ಮೇಜರ್ ಸರ್ಜರಿಗೆ ನಡೆದಿದೆ ಲಾಭ ನಷ್ಟದ ಲೆಕ್ಕ;ರಾಜ್ಯದಲ್ಲಿ ಬೀಡುಬಿಟ್ಟ ಬಿಜೆಪಿ ವರಿಷ್ಠರ ತಂಡ
Team Udayavani, Apr 23, 2022, 7:05 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಯಾರನ್ನು ಕೈ ಬಿಟ್ಟರೆ ಲಾಭ ಅಥವಾ ನಷ್ಟವಾದೀತು ಎಂಬ ಬಗ್ಗೆ ಬಿಜೆಪಿ ವರಿಷ್ಠರು ಮಾಹಿತಿ ಕಲೆ ಹಾಕುತ್ತಿದ್ದಾರೆ ವರಿಷ್ಠರ ಸೂಚನೆ ಮೇರೆಗೆ ರಾಜ್ಯಕ್ಕೆ ಬಂದಿರುವ ತಂಡವೊಂದು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಚುನಾವಣೆ ದೃಷ್ಟಿಯಿಂದ ಮಾಹಿತಿ ಸಂಗ್ರಹಿಸುತ್ತಿದೆ.
ಹಿರಿಯ ಸಚಿವರು ಹಾಗೂ ಸಂಪುಟದಿಂದ ಕೈಬಿಡಬೇಕು ಎಂದುಕೊಂಡಿರುವ ಸಚಿವರ ವರ್ಚಸ್ಸು, ಜಾತಿ – ಸಮುದಾ ಯದ ಮೇಲಿನ ಹಿಡಿತ, ಜಿಲ್ಲೆ, ಕ್ಷೇತ್ರ, ಸಮುದಾಯದ ಹೊರತಾಗಿ ಇರುವ ವರ್ಚಸ್ಸು ಮತ್ತು ನಾಯಕತ್ವಕ್ಕೆ ಬೆಂಬಲ ಮುಂತಾದ ವಿಷಯಗಳ ಬಗ್ಗೆ ವರಿಷ್ಠರು ವರದಿ ಪಡೆದು ಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಬಂಧಪಟ್ಟ ನಾಯಕರ ಕ್ಷೇತ್ರ, ಜಿಲ್ಲಾ ವ್ಯಾಪ್ತಿಯಲ್ಲಿ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿ ಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಂತರಿಕ ಸಮೀಕ್ಷೆ
ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ವಾಸ್ತವ ಸ್ಥಿತಿ ಅರಿಯಲು ಬಿಜೆಪಿ ಆಂತರಿಕ ಸಮೀಕ್ಷೆ ನಡೆಸಿದೆ ಎನ್ನಲಾಗಿದ್ದು, ಪಕ್ಷವು ಸ್ಪಷ್ಟ ಬಹುಮತದಿಂದ ಬಹಳ ದೂರದಲ್ಲಿದೆ ಎನ್ನುವ ಅಂಶ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆ ವರದಿ ಹಿನ್ನೆಲೆಯಲ್ಲಿ ವರಿಷ್ಠರು ಕರ್ನಾಟಕದ ವಿಚಾರದಲ್ಲಿ ಹೆಚ್ಚು ತಲೆಕೆಡಿಸಿಕೊಳ್ಳುವಂತಾಗಿದೆ.
ಕರ್ನಾಟಕವು ಬಿಜೆಪಿಗೆ ದಕ್ಷಿಣ ಭಾರತದ ಹೆಬ್ಟಾಗಿಲು ಆಗಿರುವುದರಿಂದ ಇಲ್ಲಿ ಅಧಿಕಾರ ಪಡೆದುಕೊಳ್ಳುವುದು ಪಕ್ಷಕ್ಕೆ ಅತ್ಯಂತ ಮಹತ್ವದ್ದಾಗಿದೆ.
ಆ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಮೇಲ್ವಿಚಾರಣೆಯಲ್ಲೇ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಉತ್ತರ ಭಾರತದಲ್ಲಿ ಅಧಿಕಾರದಲ್ಲಿ ಇದ್ದ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಉಳಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯು ಕರ್ನಾಟಕದಲ್ಲಿ ಮಾತ್ರ ವಿಫಲವಾಗುತ್ತಿದೆ. ಈ ಬಾರಿ ಹೇಗಾದರೂ ರಾಜ್ಯದಲ್ಲಿ ಪುನರಾಯ್ಕೆ ಯಾಗಬೇಕೆಂಬ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರು ರಾಜ್ಯದ ಎಲ್ಲ ಕಾರ್ಯತಂತ್ರಗಳನ್ನು ಈಗಿನಿಂದಲೇ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸೂಕ್ಷ್ಮ ಹೆಜ್ಜೆ
ವರಿಷ್ಠರು ಕರ್ನಾಟಕದಲ್ಲಿ ಯಾವ ರೀತಿಯ ಹೆಜ್ಜೆ ಇಡಬೇಕು ಎನ್ನುವ ನಿಟ್ಟಿನಲ್ಲಿ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಚುನಾವಣ ವರ್ಷವಾಗಿರುವುದರಿಂದ ಸಚಿವರ ಬದಲಾವಣೆಯಿಂದ ಸಂಬಂಧಪಟ್ಟವರ ಸಮುದಾಯಗಳು ಪಕ್ಷದ ವಿರುದ್ಧ ತಿರುಗಿ ಬಿದ್ದರೆ, ಅದಕ್ಕೆ ಯಾವ ರೀತಿಯ ಪರ್ಯಾಯ ಮಾರ್ಗ ಅನುಸರಿಸಬೇಕು ಎನ್ನುವ ಕುರಿತಂತೆ ಎಲ್ಲ ಆಯಾಮಗಳಲ್ಲಿಯೂ ಆಲೋಚನೆ ನಡೆಸಲಾಗುತ್ತಿದೆ ಎಂದೂ ಹೇಳಲಾಗಿದೆ.
ವರಿಷ್ಠರ ಚರ್ಚೆ?
ಪಕ್ಷ ಮತ್ತು ಸರಕಾರದಲ್ಲಿ ಭಾರೀ ಬದಲಾವಣೆ ಮಾಡುವ ನಿಟ್ಟಿನಲ್ಲಿ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳಬೇಕೆಂಬ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಹಿನ್ನೆಲೆಯಲ್ಲಿಯೇ ಈ ಮಾಸಾಂತ್ಯಕ್ಕೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾ
ವಣೆಗಳು ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
- ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.