ಇಂದು ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರ
Team Udayavani, Nov 3, 2017, 6:25 AM IST
ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ. ಆರೋಗ್ಯ ಸೇವೆ ಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಜನತೆಗೆ ಆರೋಗ್ಯ ಸೇವೆಯಲ್ಲಿ ತೊಂದರೆಯಾಗದಂತೆ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ಅರೆವೈದ್ಯ ಸಿಬಂದಿ ಶುಕ್ರವಾರ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಜತೆಗೆ ಸರ ಕಾರಿ ವೈದ್ಯ ಕಾಲೇಜುಗಳ ಆಸ್ಪತ್ರೆ ಗಳಲ್ಲೂ ಎಲ್ಲ ವೈದ್ಯ, ಅರೆವೈದ್ಯ ಸಿಬಂದಿ ಕರ್ತವ್ಯದಲ್ಲಿದ್ದು, ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.