ಕರ್ನಾಟಕದಲ್ಲಿ ಕಾಂಗ್ರೆಸ್ ಹೋಗುವ ಕೌಂಟ್‌ಡೌನ್ ಶುರುವಾಗಿದೆ..
Team Udayavani, Feb 4, 2018, 5:02 PM IST
ಬೆಂಗಳೂರು : ನವ ಕರ್ನಾಟಕ ನಿರ್ಮಾಣದಲ್ಲಿ ಪರಿವರ್ತನೆ ಮಾಡಿ ಬಿಜೆಪಿ ಗೆಲ್ಲಿಸಿ ಇದು ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದ ಪರಿ..
ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾರತ್ ಮಾತಾ ಕೀ ಜೈ … ಎಂದು ಭಾಷಣ ಆರಂಭಿಸಿದ ಮೋದಿ .. ‘ಕರ್ನಾಟಕದ ನನ್ನ ಪ್ರೀತಿಯ ಬಂಧು ಭಗಿನಿಯರೆ ನಿಮಗೆಲ್ಲಾ ನನ್ನ ನಮಸ್ಕಾರಗಳು. ನಾಡಪ್ರಭು ಕೆಂಪೇಗೌಡ , ಮಹಾತ್ಮ ಬಸವೇಶ್ವರ , ಶರಣ ಮಾದಾರ ಚೆನ್ನಯ್ಯ, ವೀರ ರಾಣಿ ಕಿತ್ತೂರು ಚೆನ್ನಮ್ಮ, ಸಂಗೋಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶ್ವರಯ್ಯ ಅವರಂತಹ ಮಹಾನ್ ನಾಡು ಕರ್ನಾಟಕ. ನವ ಕರ್ನಾಟಕ ನಿರ್ಮಾಣದಲ್ಲಿ ಪರಿವರ್ತನೆ ಮಾಡಿ ಬಿಜೆಪಿ ಗೆಲ್ಲಿಸಿ’ ಎಂದು ಕನ್ನಡದಲ್ಲೇ ಮಾತನಾಡಿದರು.
ನೆರೆದಿದ್ದ ಸಾವಿರಾರು ಕಾರ್ಯಕರ್ತರು ಕನ್ನಡದ ಉದ್ದನೆಯ ಮಾತುಗಳನ್ನು ಕೇಳಿ ಇನ್ನಷ್ಟು ಘೋಷಣೆಗಳನ್ನು ಮೊಳಗಿಸಿದರು.
‘ನಾನು ನಾಲ್ಕು ಬದಿಯಲ್ಲಿ ನೋಡುತ್ತಿದ್ದೇನೆ, ಈ ಹಿಂದೆಯೂ ಅನೇಕ ಬಾರಿ ಬಂದಿದ್ದೇನೆ. ಇಂಥಹ ಸಮಾವೇಶ ನೋಡಿರಲಿಲ್ಲ. ಈ ಸಭೆ ನೋಡಿದಾಗ ಗೊತ್ತಾಗುತ್ತದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೋಗುವ ಕೌಂಟ್‌ಡೌನ್ ಶುರುವಾಗಿದೆ . ನಾವು ಕಾಂಗ್ರೆಸ್ ಮುಕ್ತ ಮಾಡಿಯೇ ಸಿದ್ಧ’ ಎಂದು ಗುಡುಗಿದರು.
ದೇಶದ ಬದಲು ಪಕ್ಷದ ಬಗ್ಗೆ ಯೋಚಿಸುವ ಕಾಂಗ್ರೆಸ್ ಸಂಸ್ಕೃತಿ ಇನ್ನು ಮುಂದೆ ದೇಶಕ್ಕೆ ಬೇಕಾಗಿಲ್ಲ.
ಶ್ರೀಮಂತರಿಗೆ ಎಲ್ಲಾ ಸೌಲಭ್ಯಗಳು ಸುಲಭವಾಗಿ ಸಿಗುತ್ತವೆ. ಆದರೆ ಬಡವರು ಜೀವನ ಪೂರ್ತಿ ಇದಕ್ಕಾಗಿ ಶ್ರಮಿಸಬೇಕಾಗುತ್ತದೆ.
ಕೇಂದ್ರ ಸರ್ಕಾರ ಕಳೆದ 3.5 ವರ್ಷಗಳಲ್ಲಿ ನೀಡಿದ ಅನುದಾನವನ್ನು ರಾಜ್ಯ ಸರ್ಕಾರ ನಿಮಗೆ ತಲುಪಿಸಿಲ್ಲ .ಅನುದಾನ ಬಳಕೆಯಾಗಿರುವ ಬಗ್ಗೆ ಯಾವುದಾದರೂ ಸಾಕ್ಷ್ಯ ಇದೆಯಾ ಎಂದರು.
ಅದೆಷ್ಟೋ ಜನರು ಜೀವನದಲ್ಲಿ ಬೆಳಕನ್ನೇ ಕಾಣದೆ ಹೋಗಿದ್ದಾರೆ. ಅಂತಹವರ ಜೀವನದಲ್ಲಿ ಬೆಳಕು ತುಂಬುವ ಕೆಲಸದಲ್ಲಿ ಸರ್ಕಾರ ನಿರತವಾಗಿದೆ ಎಂದರು.
ಮೊದಲ ಸರ್ಕಾರಗಳು ದೇಶದ ರೈತರಿಗೆ ಯೂರಿಯಾಗಾಗಿ ಲಾಠಿ ಏಟು ತಿನ್ನಬೇಕಾಗಿತ್ತು, ಪರದಾಡಬೇಕಾಗಿತ್ತು. ನಮ್ಮ ಸರ್ಕಾರ ರೈತರನ್ನು ಸಂಕಷ್ಟದಿಂದ ದೂರ ಮಾಡಲು ”ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನಾ” ಆರಂಭಿಸಿದೆವು. ”ಪ್ರಧಾನ್ ಮಂತ್ರಿ ಸಿಂಚಾಯಿ” ಯೋಜನೆ ತಂದೆವು. ರೈತರ ಅಭಿವೃದ್ಧಿಗಾಗಿ 1 ಲಕ್ಷ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದರು.
ಕರ್ನಾಟಕ ಹತ್ಯೆಗಳ ರಾಜ್ಯವಾಗುತ್ತಿದೆ.ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯಲಾಗುತ್ತಿದೆ. ಇದಕ್ಕೆ ಉತ್ತರ ಮತದಾನದ ಮೂಲಕ ನೀಡಬೇಕಾಗಿದೆ ಎಂದರು.
ಕರ್ನಾಟಕದಲ್ಲಿ ನಂಗಾ ನಾಚ್ ನಡೆಯುತ್ತಿದೆ. ಸ್ಟೀಲ್ ಬ್ರಿಡ್‌ಜ್ ಹೆಸರಿನಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಕೋಟ್ಯಂತರ ರೂಪಾಯಿ ನುಂಗಲು ಮುಂದಾಗಿದ್ದರು. ಬಿಜೆಪಿ ಹೋರಾಟ, ಬೆಂಗಳೂರಿಗರ ವಿರೋಧದಿಂದ ಇದು ನಿಂತಿತು ಎಂದರು.
ರಾಜ್ಯದ ಕಾಂಗ್ರೆಸ್ ಸರ್ಕಾರದ ಹಲವು ಸಚಿವರ ಮೇಲೆ ಗಂಭೀರ ಭ್ರಷ್ಟಾಚಾರ ಆರೋಪಗಳಿವೆ. ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಈ ಸರ್ಕಾರ ಶುರು ಮಾಡಿದೆ ಎಂದು ಕಿಡಿ ಕಾರಿದರು.
ಕರ್ನಾಟಕ ಹತ್ಯೆಗಳ ರಾಜ್ಯವಾಗುತ್ತಿದೆ.ಬಿಜೆಪಿ ಕಾರ್ಯಕರ್ತರನ್ನು ಹತ್ಯೆಗೈಯಲಾಗುತ್ತಿದೆ. ಇದಕ್ಕೆ ಉತ್ತರ ಮತದಾನದ ಮೂಲಕ ನೀಡಬೇಕಾಗಿದೆ.ಭ್ರಷ್ಟ ಸರ್ಕಾರವನ್ನು ಕಿತ್ತೂಗೆಯಿರಿ ಎಂದರು.
ದೇಶದ ಅಭಿವೃದ್ಧಿಗೆ ಕರ್ನಾಟಕದ ಕೊಡುಗೆ ದೊಡ್ಡದು. ಇಡೀ ದೇಶದ ಜನತೆ ಕರ್ನಾಟಕದ ಬಗ್ಗೆ ಗೌರವ ಹೊಂದಿದ್ದಾರೆ ಎಂದರು.
ಅಂಡರ್ 19 ವಿಶ್ವಕಪ್ ಗೆದ್ದಿದೆ. ಆ ಹುಡುಗರಿಗೆ ಕನ್ನಡಿಗ ರಾಹುಲ್ ದ್ರಾವಿಡ್ ತರಬೇತಿ ನೀಡಿದ್ದಾರೆ . ಅವರ ಕೊಡುಗೆ ಬಹಳ ದೊಡ್ಡದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.