ಧರ್ಮಸ್ಥಳದಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
Team Udayavani, Oct 29, 2017, 11:11 AM IST
ಮಂಗಳೂರು/ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಪ್ರಧಾನಿ ಮೋದಿ ಅವರಿಗೆ ಕೇಂದ್ರ ಸಚಿವಡಿ.ವಿ. ಸದಾನಂದ ಗೌಡ ಅವರು ಶಾಲು ಹೊದಿಸಿ ಸ್ವಾಗತಿಸಿದರೆ, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಹಾರ ಹಾಕಿದರು. ಸಚಿವರಾಗದ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್ ,ಪೊಲೀಸ್ ಕಮೀಷನರ್ ಟಿ.ಆರ್.ಸುರೇಶ್ ಮತ್ತು ಕೆಲ ಬಿಜೆಪಿ ನಾಯಕರು ಉಪಸ್ಥಿತರಿದ್ದು ಆತ್ಮೀಯವಾಗಿ ಬರಮಾಡಿಕೊಂಡರು.
ವಿಮಾನ ನಿಲ್ದಾಣದಿಂದ ಐಎಎಫ್ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದು ವಿಶೇಷ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದ ಮೋದಿ ಅವರಿಗೆ ಧರ್ಮಸ್ಥಳದ ದೇಗುಲದ ಪ್ರವೇಶ ದ್ವಾರದಲ್ಲಿ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ,ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸ್ವಾಗತಿಸಿದರು.
ದೇವಾಲಯದ ಎದುರು ಕಾರಿನಲ್ಲಿ ಇಳಿಯುತ್ತಿದ್ದಂತೆ ಸಾರ್ವಜನಿಕರತ್ತ ಕೈ ಬೀಸಿದರು.
ದೇಗುಲದಲ್ಲಿ ಸುಮಾರು 20 ನಿಮಿಷ ಇದ್ದ ಪ್ರಧಾನಿ ರುದ್ರಾಭಿಷೇಕ ಸೇವೆ ಸಲ್ಲಿಸಿ ಮಂಜುನಾಥ ಸ್ವಾಮಿ, ಅಮ್ಮನವರು, ಮಹಾಗಣಪತಿ ಮತ್ತು ಅಣ್ಣಪ್ಪ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ದೇವಾಲಯದ ಎದುರು ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ವೇದ ಘೋಷಗಳೊಂದಿಗೆ ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು.
ದೇವಾಲಯ ಭೇಟಿ ಮುಗಿದ ತಕ್ಷಣ ಕಾರಿನಲ್ಲಿ ಉಜಿರೆಯತ್ತ ಪ್ರಯಾಣಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.