Vishwa Karma ವಿಶ್ವಕರ್ಮರ ಸಾಂಪ್ರದಾಯಿಕ ಕೆಲಸಕ್ಕೆ ತಾಂತ್ರಿಕ ಬೆಂಬಲ: ಶೋಭಾ ಕರಂದ್ಲಾಜೆ
Team Udayavani, Sep 18, 2023, 5:59 PM IST
ಬೆಂಗಳೂರು: ದೇಶಾದ್ಯಂತ ವಿಶ್ವಕರ್ಮರು ಮಾಡುವ ಸಾಂಪ್ರದಾಯಿಕ ಕೆಲಸಗಳಿಗೆ ತಾಂತ್ರಿಕ ಬೆಂಬಲವನ್ನು ನೀಡುವುದು ಪ್ರಧಾನಿಯವರ ದೂರದೃಷ್ಟಿಯಾಗಿದ್ದು ವಿಶ್ವಕರ್ಮ ಜನಾಂಗದವರು ಯೋಜನೆಯ ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಎಂದು ತಿಳಿಸಿದರು.
ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ಜನರನ್ನು ಬೆಂಬಲಿಸುವ ಮತ್ತು ಕೌಶಲ್ಯಗೊಳಿಸುವ ಪ್ರಧಾನಮಂತ್ರಿಯವರ ಆಶಯದಿಂದ ಸ್ಫೂರ್ತಿ ಪಡೆದಿದೆ, ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸರ್ಕಾರವು 13,000 ಕೋಟಿ ರೂಗಳ ಸಂಪೂರ್ಣ ಧನಸಹಾಯ ನೀಡಲಿದೆ ಎಂದರು.
ಕುಶಲಕರ್ಮಿಗಳನ್ನು ಆರ್ಥಿಕವಾಗಿ ಬೆಂಬಲಿಸುವುದು ಮಾತ್ರವಲ್ಲದೆ ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯ, ಸಂಸ್ಕೃತಿ ಮತ್ತು ವೈವಿಧ್ಯಮಯ ಪರಂಪರೆಯನ್ನು ಜೀವಂತವಾಗಿರಿಸುವ ಹಾಗೂ ಪ್ರವರ್ಧಮಾನಕ್ಕೆ ತರುವ ಬಯಕೆಯೊಂದಿಗೆ ಈ ಉಪಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ, ಬಯೋಮೆಟ್ರಿಕ್ ಆಧಾರಿತ ಪಿಎಂ ವಿಶ್ವಕರ್ಮ ಪೋರ್ಟಲ್ ಬಳಸಿ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ವಿಶ್ವಕರ್ಮರು ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅವರಿಗೆ ಪಿಎಂ ವಿಶ್ವಕರ್ಮ ಪ್ರಮಾಣಪತ್ರ ಮತ್ತು ಗುರುತಿನ ಚೀಟಿ ನೀಡಲಾಗುವುದು. ಜೊತೆಗೆ, ಮೂಲ ಮತ್ತು ಸುಧಾರಿತ ತರಬೇತಿಯನ್ನು ಒಳಗೊಂಡ ಕೌಶಲ್ಯ ಉನ್ನತೀಕರಣ, 15,000 ರೂ.ಗಳ ಟೂಲ್‌ಕಿಟ್ ಪ್ರೋತ್ಸಾಹಧನ, ಮೊದಲ ಕಂತಿನಲ್ಲಿ 1 ಲಕ್ಷ ರೂ.ಗಳವರೆಗೆ ಸಾಲ ಬೆಂಬಲ ಹಾಗೂ ಎರಡನೇ ಕಂತಿನಲ್ಲಿ 2 ಲಕ್ಷ ರೂ.ಗಳವರೆಗೆ ಶೇ.5 ರ ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಡಿಜಿಟಲ್ ವಹಿವಾಟುಗಳಿಗೆ ಪ್ರೋತ್ಸಾಹ ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ನೀಡಲಾಗುವುದು ಎಂದರು.
ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿ ಮಂಗಳೂರು ಮತ್ತು ಹುಬ್ಬಳ್ಳಿಯ ಇತರ ಎರಡು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ವಾಸ್ತವಿಕವಾಗಿ ಪ್ರಾರಂಭಿಸಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಗೋಪಿನಾಥ ರೆಡ್ಡಿ, ಉದಯ ಗರುಡಾಚಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.