![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 26, 2022, 7:00 AM IST
ಬೆಂಗಳೂರು: ಮತ್ತೊಂದು ಸರಕಾರಿ ಹುದ್ದೆಯ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರಕಾರಿ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಗೆ ನಡೆದ ಪರೀಕ್ಷೆ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೈಸೂರು ಮೂಲದ ಅತಿಥಿ ಉಪನ್ಯಾಸಕಿ ಸೌಮ್ಯಾ (32) ಹಾಗೂ ಬೆಂಗಳೂರು ಮೂಲದ ಓರ್ವನನ್ನು ಮಲ್ಲೇಶ್ವರ ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್‌ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆ ನಡೆಸಿತ್ತು. ಆಗ ಮೈಸೂರು ವಿವಿಯ ಕಾಲೇಜೊಂದರಲ್ಲಿ ಭೂಗೋಳಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕಿ ಸೌಮ್ಯಾ, ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲು ತನ್ನ ವಾಟ್ಸ್‌ಆ್ಯಪ್‌ನಿಂದ ಭೂಗೋಳಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ 18 ಪ್ರಶ್ನೆಗಳನ್ನು ಪರೀಕ್ಷಾರ್ಥಿಯೊಬ್ಬರಿಗೆ ಕಳುಹಿಸಿದ್ದರು. ಅವರು ಇತರ ಕೆಲವರಿಗೂ ಹಂಚಿದ್ದರಿಂದ ಅದು ಸೋರಿಕೆಯಾಗಿತ್ತು. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿ ಕಾರದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು, ಅಭ್ಯರ್ಥಿಗಳ ದೂರು ಆಧರಿಸಿ ಸೌಮ್ಯಾ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ರವಿವಾರ ಸೌಮ್ಯಾಳನ್ನು ಬಂಧಿಸಲಾಗಿದೆ.
ಪಿಎಚ್‌ಡಿ ಪದವೀಧರೆ
ಸೌಮ್ಯಾ ಮೈಸೂರು ವಿಶ್ವವಿದ್ಯಾನಿಲಯದ ಎಂಎಸ್‌ಸಿ ಪದವೀಧರೆ. ಅದೇ ವಿವಿಯಲ್ಲಿ “ಜಿಐಎಸ್ ಆ್ಯಂಡ್ ಅಗ್ರಿಕಲ್ಚರ್ ಜಿಯೋಗ್ರಫಿ’ ವಿಷಯದಲ್ಲಿ ಪಿಎಚ್‌ಡಿ ಪದವಿಯನ್ನೂ ಪಡೆದು ಗಂಗೋತ್ರಿಯಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಇತ್ತೀಚೆಗೆ ಪೋಸ್ಟ್ ಡಾಕ್ಟರಲ್ ಫೆಲೋಶಿಪ್‌ಗೆ ಆಯ್ಕೆಯಾಗಿದ್ದ ಕಾರಣ ಅತಿಥಿ ಉಪನ್ಯಾಸಕ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದರು ಎಂದು ತಿಳಿದು ಬಂದಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.