ಅಕ್ರಮ-ಸಕ್ರಮ ತಡೆ ತೆರವಿಗಾಗಿ ಕಾನೂನು ತಜ್ಞರಿಗೆ ಸರ್ಕಾರ ಮೊರೆ
Team Udayavani, Jan 15, 2017, 3:45 AM IST
ಬೆಂಗಳೂರು: ನಗರ ಮತ್ತು ಪಟ್ಟಣ ಪ್ರದೇಶಗಳ ಅಕ್ರಮ- ಸಕ್ರಮ ಯೋಜನೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿರುವುದರಿಂದ ಮುಂದಿನ ಮಾರ್ಗೋಪಾಯಗಳ ಬಗ್ಗೆ ರಾಜ್ಯ ಸರ್ಕಾರ ಕಾನೂನು ತಜ್ಞರ ಮೊರೆ ಹೋಗಿದೆ.
ಸುಪ್ರೀಂಕೋರ್ಟ್‌ನಲ್ಲಿ ತಡೆಯಾಜ್ಞೆ ತೆರವು ಕೋರಿ ಅರ್ಜಿ ಸಲ್ಲಿಸುವುದು ಸೇರಿದಂತೆ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಾನೂನು ತಜ್ಞರಿಂದ ಸಲಹೆ ಪಡೆದು ಮುಂದುವರಿಯಲು ತೀರ್ಮಾನಿಸಿದೆ.
ರಿಯಲ್ ಎಸ್ಟೇಟ್ ಮಾμಯಾ ಹಾಗೂ ಕಾನೂನು ಉಲ್ಲಂಘನೆ ಮಾಡಿರುವವರ ರಕ್ಷಣೆಗೆ ತಂದಿರುವ ಕಾನೂನು “ಅಕ್ರಮ-ಸಕ್ರಮ’ ಎಂಬುದು ಸುಪ್ರೀಂಕೋರ್ಟ್‌ನಲ್ಲಿ ತಕರಾರು ಸಲ್ಲಿಸಿರುವ ನಮ್ಮ ಬೆಂಗಳೂರು ಫೌಂಡೇಶನ್ ವಾದ.
ಅಕ್ರಮ-ಸಕ್ರಮ ಬಡ ಹಾಗೂ ಮಧ್ಯಮ ವರ್ಗದವರಿಗಾಗಿ ರೂಪಿಸಿರುವ ಯೋಜನೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಇದೀಗ ಪ್ರತಿಪಾದನೆ ಮಾಡಬೇಕಿದೆ.
ಈ ಹಂತದಲ್ಲಿ ಕಾನೂನು ಇಲಾಖೆ ಹಾಗೂ ರಾಜ್ಯ ಅಡ್ವೋಕೇಟ್ ಜನರಲ್ ಅವರಿಂದಲೂ ಅಭಿಪ್ರಾಯ ಪಡೆಯಲು ಸರ್ಕಾರ ನಿರ್ಧರಿಸಿದೆ. ಸುಪ್ರೀಂಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ಅಕ್ರಮ-ಸಕ್ರಮ ಅಧಿಸೂಚನೆಯನ್ನು ಕೂಡ ತಡೆ
ಹಿಡಿಯಲಾಗಿದ್ದು, ನ್ಯಾಯಾಲಯದ ಮುಂದಿನ ಆದೇಶ ನೋಡಿ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ-ಸಕ್ರಮ ಕುರಿತು ರಾಜ್ಯ ಸರ್ಕಾರ 2015ರಲ್ಲಿ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಹೈಕೋರ್ಟ್ ಮೆಟ್ಟಿಲೇರಿತ್ತು. ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದರ ಬೆನ್ನಲ್ಲೇ
ರಾಜ್ಯ ಸರ್ಕಾರದ ವತಿಯಿಂದ ಬೇರೆ ಯಾವುದೇ ಅಡ್ಡಿ ಎದುರಾಗದಿರಲಿ ಎಂದು ಕೇವಿಯಟ್ ಸಹ ಸಲ್ಲಿಸಲಾಗಿತ್ತು.
ಆದರೆ, ಹೈಕೋರ್ಟ್ ಕ್ರಮ ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂಕೋರ್ಟ್ ಇದೀಗ ತಡೆಯಾಜ್ಞೆ ನೀಡಿದ್ದರಿಂದ ಅಕ್ರಮ-ಸಕ್ರಮ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಂಡಿದ್ದ ಸಿದ್ಧತೆಗಳು ಎರಡನೇ ಬಾರಿ ಸ್ಥಗಿತಗೊಂಡಂತಾಗಿದೆ. ಈ ಹಿಂದೆ ಒಮ್ಮೆ
ಅಕ್ರಮ- ಸಕ್ರಮ ಯೋಜನೆ ಜಾರಿಗೆ ನಿಯಮಾವಳಿ ರೂಪಿಸಿ ಅರ್ಜಿ ಸ್ವೀಕಾರ ಮತ್ತು ಶುಲ್ಕ ಸಹ ಸಂಗ್ರಹ ಮಾಡಿ ನಂತರ ವಾಪಸ್ ಮಾಡಲಾಗಿತ್ತು.
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಕ್ಷೆ ಉಲ್ಲಂ ಸಿ ನಿರ್ಮಿಸಿರುವ ವಸತಿ ಮತ್ತು ವಾಣಿಜ್ಯ ಕಟ್ಟಡ ಹಾಗೂ ಸಕ್ಷಮ
ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ರಚಿಸಲಾದ ಬಡಾವಣೆಗಳಲ್ಲಿನ ನಿವೇಶನ ಮತ್ತು ಕಟ್ಟಡಗಳನ್ನು ಸಕ್ರಮ ಮಾಡುವ ಸಲುವಾಗಿ “ಅಕ್ರಮ-ಸಕ್ರಮ’ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.