Surgery ಬಳಿಕ ಚೇತರಿಸಿಕೊಂಡಿರುವ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ..
Team Udayavani, Oct 22, 2023, 4:54 PM IST
ಬೆಂಗಳೂರು: ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊರೊನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (CABG) ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೇತರಿಸಿಕೊಳ್ಳುತ್ತಿದ್ದಾರೆ. ‘ಶೀಘ್ರದಲ್ಲೇ ಗುಣಮುಖರಾಗಿ ಜನರ ಸೇವೆಗೆ ಮರಳಲಿದ್ದೇನೆ ‘ ಎಂದು ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಿದರು.
“ನನಗೆ ಅಷ್ಟೈಶ್ವರ್ಯ ಒಲಿದ ಸಂಭ್ರಮ!!..ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿಯನ್ನು ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ” ಎಂದು ಬೊಮ್ಮಾಯಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.
63 ವರ್ಷದ ಬೊಮ್ಮಾಯಿ ಅವರ ಚೇತರಿಕೆ ಉತ್ತಮವಾಗಿದೆ. ಅವರು ಕೇವಲ ಒಂದೆರಡು ವಾರಗಳಲ್ಲಿ ಪೂರ್ಣ ಕಾರ್ಯವನ್ನು ಮರಳಿ ಆರಂಭಿಸುವ ನಿರೀಕ್ಷೆಯಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.