕಾರ್ಯದರ್ಶಿಯವರು ಈ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳು ನಿಯಮ ಬಾಹಿರ ಮತ್ತು ಅಪಾಯಕಾರಿ ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಮೇ 20ರೊಳಗೆ ಕ್ರಿಯಾ ಯೋಜನೆ ರೂಪಿಸಿ, ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಹಾಗೂ ಸಂಬಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಯಾವ ಭಾಗದಲ್ಲಿ, ಯಾವ ಕ್ಷೇತ್ರದಲ್ಲಿ ಅಥವಾ ಯಾವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಾರಿಗೆ ಸೌಲಭ್ಯದ ಕೊರತೆ ಇದೆ ಎಂಬುದನ್ನು ಜಿಲ್ಲಾ ಸಾರಿಗೆ ಅಧಿಕಾರಿಗಳು ತಮ್ಮ ಇಲಾಖಾ ಸಿಬ್ಬಂದಿ ಮೂಲಕ ಗುರುತಿಸಿ, ಅಂತಹ ಭಾಗದಲ್ಲಿ ಸುರಕ್ಷಿತವಾದ ಸಾರಿಗೆ ವ್ಯವಸ್ಥೆಯನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳು ರಾಜ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರಿಗೆ ಬೇಡಿಕೆ ಸಲ್ಲಿಸುವಂತೆ ಆದೇಶಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದ ಇತರ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯ ಸಂಯೋಜನೆ ಮತ್ತು ಸಹಕಾರದೊಂದಿಗೆ ನಿಯಮಬಾಹಿರ ಸಾರಿಗೆಯನ್ನು ಸಂಪೂರ್ಣವಾಗಿ ತಡೆಯಲು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಯಮಿತವಾಗಿ ಮತ್ತು ಕ್ರಮಬದ್ಧವಾಗಿ ಕಾರ್ಯ ನಿರ್ವಹಿಸುವ ಕುರಿತು ಜಿಲ್ಲಾಧಿಕಾರಿಗಳು, ರಸ್ತೆ ಸುರಕ್ಷತೆ ಸಮಿತಿ ಹಾಗೂ ಅಧ್ಯಕ್ಷರು, ಪ್ರಾದೇಶಿಕ ರಸ್ತೆ ಪ್ರಾಧಿಕಾರದಿಂದ ಈವರೆಗೆ ತೆಗೆದುಕೊಂಡ ಕ್ರಮಗಳನ್ನು ಸರ್ಕಾರದ ಗಮನಕ್ಕೆ ತರುವಂತೆ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯ ಯಾವ ಪ್ರದೇಶದಲ್ಲಿ ಸಿದ್ಧ ಉಡುಪು ಕಾರ್ಮಿಕರು ಹೆಚ್ಚಾಗಿರುತ್ತಾರೋ ಅಂತಹ ಪ್ರದೇಶಗಳಲ್ಲಿ ಅವರ ಸುರಕ್ಷಿತ ಮತ್ತು ಕೈಗೆಟುಕುವಂತಹ ಸಾಗಾಣಿಕೆಗಾಗಿ ಕಾರ್ಮಿಕ ಇಲಾಖೆಯ ಸಂಯೋಜನೆಯೊಂದಿಗೆ ವಿಶೇಷ ಯೋಜನೆಗಳನ್ನು ರೂಪಿಸುವತ್ತ ಕ್ರಮ ವಹಿಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳಿಗೆ ಸೂಚಿಸಬೇಕು. ಸುರಕ್ಷತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪಾಲುದಾರಿಕ ಇಲಾಖೆಗಳಾದ ಸಾರಿಗೆ, ಕಾರ್ಮಿಕ, ಶಿಕ್ಷಣ ಒಳಾಡಳಿತ ಇಲಾಖೆಗಳು, ಆಯಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿಗಳ ಸಹಭಾಗಿತ್ವದೊಂದಿಗೆ ಯೋಜನೆಯನ್ನು ರೂಪಿಸುವಂತೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರಿದ ಎಲ್ಲಾ ಸಾರಿಗೆ ವಾಹನಗಳ ಹಿಂಬದಿಯಲ್ಲಿ, ಸರಕು ಸಾಗಣಾ ವಾಹನಗಳಲ್ಲಿ ಪ್ರಯಾಣಿಸುವುದು ಕಾನೂನು ಬಾಹಿರ ಎಂಬ ಸಂದೇಶ ಹೊತ್ತ ಫ‌ಲಕಗಳನ್ನು ಅಳವಡಿಸುವಂತೆ ಸೂಚಿಸಿದರು.

ರಾಜ್ಯದ ಎಲ್ಲಾ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ಹದಿನೈದು ದಿನಗಳಿಗೊಮ್ಮೆ ಉಸ್ತುವಾರಿ ಸಭೆಗಳನ್ನು ನಡೆಸಬೇಕು ಹಾಗೂ ಅದರ ವರದಿಗಳನ್ನು ಪ್ರತಿ ತಿಂಗಳು ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರು ಹಾಗೂ ಸಂಬಂಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗೆ ಸಲ್ಲಿಸುವಂತೆ ಕ್ರಮ ವಹಿಸಲು ತಿಳಿಸಿದರು.

ಸರಕು ಸಾಗಣೆ ವಾಹನಗಳಲ್ಲಿ ಅಪಾಯಕಾರಿ ರೀತಿಯಲ್ಲಿ ಶಾಲಾ ಮಕ್ಕಳು ಸೇರಿ ಸಾರ್ವಜನಿಕರನ್ನು ಕರೆದೊಯ್ಯುವುದು ಕಂಡು ಬಂದಲ್ಲಿ, ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಂಡು ಕಾನೂನು ರೀತಿ ದಂಡ ವಿಧಿಸುವುದರ ಜೊತೆಗೆ ವಾಹನದ ನೋಂದಣಿ ಪ್ರಮಾಣ ಪತ್ರ ಹಾಗೂ ಪರವಾನಗಿಯನ್ನು ರದ್ದುಪಡಿಸಲು ಕ್ರಮ ವಹಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಿದರು. ಅಲ್ಲದೆ, ಅಂತಹ ವಾಹನಗಳ ಮಾಲಿಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿಕೊಳ್ಳುವಂತೆ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದರು.

ಸಾರಿಗೆ ಸಂಸ್ಥೆಗೆ ಸೂಚನೆ: ಜಿಲ್ಲೆಯ ಯಾವ ಭಾಗದ ಶಾಲೆಗಳಲ್ಲಿ ಶಾಲಾ ಮಕ್ಕಳು ಹೋಗಿ ಬರಲು ಸಾರಿಗೆ ವ್ಯವಸ್ಥೆ ಇಲ್ಲ ಎಂಬುದನ್ನು ಗುರುತಿಸಲು ಆಯಾ ಜಿಲ್ಲಾ ಶಿಕ್ಷಣ ಇಲಾಖಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅಂತಹ ಶಾಲಾ ಮಕ್ಕಳಿಗೆ ಸೂಕ್ತ ಮತ್ತು ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವತ್ತ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಪ್ರಸ್ತುತ ಕಾರ್ಮಿಕರಿಗೆ ವಿತರಿಸಲಾಗುತ್ತಿರುವ ಬಸ್‌ ಪಾಸುಗಳನ್ನು ರಾಜ್ಯಾದ್ಯಂತ ಎಲ್ಲಾ ಕಾರ್ಮಿಕರಿಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ಪಾಲಿಕೆ ಸಿಬ್ಬಂದಿ, ವಿಶೇಷವಾಗಿ, ಪೌರ ಕಾರ್ಮಿಕರು ಪ್ರಯಾಣಿಸುವುದನ್ನು ಸಂಪೂರ್ಣವಾಗಿ ತಡೆಗಟ್ಟಲು ಬಿಬಿಎಂಪಿಯಿಂದ ಪ್ರತ್ಯೇಕವಾದ ಕ್ರಿಯಾ ಯೋಜನೆಯನ್ನು ರೂಪಿಸಿ, ಹೈಕೋರ್ಟ್‌ಗೆ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಸವರಾಜು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌, ಸಾರಿಗೆ ಆಯುಕ್ತ ವಿ.ಪಿ.ಇಕ್ಕೇರಿ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಟಿ ಸುನೀಲ… ಕುಮಾರ್‌, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.