ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
Team Udayavani, Oct 28, 2017, 9:28 AM IST
ಬೆಂಗಳೂರು/ಬೀದರ/ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ವಿವಿಧ
ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10.30ಕ್ಕೆ ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸುವ ಮೋದಿ, ಅಲ್ಲಿಂದ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮಂಜುನಾಥನ ದರ್ಶನ ಪಡೆದು, ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅ.28ರ ಮಧ್ಯಾಹ್ನ 2 ಗಂಟೆಯಿಂದ ಅ. 29ರ ಮಧ್ಯಾಹ್ನ 2 ಗಂಟೆಯ ತನಕ ಕ್ಷೇತ್ರದಲ್ಲಿ ಇತರ ಭಕ್ತ ರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಳಿಕ, ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಬಳಿಕ, ಬೆಂಗಳೂರಿಗೆ ಆಗಮಿಸುವ ಮೋದಿ, ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ವತಿಯಿಂದ ನಡೆಯಲಿರುವ ದಶಮ ಸೌಂದರ್ಯ ಲಹರಿ ಪಾರಾಯಣೋತ್ಸವ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವೇದಾಂತ ಭಾರತಿ ಸಂರಕ್ಷಕರಾದ ಶಂಕರ ಭಾರತೀ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಸೌಂದರ್ಯ ಲಹರಿ ಮಹಾ ಸಮರ್ಪಣೆ ನಡೆಯುತ್ತಿದೆ.
ರೈಲು ಮಾರ್ಗಕ್ಕೆ ಚಾಲನೆ: ಸಂಜೆ 5ಕ್ಕೆ ಬೀದರಗೆ ಆಗಮಿಸುವ ಪ್ರಧಾನಿ, ಹೈದ್ರಾಬಾದ್ ಕರ್ನಾಟಕದ ಮಹತ್ವದ ಯೋಜನೆಯಾಗಿರುವ ಬೀದರ-ಕಲಬುರಗಿ ಮಧ್ಯದ 110 ಕಿ.ಮೀ.ದೂರದ ರೈಲು ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ಈ ರೈಲು ಮಾರ್ಗ ಯೋಜನೆ ಜಾರಿಯಲ್ಲಿ ಶ್ರೇಯಸ್ಸು ಪಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಟಾಪಟಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.