Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Team Udayavani, Nov 12, 2024, 11:51 PM IST
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆ ಸುಗಮಗೊಳಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ಬುಧವಾರ ನಡೆಯುವ ಮಹತ್ವದ ಸಭೆ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆ ರಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಭೆಯ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ಗ್ರಾಮಠಾಣ ವ್ಯಾಪ್ತಿಯ ಹೊರ ಭಾಗದ ಬಹಳಷ್ಟು ಪ್ರದೇಶಗಳಲ್ಲಿ ಶಾಲೆಗಳು, ಉದ್ದಿಮೆಗಳು ಹಾಗೂ ವಸತಿ ಸಮುಚ್ಚಯಗಳು ನಿರ್ಮಾಣಗೊಂಡಿವೆ. ಬಹುಪಾಲು ಆಸ್ತಿ ಗಳು ಗ್ರಾ.ಪಂ. ತೆರಿಗೆ ವ್ಯಾಪ್ತಿಗೆ ಒಳಪಡದೆ ಇರುವುದರಿಂದ ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣ ದಲ್ಲಿ ಹಿನ್ನಡೆ ಉಂಟಾಗಿದೆ ಎಂದರು.
ಗ್ರಾ.ಪಂ.ಗಳನ್ನು ಸದೃಢಗೊಳಿಸುವಲ್ಲಿ ಇ-ಸ್ವತ್ತು ದಾಖಲೆ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಅನಿವಾರ್ಯ
ಇದೆ. ಈ ಹಿನ್ನೆಲೆಯಲ್ಲಿ ಕಾರ್ಯಪಡೆ ರಚಿಸಲಾಗುವುದು. ಗ್ರಾಮಗಳಿಗೆ ಹೊಂದಿ ಕೊಂಡಂತೆ ಕಂದಾಯ ಭೂಮಿಯಲ್ಲಿ ಬಡಾವಣೆಗಳು ನಿರ್ಮಾಣಗೊಂಡಿದ್ದು, ಇಂತಹ ಬಡಾವಣೆಗಳಲ್ಲಿನ ನಿವಾಸಿಗಳು ಇ-ಸ್ವತ್ತು ದಾಖಲೆಯನ್ನು ಸುಗಮವಾಗಿ ಪಡೆದುಕೊಳ್ಳುವಲ್ಲಿ ಪರಿಹಾರಗಳನ್ನು ಕಾರ್ಯಪಡೆ ಸೂಚಿಸಲಿದೆ ಎಂದರು.
ಸಮಸ್ಯೆ ಏನು?
-ಗ್ರಾಮಠಾಣದ ಹೊರ ಭಾಗದಲ್ಲಿ ಶಾಲೆ, ಉದ್ದಿಮೆ, ವಸತಿ ಸಮುಚ್ಚಯಗಳು ಸಾಕಷ್ಟಿದ್ದರೂ ತೆರಿಗೆ ವ್ಯಾಪ್ತಿಗೆ ಬಂದಿಲ್ಲ
-ಇದು ಗ್ರಾ.ಪಂ.ಗಳ ಸಂಪನ್ಮೂಲ ಕ್ರೋಡೀಕರಣದಲ್ಲಿ ಹಿನ್ನಡೆಯಾಗಲು ಕಾರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.