ಬಿಜೆಪಿಯನ್ನು ಒಂದಂಕಿಗೆ ಇಳಿಸಲು ಕೈ ಪಣ
Team Udayavani, Jan 25, 2019, 6:58 PM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್, ಈ ಬಾರಿ ರಾಜ್ಯದಲ್ಲಿ ಬಿಜೆಪಿಯನ್ನು ಒಂದಂಕಿಗಿಳಿಸಲು ಪಣ ತೊಟ್ಟಿದೆ.
ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತಳಮಟ್ಟದಿಂದ ಕಾರ್ಯಕರ್ತರ ಪಡೆಯನ್ನು ಬಲಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ನಿರ್ಧರಿಸಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಯೊಂದು ಕ್ಷೇತ್ರವೂ ಮಹತ್ವದ್ದಾಗಿದ್ದರಿಂದ ಯಾವ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡದೆ ಪಕ್ಷದ ಮುಂಚೂಣಿ ಘಟಕಗಳಾದ ಹಿಂದುಳಿದ ವರ್ಗಗಳ ಘಟಕ, ಅಲ್ಪಸಂಖ್ಯಾತ ಘಟಕ, ಮಹಿಳಾ ಘಟಕ, ಯುವ ಘಟಕ, ಎಸ್ಸಿ/ಎಸ್ಟಿ ಘಟಕಗಳು ಸಕ್ರಿಯರಾಗಿ ಕೆಲಸ ಮಾಡಿ, ಆಯಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಎಲ್ಲ ಸಮುದಾಯಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರತಿಯೊಂದು ಘಟಕದಿಂದಲೂ ಚುನಾವಣೆ ದೃಷ್ಟಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರನ್ನು ಸೆಳೆಯಲು ಪ್ರಯತ್ನಿಸಬೇಕೆಂದು ಸೂಚಿಸಿದ್ದಾರೆ. ಹಿಂದುಳಿದ ವರ್ಗಗಳಲ್ಲಿ ಜಾತಿವಾರು ಸಮಾವೇಶಗಳನ್ನು ನಡೆಸಿ, ಎಲ್ಲಾ ಸಮುದಾಯಗಳನ್ನು ಕಾಂಗ್ರೆಸ್‌ನತ್ತ ಸೆಳೆಯಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ ಎನ್ನಲಾಗಿದೆ.
ಪ್ರಿಯಾಂಕಾ ಅಸ್ತ್ರ: ಶೇ.50ರಷ್ಟು ಮತದಾರರಾಗಿರುವ ಮಹಿಳೆಯರನ್ನು, ವಿಶೇಷವಾಗಿ ಯುವತಿಯರನ್ನು ಕಾಂಗ್ರೆಸ್ ಕಡೆಗೆ ಸೆಳೆಯಲು ಪ್ರಿಯಾಂಕಾ ಗಾಂಧಿ ಅವರನ್ನೇ ಬಿಂಬಿಸಲು ನಿರ್ಧರಿಸ ಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನೇ ಹೋಲುವುದರಿಂದ ಇಂದಿರಾ ಗಾಂಧಿ ಕಾಲದ ಹಿರಿಯ ಮತದಾರರು ಅವರ ಬಗ್ಗೆ ಆಕರ್ಷಿತರಾಗಬಹುದು. ಅವರೊಂದಿಗೆ ಯುವತಿಯರಿಗೂ ಇಂದಿರಾ ಗಾಂಧಿಯ ಸಾಧನೆಗಳ ಬಗ್ಗೆ ತಿಳಿಸುವ ಮೂಲಕ ಕಾಂಗ್ರೆಸ್ ಕಡೆಗೆ ಸೆಳೆಯಲು ಮಹಿಳಾ ಘಟಕದಿಂದ ಶ್ರಮಿಸುವಂತೆ ನಿರ್ದೇಶನ ನೀಡಲಾಗಿದೆ.
ಸಮ್ಮಿಶ್ರ ಗೊಂದಲ ಬೇಡ: ಜೆಡಿಎಸ್ ಜೊತೆಗೆ ಮೈತ್ರಿಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿರುವುದರಿಂದ ಮೈತ್ರಿ ಪಕ್ಷದಲ್ಲಿ ಯಾವ ಪಕ್ಷದ ಅಭ್ಯರ್ಥಿಯಾದರೂ ಗೆಲ್ಲಿಸಿಕೊಂಡು ಬರಲು ಶ್ರಮಿಸಬೇಕು. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಬಲ ಹೆಚ್ಚಳಕ್ಕೆ ಇದು ಪೂರಕವಾಗುವುದಲ್ಲದೆ ಬಿಜೆಪಿಯನ್ನು ಒಂದಂಕಿಗೆ ಇಳಿಸಲು ಅನುಕೂಲವಾಗುತ್ತದೆ ಎಂದು ರಾಜ್ಯಾಧ್ಯಕ್ಷರು ಕಿವಿ ಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಕೇಂದ್ರ ಸರ್ಕಾರದ ಜನಪ್ರಿಯತೆ ಇನ್ನೂ ಕುಸಿಯಲಿದೆ. ಮೋದಿಯವರ ಮಾತಿಗೆ ರಾಷ್ಟ್ರದ ಜನತೆ ಬೇಸತ್ತು
ಹೋಗಿದ್ದಾರೆ. ದೇಶದ ಜನತೆಗೆ ಅಚ್ಛೇ ದಿನ್ ಬರಲೇ ಇಲ್ಲ. ಕೆಟ್ಟ ದಿನಗಳೇ ಬಂದಿವೆ.
● ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.