ಎನ್‌ಇಪಿ ಜಾರಿಗೆ ಖಾಸಗಿ ಶಾಲೆಗಳ ಸಲಹೆ ಮುಖ್ಯ: ಹೊರಟ್ಟಿ

Team Udayavani, Feb 26, 2022, 9:30 PM IST

ಎನ್‌ಇಪಿ ಜಾರಿಗೆ ಖಾಸಗಿ ಶಾಲೆಗಳ ಸಲಹೆ ಮುಖ್ಯ: ಹೊರಟ್ಟಿ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಸಂಬಂಧ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪಾತ್ರ ಮಹತ್ವದ್ದಾಗಿದೆ. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಶಾಲಾ ಶಿಕ್ಷಣದಲ್ಲಿ ಅಳವಡಿಸಿಕೊಳ್ಳಬಹುದಾದ ಸಲಹೆ-ಸೂಚನೆಗಳನ್ನು ನೀಡುವಂತೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಶಿಕ್ಷಕ ಮತ್ತು ಶಿಕ್ಷೇತರ ಸಿಬಂದಿ ಸಂಯೋಜನ ಸಮಿತಿಯು (ಕೆಪಿಎಂಟಿಸಿಸಿ) ಶನಿವಾರ ನಗರದಲ್ಲಿ ಆಯೋಜಿಸಿದ್ದ “ಎನ್‌ಇಪಿ-2020 ಮತ್ತು ಶಾಲಾ ಶಿಕ್ಷಣದ ನಿಯಂತ್ರಕ ವಾಸ್ತುಶಿಲ್ಪ’ ಎಂಬ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಎನ್‌ಇಪಿ ಜಾರಿಗೊಳಿಸುವುದು ಕಷ್ಟದ ಕೆಲಸ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎನ್‌ಇಪಿ ಜಾರಿಗೊಳಿಸುವುದಿಲ್ಲ ಎಂದು ತಿರಸ್ಕರಿಸಲಾಗಿದೆ. ಹೀಗಾಗಿ, ಎನ್‌ಇಪಿಯನ್ನು ಹೇಗೆ ಜಾರಿಗೊಳಿಸಬೇಕು? ಇದರಿಂದಾಗುವ ಪರಿಣಾಮಗಳೇನು, ಪರಿಹಾರಗಳೇನು ಎಂಬುದರ ಕುರಿತು ಸಲಹೆ-ಸೂಚನೆ ನೀಡುವಂತೆ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಮಾತನಾಡಿ, ರಾಜ್ಯ ಸರಕಾರವು ಖಾಸಗಿ ಶಾಲೆಗಳಿಗೆ ಯಾವುದೇ ಅನುದಾನ ನೀಡದಿದ್ದರೂ ಅಗ್ನಿ ಸುರಕ್ಷೆ, ಕಟ್ಟಡ ಸುರಕ್ಷೆ ಸಹಿತ ಹಲವು ವಿಷಯಗಳಲ್ಲಿ ತೊಂದರೆ ನೀಡುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರವು ಐಸಿಎಸ್‌ಇ ಮತ್ತು ಸಿಬಿಎಸ್‌ಇ ಮಂಡಳಿಗಳನ್ನು ಅನುಸರಿಸಬೇಕಿದೆ ಎಂದು ಹೇಳಿದರು.

ಎನ್‌ಇಪಿ ಕಾರ್ಯಪಡೆ ಅಧ್ಯಕ್ಷ ಮದನ್‌ ಗೋಪಾಲ್‌ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯು ಚಟುವಟಿಕೆ ಆಧಾರಿತ ಕಲಿಕೆಯಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಎನ್‌ಇಪಿ-2020 ಸಮಾವೇಶದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯು ಹೊಸ ನೀತಿಯಲ್ಲ. ಶಿಕ್ಷಣದಲ್ಲಿ ಇಲ್ಲದನ್ನು ಹೊಸದಾಗಿ ಅಳವಡಿಸಿಕೊಳ್ಳಲಾಗುತ್ತಿದೆ. 2022-23ನೇ ಶೈಕ್ಷಣಿಕ ವರ್ಷದಲ್ಲಿ 3ನೇ ವರ್ಷದ ಮಗು ಕಲಿಯಬೇಕಾದ ಶಿಕ್ಷಣವನ್ನು ಜಾರಿ ಮಾಡಲಾಗುತ್ತಿದೆ ಎಂದರು.

ಸಮಾವೇಶದಲ್ಲಿ ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ, ವಿಧಾನ ಪರಿಷತ್‌ ಸದಸ್ಯ ಕೆಪಿಎಂಟಿಸಿಸಿ ಸಮಿತಿ ಸಂಚಾಲಕ ಡಿ. ಶಶಿಕುಮಾರ್‌, ಸದಸ್ಯರಾದ ಎಂ.ಶ್ರೀನಿವಾಸ್‌, ಡಾ| ಅಮಿತ್‌ ಹಾಗೂ ವಿವಿಧ ರಾಜ್ಯಗಳ ಖಾಸಗಿ ಶಾಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.