![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2023, 5:22 AM IST
ವಿಧಾನ ಪರಿಷತ್ತು: ಹಿಂದಿನ ಸರ್ಕಾರದ ಅವಧಿಯಲ್ಲಾದ ಯಾವುದೇ ಟೆಂಡರ್‌ಗಳನ್ನು ಸ್ಥಗಿತಗೊಳಿಸಿಲ್ಲ. ಇನ್ನೂ ಟೆಂಡರ್ ಆಗದೆ ಇರುವ ಕಾಮಗಾರಿಗಳನ್ನು ಮಾತ್ರ ನಿಲ್ಲಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಸೋಮವಾರ ನಿಯಮ 72ರಡಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಗೋವಿಂದರಾಜು, “ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲೇ ಹಿಂದಿನ ಅವಧಿಯಲ್ಲಿ ಟೆಂಡರ್ ಆಗಿದ್ದ ಆರು ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ’ ಎಂದು ಗಮನಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, “ಹಿಂದಿನ ಸರ್ಕಾರದ ಅವಧಿಯಲ್ಲಿ ಟೆಂಡರ್ ಪೂರ್ಣಗೊಂಡ ಯಾವ ಕಾಮಗಾರಿಗಳನ್ನೂ ಸ್ಥಗಿತಗೊಳಿಸಿಲ್ಲ. ಇನ್ನೂ ಟೆಂಡರ್ ಆಗದೆ ಉಳಿದಿರುವ ಯೋಜನೆಗಳನ್ನು ಮಾತ್ರ ತಡೆಹಿಡಿಯಲಾಗಿದೆ’ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಸತೀಶ್ ಜಾರಕಿಹೊಳಿ, “ಸಾಮಾನ್ಯವಾಗಿ ಅನುದಾನ ಮತ್ತು ಕಾಮಗಾರಿಗಳ ನಡುವಿನ ಅಂತರದಿಂದ ಕಾಮಗಾರಿ ಪೂರ್ಣಗೊಂಡ ನಂತರವೂ ಬಿಲ್ ಬಾಕಿ ಪಾವತಿ ಬಾಕಿ ಉಳಿಯುತ್ತಿದೆ.
ಉದಾಹರಣೆಗೆ ಸಾವಿರ ಕೋಟಿ ಅನುದಾನ ಇದ್ದರೆ, ಕಾಮಗಾರಿ ಮೂರು ಸಾವಿರ ಕೋಟಿ ಮೊತ್ತದ್ದಾಗಿರುತ್ತದೆ. ಈ ಅಂತರವೇ ಸಮಸ್ಯೆಗೆ ಕಾರಣವಾಗುತ್ತಿದೆ. ಮುಂಬರುವ ದಿನಗಳಲ್ಲಿ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಇನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳಿಗೆ 2023ರ ಮೇ ಅಂತ್ಯಕ್ಕೆ ಒಟ್ಟಾರೆ 8,506 ಕೋಟಿ ಮೊತ್ತದ ಬಿಲ್ ಪಾವತಿಗೆ ಬಾಕಿ ಇದೆ. 2023-24ನೇ ಸಾಲಿನ ಆಯವ್ಯಯದಲ್ಲಿ 9,111.20 ಕೋಟಿ ಅನುದಾನ ಒದಗಿಸಲಾಗಿದೆ. ಇದನ್ನು ಆಯಾ ವಲಯಗಳಲ್ಲಿ ಬಾಕಿ ಇರುವ ಬಿಲ್‌ಗಳನ್ನು ಆಧರಿಸಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ ಅವರು, ಕೋಲಾರದಲ್ಲಿ ವಿಭಾಗದಲ್ಲಿ 127 ಕೋಟಿ ಬಾಕಿ ಮೊತ್ತವನ್ನು ಪ್ರತಿ ತಿಂಗಳು ಹಂತ ಹಂತವಾಗಿ ತೀರುವಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ಯಾವೊಂದು ಕಾಮಗಾರಿ ಕೈಗೆತ್ತಿಕೊಂಡಾದ ಬರೀ ಗುತ್ತಿಗೆದಾರರು ಬರುವುದಿಲ್ಲ. ಅದರೊಂದಿಗೆ ಕಬ್ಬಿಣ, ಬಿಟುಮಿನ್ ಸೇರಿದಂತೆ ವಿವಿಧ ಪೂರೈಕೆದಾರರು, ಏಜೆನ್ಸಿಗಳು ಕೂಡ ಬರುತ್ತವೆ. ಅವರೆಲ್ಲರಿಗೂ ಪಾವತಿಸಬೇಕಾಗುತ್ತದೆ. ಆದ್ದರಿಂದ ಸರ್ಕಾರ ಬಾಕಿ ಉಳಿಸಿಕೊಳ್ಳದೆ, ಕಾಲ ಕಾಲಕ್ಕೆ ಪಾವತಿ ಮಾಡಬೇಕು ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.