Pro Pak Slogan: ಪಾಕ್ ಪರ ಘೋಷಣೆ; 3 ಆರೋಪಿಗಳಿಗೆ ಜಾಮೀನು ಮಂಜೂರು
Team Udayavani, Mar 15, 2024, 7:00 AM IST
ಬೆಂಗಳೂರು: ರಾಜ್ಯಸಭಾ ಚುನಾವಣೆಯ ಫಲಿತಾಂಶದ ನಂತರ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 39ನೇ ಎಸಿಎಂಎಂ ನ್ಯಾಯಾಲಯವು ಮೊಹಮದ್ ಶಫಿ ನಾಶಿಪುಡಿ ಸೇರಿದಂತೆ ಮೂವರಿಗೆ ಜಾಮೀನು ಮಂಜೂರು ಮಾಡಿದೆ.
ಪಾಕ್ ಪರ ಘೋಷಣೆ ಕೂಗಿದ್ದಾರೆನ್ನಲಾದ ಮೊಹಮದ್ ಶಫಿ ನಾಶಿಪುಡಿ, ಮುಜಾಮಿಲ್ ಹಾಗೂ ಇಲ್ತಾಜ್‌ಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಇಬ್ಬರು ವ್ಯಕ್ತಿಗಳ ಶ್ಯೂರಿಟಿ ಪಡೆದು ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಫೆ.27 ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಸಿರ್ ಹುಸೇನ್ ಜಯಗಳಿಸಿದ ಬಳಿಕ ವಿಧಾನಸೌಧದ ಆವರಣದಲ್ಲೇ ಆರೋಪಿಗಳು ಪಾಕ್ ಪರ ಘೋಷಣೆ ಕೂಗಿದ್ದರು. ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯಲ್ಲೂ ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾಗಿತ್ತು. ನಂತರ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.