ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪ್ರಧಾನಿ ಮೆಚ್ಚುಗೆ: ಸಿಎಂ
Team Udayavani, Jun 21, 2022, 7:30 PM IST
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಅಭಿವೃದ್ಧಿ, ಜನಪರ ಕಾರ್ಯಕ್ರಮಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳವಾರ ತಮ್ಮ ಆರ್.ಟಿ.ನಗರ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸುಶಾಸನ ಮತ್ತು ಅಭಿವೃದ್ಧಿ ಪರ ಆಡಳಿತ ಮೆಚ್ಚಿಕೊಳ್ಳುವವರು. ಪ್ರಧಾನಿಯವರ ಮೆಚ್ಚುಗೆ ನನ್ನಲ್ಲಿ ಇನ್ನಷ್ಟು ಶಕ್ತಿಯನ್ನು ತುಂಬಿದೆ. ಈ ಮೆಚ್ಚುಗೆ ಸರ್ಕಾರ ಹೆಚ್ಚಿನ ದಕ್ಷತೆ ಹಾಗೂ ಬದ್ಧತೆಯಿಂದ ಕೆಲಸ ಮಾಡಲು ಪುಷ್ಟಿ ನೀಡಿದೆ ಎಂದರು.
ಪ್ರಧಾನಿ ಮೋದಿಯವರ ಯಶಸ್ವಿ ಕೋವಿಡ್ ನಿರ್ವಹಣೆ ಜನರಿಗೆ ನೆನಪಿದೆ :
ಪ್ರಧಾನಿಯವರ ರಾಜ್ಯ ಪ್ರವಾಸದ ಕುರಿತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯನವರು ಮಾಡುತ್ತಿರುವ ಟ್ವೀಟ್‌ಗಳ ಬಗ್ಗೆ ಪ್ರತಿಕ್ರಿಯಿಸಿ, ಇಡೀ ದೇಶಕ್ಕೆ ಬಂದೊದಗಿದ್ದ ಕರೋನಾ ಸಂಕಷ್ಟವನ್ನು ಯಶಸ್ವಿಯಾಗಿ ಪ್ರಧಾನಿ ಮೋದಿಯವರು ನಿರ್ವಹಿಸಿರುವುದನ್ನು ಇಡೀ ವಿಶ್ವವೇ ಕೊಂಡಾಡುತ್ತದೆ. ಕೊರೊನಾ ಸಂದರ್ಭದಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿಗಳನ್ನು ನೀಡಿದ್ದಾರೆ. ಕೋವಿಡ್ ನಿರ್ವಹಣೆ, ಔಷಧಿಗಳು, ಲಸಿಕೆಗಳು, ವೆಂಟಿಲೇಟರ್, ಆಕ್ಸಿಜನ್ ಉತ್ಪಾದಿಸುವ ಉಪಕರಣಗಳು ಕೇಂದ್ರದಿಂದ ನೀಡಿರುವುದು ಎಲ್ಲರಿಗೂ ತಿಳಿದಿದೆ. ಆದರೂ, ರಾಜಕೀಯವಾಗಿ ಮಾತನಾಡುವುದು ಸರಿಯಲ್ಲ. ಜನರಿಗೆ ಎಲ್ಲವೂ ನೆನಪಿದೆ. ಮೋದಿಯವರು ಕೋವಿಡ್ ಸಂದರ್ಭದಲ್ಲಿ ರಾಜ್ಯಕ್ಕೆ ಮಾಡಿರುವ ಸಹಾಯ, ಅವರ ಜನಪ್ರಿಯತೆಯನ್ನು ಕಂಡು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಪಂಚಮಸಾಲಿ ಸಮುದಾಯ ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಲಾಗುವುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಮುದಾಯದವರು, ಸಚಿವ ಸಿ.ಸಿ.ಪಾಟೀಲ್ ಮತ್ತು ಸ್ವಾಮೀಜಿಗಳು ನಾಳೆ(ಬುಧವಾರ) ಸಭೆ ನಡೆಸುವ ಸಾಧ್ಯತೆ ಇದೆ ಎಂದರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.