ವಿಧಾನಸೌಧ ಈಗ ವ್ಯಾಪಾರ ಸೌಧ ಆಗಿದೆ: ಪ್ರಿಯಾಂಕ್ ಖರ್ಗೆ


Team Udayavani, Sep 18, 2022, 7:21 PM IST

ವಿಧಾನಸೌಧ ಈಗ ವ್ಯಾಪಾರ ಸೌಧ ಆಗಿದೆ: ಪ್ರಿಯಾಂಕ್ ಖರ್ಗೆ

ವಾಡಿ: ನೌಕರಿ ನೇಮಕಾತಿ ಪರೀಕ್ಷೆ ಉತ್ತೀರ್ಣ ಮಾಡಲು ಯುವಕರಿಂದ ಲಂಚ ಪಡೆಯುತ್ತಿರುವ ಬಿಜೆಪಿ ಸರ್ಕಾರ, ಕಾಮಗಾರಿಗಳ ಗುತ್ತಿಗೆ ನೀಡಲು ಶೇ.40 ಕಮಿಷನ್ ಕೇಳುತ್ತಿದೆ. ಎಲ್ಲಾ ರೀತಿಯ ಭ್ರಷ್ಟಾಚಾರದ ವ್ಯವಹಾರಗಳನ್ನು ಕುದುರಿಸಲು ವಿಧಾನಸೌಧ ಬಳಕೆ ಮಾಡಿಕೊಳ್ಳುತ್ತಿದೆ. ಭಾಜಪದ ಶಾಸಕರುಗಳೇ ಮಂತ್ರಿಗಳಿಗೆ ಬ್ರೋಕರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಶಾಸನ ಬರೆಯುವ ವಿಧಾನಸೌಧ ಇಂದು ವ್ಯಾಪಾರ ಸೌಧ ಆಗಿ ಬದಲಾಗಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಪಟ್ಟಣದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ತಾಪುರ ತಾಲೂಕು ಮಟ್ಟದ ಯುವ ಘರ್ಜನೆ ಕಾರ್ಯಕ್ರಮದ ಬೃಹತ್ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದಿಂದಾಗಿ ಸರ್ಕಾರಿ ನೌಕರಿಯ ಕನಸು ಹೊತ್ತು ಪರೀಕ್ಷೆ ಬರೆದಿದ್ದ 3.5 ಲಕ್ಷ ಯುವಕರ ಭವಿಷ್ಯ ಬೀದಿಪಾಲಾಯಿತು. ಅನ್ಯಾಯದ ವಿರುದ್ಧ ನಾವು ದನಿ ಎತ್ತಿದ ಪರಿಣಾಮ ಹಗರಣದ ಕಿಂಗ್‌ಪಿನ್‌ಗಳು ಸೇರಿದಂತೆ ರಾಜ್ಯದ ಓರ್ವ ಐಪಿಎಸ್ ಅಧಿಕಾರಿ ಜೈಲುಪಾಲಾದರು. ಗೃಹಮಂತ್ರಿ ಸೇರಿದಂತೆ ಯಾರ ವಿರುದ್ಧವೂ ಕಠಿಣ ಕ್ರಮಕೈಗೊಳ್ಳದೆ ಯುವಕರ ಭವಿಷ್ಯ ಕೊಂದ ಬಿಜೆಪಿ ಸರ್ಕಾರದ ಘನ ಮುಖ್ಯಮಂತ್ರಿ ಬೊಮ್ಮಾಯಿ, ಕಾಂಗ್ರೆಸ್ ಪಕ್ಷದ ಧಮ್ಮು, ತಾಕತ್ತು, ಧೈರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಬ್ರಹ್ಮಾಸ್ತ್ರದ ಸ್ಟಂಟ್ ನಲ್ಲಿ ಶಾರುಖ್‌ ಬದಲಿಗೆ ಕಾಣಿಸಿಕೊಂಡಿದ್ದು ಇವರೇ…ಫೋಟೋ ವೈರಲ್‌

ಅಮಾಯಕ ಯುವಕರ ಮೆದುಳಿಗೆ ಕೋಮುವಾದದ ನಶೆ ಏರಿಸಿ ಕೊರಳಿಗೆ ಕೇಸರಿ ಶಾಲು ಹಾಕಿಸುತ್ತಿದ್ದಾರೆ. ಸಾಮಾನ್ಯ ಜನರ ಮಕ್ಕಳನ್ನು ಧರ್ಮ ರಕ್ಷಣೆ ಮತ್ತು ಗೋ ರಕ್ಷಣೆಗೆ ನಿಲ್ಲಿಸುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು, ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಿದ್ದಾರೆ. ಹಿಜಾಬ್, ಹಲಾಲ್ ಕಟ್, ಮಸೀದಿ ಮೇಲಿನ ಮೈಕ್‌ಗಳ ವಿರುದ್ಧ ಗಲಾಟೆ ಎಬ್ಬಿಸಲು ಮಾತ್ರ ಬಡ ಕುಟುಂಬದ ಮಕ್ಕಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಯುವಕರು ಉದ್ಯೋಗ ಕೇಳಿದರೆ ಕಾಶ್ಮೀರ್ ಫೈಲ್ಸ್ ಸಿನೆಮಾ ತೋರಿಸುತ್ತಾರೆ. ಅನ್ಯಾಯದ ವಿರುದ್ಧ ನಮ್ಮಂತವರು ಹೋರಾಟಕ್ಕೆ ಮುಂದಾದರೆ ಇಡಿ ನೋಟಿಸ್ ಕಳಿಸುತ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಶಾಸಕ ಪ್ರಿಯಾಂಕ್, ಚಿತ್ತಾಪುರದಲ್ಲಿ ಕೇಳಿಬಂದಿರುವ ಯುವಕರ ಘರ್ಜನೆ ಇನ್ನುಮುಂದೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೇಳಿ ಬರುತ್ತದೆ. ಯುವಕರ ಹೋರಾಟ ದನಿಯನ್ನು ನಾನು ವಿಧಾನಸೌಧದ ಒಳಗೆ ಮೊಳಗಿಸುತ್ತೇನೆ. ಯುವ ಕಾಂಗ್ರೆಸ್ ಕಾರ್ಯಕರ್ತರ ಶಕ್ತಿ ಏನು ಎಂಬುದನ್ನು ಈ ಡಬಲ್ ಇಂಜಿನ್ ಸರ್ಕಾರಕ್ಕೆ ತೋರಿಸುತ್ತೇವೆ ಎಂದರು.

ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ರಾಜ್ಯ ರಾಜಕಾರಣಕ್ಕೆ ಓರ್ವ ಪ್ರಬುದ್ಧ ರಾಜಕಾರಣಿಯನ್ನು ಕೊಟ್ಟಿರುವ ಚಿತ್ತಾಪುರದ ಜನತೆ ನಿಜಕ್ಕೂ ಬುದ್ದಿವಂತರು. ಚಿತ್ತಾಪುರ ಮತಕ್ಷೇತ್ರವಷ್ಟೇಯಲ್ಲ ಇಡೀ ರಾಜ್ಯವೇ ಪ್ರಿಯಾಂಕ್ ಖರ್ಗೆ ಅವರ ಹೋರಾಟದ ಗುಣವನ್ನು ಮತ್ತು ಅಭಿವೃದ್ಧಿಪರ ಚಿಂತನೆಯನ್ನು ಸ್ಮರಿಸುತ್ತಿದೆ. ಇಂಥಹ ನಾಯಕನನ್ನು ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ಆದರೆ ಬಲಿಷ್ಟ ಯುವಶಕ್ತಿಯೊಂದು ಪ್ರಿಯಾಂಕ್ ಅವರ ಹಿಂದಿದೆ ಎಂಬುದನ್ನು ವಿರೋಧಿಗಳು ಮರೆತಿದ್ದಾರೆ. ಪ್ರಿಯಾಂಕ್ ವಿರುದ್ಧ ಯಾರೇ ನಿಂತರೂ ಠೇವಣಿ ಕಳೆದುಕೊಳ್ಳುವಂತೆ ಕೆಲಸ ಮಾಡಬೇಕು ಎಂದು ಯುವಕರಿಗೆ ಕರೆ ನೀಡಿದರು.

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹ್ಮದ್ ನಲಪಾಡ್ ಮಾತನಾಡಿದರು. ಕಾಂಗ್ರೆಸ್ ಸಂಪನ್ಮೂಲ ವ್ಯಕ್ತಿ ನಿಖಿತರಾಜ್ ಮೌರ್ಯ ಉಪನ್ಯಾಸ ನೀಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ, ವಾಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶರಣು ವಾರದ್, ಚಿತ್ತಾಪುರ ಬ್ಲಾಕ್ ಅಧ್ಯಕ್ಷ ಸಂಜಯ ಬುಳಕರ, ಸೇವಾದಳ ಅಧ್ಯಕ್ಷ ರಾಹುಲ ಮೇನಗಾರ, ಮುಖಂಡರಾದ ಸುಭಾಷ ರಾಠೋಡ, ಶಿವಾನಂದ ಪಾಟೀಲ, ನಾಗರೆಡ್ಡಿಗೌಡ ಪಾಟೀಲ ಕರದಾಳ, ಟೋಪಣ್ಣ ಕೋಮಟೆ, ರವಿ ಆರ್‌ಬಿ.ಚವ್ಹಾಣ, ಅಬ್ದುಲ್ ಅಜೀಜ್ ಸೇಠ, ಜುಮ್ಮಣ್ಣ ಪೂಜಾರಿ, ಸುನೀಲ ಗುತ್ತೇದಾರ, ಗೋವಿಂದ ಸಗರ, ಶಂಕರ ಜಾಧವ ಸೇರಿದಂತೆ ಹತ್ತು ಸಾವಿರಕ್ಕೂ ಹೆಚ್ಚು ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಸವರಾಜ ಚಿನಮಳ್ಳಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.