ಪಾಕಿಸ್ತಾನ ಪರ ಪೋಸ್ಟ್: ಮುಧೋಳ ಬಂದ್ ಯಶಸ್ವಿ
Team Udayavani, Feb 20, 2019, 12:49 AM IST
ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಪರ ಪೋಸ್ಟ್ ಹಾಕಿದ ಮುಧೋಳ ಯುವಕನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಂಗಳವಾರ ಮುಧೋಳ ಬಂದ್ ಆಚರಿಸಲಾಯಿತು.
ಮುಧೋಳದಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಶಿವಾಜಿ ವೃತ್ತದ ಬಳಿ ಹೆದ್ದಾರಿ ತಡೆದು ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಫೇಸ್‌ಬುಕ್ ನಲ್ಲಿ ಪಾಕಿಸ್ತಾನದ ಪರ ಪೋಸ್ಟ್ ಹಾಕಿದ್ದ ಯುವಕ ನಾಪತ್ತೆಯಾಗಿದ್ದು, ಆತನ ವಿರುದಟಛಿ ದೇಶದ್ರೋಹದ ಪ್ರಕರಣ ದಾಖಲಿಸಿಲ್ಲ. ಬದಲಾಗಿ ಐಪಿಸಿ ಸೆಕ್ಟನ್ 295 (ಹಿಂದೂ ಧರ್ಮಕ್ಕೆ ಅವಮಾನ) ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹ ದೇಶದ್ರೋಹಿಗಳಿಗೆ ಮೊದಲು ಕಠಿಣ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಶಿವಾಜಿ ವೃತ್ತದಲ್ಲಿ ರಸ್ತೆತಡೆ ನಡೆಸುವ ವೇಳೆ ಪೊಲೀಸರು ಮತ್ತು ಹಿಂದೂ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿಯೂ ನಡೆಯಿತು. ಬಂದ್ ವೇಳೆ ನಡೆದ ಪ್ರತಿಭಟನೆಯಲ್ಲಿ ಹಿಂದೂ-ಮುಸ್ಲಿಮರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.