ಡಬಲ್ ಇಂಜಿನ್ ಸರ್ಕಾರದಿಂದ ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ
Team Udayavani, Aug 4, 2021, 3:28 PM IST
ಕಲಬುರಗಿ: ರಾಜ್ಯ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಕಂದಾಯ ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಜಿಲ್ಲೆ ಮತ್ತೆ ಕಡೆಗಣಿಸಿರುವುದಕ್ಕೆ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾಗಿರುವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಬಲ್‌ಇಂಜಿನ್ ಸರ್ಕಾರದಿಂದ ಜಿಲ್ಲೆಗೆ ಅನ್ಯಾಯ ನಿರಂತರವಾಗಿ ಮುಂದುವರೆದಿದೆ. ಕೇಂದ್ರದಲ್ಲಿ ರಾಜ್ಯದಲ್ಲಿ ಒಂದೇ ಸರಕಾರವಿರುವುದು ಡಬಲ್ ಇಂಜನ್ ಇದ್ದಂತೆ ಎಂದು ಬಿಜೆಪಿಗರು ಹೇಳುವುದು ಇದೇನಾ? ಎಂದು ಪತ್ರಿಕಾ ಹೇಳಿಕೆಯಲ್ಲಿ ವ್ಯಂಗವಾಡಿದ್ದಾರೆ.
ಬಿಜೆಪಿ ಸರ್ಕಾರ ಮತ್ತೊಮ್ಮೆ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದೆ ದೋಖಾ ಮಾಡಿದೆ. ಈ ಹಿಂದೆ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಅದರಲ್ಲೂ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸದೇ ಅನ್ಯಾಯವೆಸಗಿದ್ದರು. ಈಗ ಅವರ ಉತ್ತರಾಧಿಕಾರಿ ಬೊಮ್ಮಾಯಿ ಅವರು ಕೂಡಾ ಮತ್ತೊಮ್ಮೆ ಈ ಪ್ರದೇಶವನ್ನು ಕಡೆಗಣನೆ ಮಾಡುವ ಮೂಲಕ ಅನ್ಯಾಯದ ಪರಂಪರೆ ಮುಂದುವರೆಸಿಕೊಂಡು ಬರುವಂತಾಗಿದೆ..
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಂಟು ಸಚಿವರನ್ನು ಹೊಂದಿದ್ದ ಕಲಬುರಗಿ ಜಿಲ್ಲೆ ಈಗ ಒಬ್ಬರೇ ಒಬ್ಬ ಸಚಿವರನ್ನೂ ಹೊಂದದೆ ಅನಾಥವಾಗಿರುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯತನ ಮತ್ತು ಬಿಜೆಪಿ ಸಂಸದ, ಶಾಸಕರ ಅಸಹಾಯಕತೆ ಕಾರಣವಾಗಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿದರೆ ಕಲಬುರಗಿ ಜಿಲ್ಲೆಯಲ್ಲಿ ಅಭಿವೃದ್ದಿ ಹೊಳೆ ಹರಿಸುವುದಾಗಿ ಹೇಳಿ ಜನರನ್ನು ಮರುಳು ಮಾಡಿ ಓಟು ಗಿಟ್ಟಿಸಿದ್ದ ಕಲಬುರಗಿ ಜಿಲ್ಲೆಯ ಮಹಾನ್ ನಾಯಕರು ಖರ್ಗೆ ಅವರು ಕೇಂದ್ರ ಸಚಿವರಾಗಿದ್ದಾಗ ಮಂಜೂರು ಮಾಡಿದ್ದ ಹಲವಾರು ಯೋಜನೆಗೆಳು ವಾಪಸ್ ಹೋದಾಗ ಧ್ವನಿ ಎತ್ತಲಿಲ್ಲ.
ರಾಜ್ಯ ಸರ್ಕಾರ ಕೆಕೆಆರ್‌ಡಿಬಿಗೆ ನಿಗದಿತ ವಾರ್ಷಿಕ ಅನುದಾನ ಬಿಡುಗಡೆ ಮಾಡದಿರುವಾಗ, ನೆರೆಯಿಂದ ಜನರು ತೊಂದರೆಯಲ್ಲಿದ್ದಾಗ ಅವರ ನೆರವಿಗೆ ಧಾವಿಸುವಲ್ಲಿ ವಿಫಲವಾದಾಗ, ಕೊರೋನಾ ಸಾಂಕ್ರಾಮಿಕದಿಂದ ಜಿಲ್ಲೆಯ ಜನರು ಬೆಡ್, ಆಕ್ಸಿಜನ್, ಲಸಿಕೆ, ಅಂಬುಲೆನ್ಸ್ ಕೊರತೆಯಿಂದ ನರಳುತ್ತಿರುವಾಗ ಬೆನ್ನೆಲುಬು ಇಲ್ಲದ ಬಿಜೆಪಿ ಸಂಸದ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಜನರಿಗೆ ವೈದ್ಯಕೀಯ ನೆರವು ಕೊಡಿಸಲಿಲ್ಲ.
ಈಗ ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಸ್ಥಾನ ನೀಡದಿರುವಾಗಲೂ ಬಾಯಿಬಿಡುತ್ತಿಲ್ಲ . ಹೀಗಿದ್ದ ಮೇಲೆ ಇವರಿಂದ ಏನು ನಿರೀಕ್ಷೆ ಮಾಡಲು ಸಾಧ್ಯ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.