ಸಿಎಂ ಅವರಿಂದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಸಿಗಲಿದೆ: ಸಚಿವ ನಿರಾಣಿ ವಿಶ್ವಾಸ
Team Udayavani, Feb 21, 2021, 5:50 PM IST
ಬೆಂಗಳೂರು: ಸಮಾಜದ ಬಹುದಿನಗಳ ಬೇಡಿಕೆಯಂತೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ್ಯಾಯ ಒದಗಿಸಿ ಕೊಡಲಿದ್ದು, ಎಲ್ಲರೂ ವಿಶ್ವಾಸವಿಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಮಠ ಐತಿಹಾಸಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ನಾಯಕರಾದ ಯಡಿಯೂರಪ್ಪನವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದು ಬಣ್ಣಿಸಿದರು.
ಈಗಾಗಲೇ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಆಯೋಗವು ಕೂಡ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದರು.
ಸಮುದಾಯದ ಒತ್ತಾಸೆಯಂತೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಿಂದುಳಿದ ವರ್ಗವು ಘೋಷಿಸಿದ ನಂತರ ಕಾನೂನು ತೊಡಕಾಗಬಾರದೆಂಬ ಕಾರಣಕ್ಕಾಗಿ ಎಲ್ಲ ಪ್ರಕ್ರಿಯೆಗಳು ಮುಗಿದ ನಂತರ ಲಿಂಗಾಯತ ಪಂಚಮಸಾಲಿ ಸಮಾಜವನ್ನು 2ಎಗೆ ಸೇರಿಸಬೇಕೆಂಬುದು ಅವರ ಉದ್ದೇಶವಾಗಿದೆ ಎಂದು ಹೇಳಿದರು.
ಲಿಂಗಾಯತ ಪಂಚಮಸಾಲಿ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದಿದೆ ಎಂಬ ಒಂದೇ ಕಾರಣಕ್ಕೆ 2008ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಸಾಮಾನ್ಯವರ್ಗದಲ್ಲಿ ನಮ್ಮ ಸಮಾಜವನ್ನು 3ಬಿಗೆ ಸೇರ್ಪಡೆ ಮಾಡಿದರು. ಸಮುದಾಯದ ಒತ್ತಾಯದಂತೆ 2ಎ ವರ್ಗಕ್ಕೆ ಸೇರಿಸಲು ಸರ್ವ ಪ್ರಯತ್ನ ನಡೆಸಿದರೂ ಕೆಲವು ತಾಂತ್ರಿಕ ಕಾರಣದಿಂದ ಸಾಧ್ಯವಾಗಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಮೂರು ದಶಕಗಳಿಂದಲೂ ಹೋರಾಟ ನಡೆಯುತ್ತಿದೆ. ಡಾ.ಹನುಮನಾಳ ಅವರಿಂದ ಆರಂಭವಾದ ಈ ಹೋರಾಟವನ್ನು ಇದೀಗ ಪರಮಪೂಜ್ಯ ಜಯಮೃತ್ಯುಂಜಯ ಮಹಾಸ್ವಾಮೀಜಿ ಹಾಗೂ ವಚನಾನಂದ ಮಹಾಸ್ವಾಮಿಗಳು ಮುಂದುವೆರೆಸುತ್ತಿದ್ದು, ಅವರು ಸುಮಾರು 700 ಕಿ.ಮೀ ಪಾದಯಾತ್ರೆ ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿ ಉಂಟು ಮಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಏಮ್ಸ್ ಬಂದರೆ ಉತ್ತಮ: ಸಚಿವ ಸುಧಾಕರ್
ಮುಂದಿನ ಪೀಳಿಗೆಯ ನಮ್ಮ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅನುಕೂಲವಾಗಬೇಕೆಂಬ ಒಂದೇ ಕಾರಣಕ್ಕಾಗಿ ಈ ಬೃಹತ್ ಹೋರಾಟ ಆರಂಭವಾಗಿದೆಯೇ ಹೊರತು ನಾವೇನು ರಾಜಕೀಯ ಮೀಸಲಾತಿ ಕೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಅತಿದೊಡ್ಡ ಸಮುದಾಯವಾದ ಲಿಂಗಾಯತ ಪಂಚಮಸಾಲಿ ಸಮುದಾಯವು ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ಆದ ಕೊಡುಗೆ ನೀಡಿದೆ. ವೀರರಾಣಿ ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ ಸೇರಿದಂತೆ ಅನೇಕರು ತಮ್ಮ ಜೀವವನ್ನೇ ತ್ಯಾಗ ಮಾಡಿದ್ದಾರೆ ಎಂದು ಸ್ಮರಿಸಿದರು.
ನಮ್ಮ ಸಮುದಾಯವು ಮೂಲತಃ ರೈತಾಪಿ ವರ್ಗಕ್ಕೆ ಸೇರಿದೆ. ಕೆಲವರು ಸರ್ಕಾರಿ, ಅರೆಸರ್ಕಾರಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬೆರಳಣಿಕೆಯಷ್ಟು ಜನರು ಉದ್ಯಮಿದಾರರಾಗಿದ್ದು, 2ಎಗೆ ಸೇರ್ಪಡೆ ಮಾಡಬೇಕೆಂದು ನಡೆಸುತ್ತಿರುವ ಹೋರಾಟ ಕಾನೂನು ಬದ್ದವಾಗಿದೆ ಎಂದರು.
ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ ಸಚಿವರು, ಶಾಸಕರು, ಇಡೀ ಸಮುದಾಯ ಅವರ ಬೆಂಬಲಕ್ಕೆ ನಿಂತಿದೆ. ನಮ್ಮ ಸಮುದಾಯದ ಬೇಡಿಕೆ ಈಡೇರಿಸಲು ತಾವು ಎಲ್ಲ ರೀತಿಯ ಹೋರಾಟ ಮಾಡುತ್ತೇವೆ ಎಂದು ನಿರಾಣಿ ಶಪಥ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.