ಡಿಜಿಟಲ್ ಆರ್ಥಿಕತೆಗೆ ಉತ್ತೇಜನ: ಡಾ. ಸಿ.ಎನ್ ಅಶ್ವತ್ಥನಾರಾಯಣ
Team Udayavani, Feb 9, 2021, 8:45 PM IST
ಬೆಂಗಳೂರು: ಕರ್ನಾಟಕದ ಒಟ್ಟಾರೆ ಉತ್ಪಾದನೆಯಲ್ಲಿ (ಎಸ್.ಡಿ.ಜಿ.ಪಿ.) ಡಿಜಿಟಲ್ ಆರ್ಥಿಕತೆಯ ಕೊಡುಗೆಯನ್ನು ಮುಂದಿನ ಐದು ವರ್ಷಗಳಲ್ಲಿ ಶೇ 30 ರಷ್ಟಕ್ಕೆ ಹೆಚ್ಚಿಸುವ ಗುರಿ ಹೊಂದಿರುವ ‘ಕರ್ನಾಟಕ ಡಿಜಿಟಿಲ್ ಆರ್ಥಿಕತೆ ಮಿಷನ್’ನ (ಕೆಡಿಇಎಂ) ಉದ್ಘಾಟನೆ ಹಾಗೂ ಇದಕ್ಕೆ ಪೂರಕವಾದ ‘ಬೆಂಗಳೂರು ವ್ಯಾಪ್ತಿಯಾಚೆ’ (ಬಿಯಾಂಡ್ ಬೆಂಗಳೂರು) ವರದಿಯ ಅನಾವರಣ ಮಂಗಳವಾರ ನಡೆಯಿತು.
ಕೆಡಿಇಎಂ ಹೆಚ್ಚು ಉದ್ಯಮಸ್ನೇಹಿ ಆಗಿರಬೇಕೆಂಬ ಸರ್ಕಾರ ಇದರಲ್ಲಿ ಹೆಚ್ಚಿನ ಪಾಲುದಾರಿಕೆಯನ್ನು (ಶೇ 51ರಷ್ಟು) ಉದ್ಯಮ ಸಂಘಟನೆಗಳಿಗೇ ಬಿಟ್ಟುಕೊಟ್ಟಿದೆ. ಸೌಕರ್ಯ ಒದಗಿಸುವ ಪಾತ್ರ ನಿರ್ವಹಿಸಲು ಒತ್ತು ಕೊಡಲಿರುವ ಸರ್ಕಾರವು ಇದರಲ್ಲಿ ಶೇ 49ರಷ್ಟು ಪಾಲನ್ನು ಮಾತ್ರ ತಾನು ಇರಿಸಿಕೊಂಡಿದೆ ಎಂದು ಉದ್ಘಾಟನೆ ನೆರವೇರಿಸಿದ ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಹೇಳಿದರು.
ಡಿಜಿಟಲ್ ಆರ್ಥಿಕತೆಯನ್ನು ಸದೃಢಗೊಳಿಸುವುದಕ್ಕಾಗಿ ಕುಗ್ರಾಮಗಳಲ್ಲೂ ಸಂಪರ್ಕ ಜಾಲ ಉತ್ತಮಗೊಳಿಸುವ, ದಿನದ 24 ಗಂಟೆಯೂ ವಿದ್ಯುತ್ ಸೌಲಭ್ಯ ಒದಗಿಸುವಂತಹ ಮೂಲಸೌಕರ್ಯಗಳನ್ನು ನಿರ್ಮಿಸಲು ಸರ್ಕಾರ ಗಮನ ಕೇಂದ್ರೀಕರಿಸುತ್ತದೆ. ಜೊತೆಗೆ ಗ್ರಾಮೀಣ- ನಗರ ಪ್ರದೇಶಗಳ ನಡುವಿನ ಅಂತರವನ್ನು ನಿವಾರಿಸಲು ಒತ್ತು ಕೊಡಲಾಗುತ್ತದೆ ಎಂದರು.
ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಉದ್ಯಮಗಳು ವಿದ್ಯಾರ್ಥಿ ಅವಧಿಯ ಇಂಟರ್ನ್ ಷಿಪ್ ಗೆ ಉತ್ತೇಜನ ನೀಡುವ ಪ್ರವೃತ್ತಿ ಬೆಳೆಸುವ ಅಗತ್ಯವಿದೆ. ಪ್ರಸ್ತುತ ಇದಕ್ಕೆ ಸಂಬಂಧಿಸಿದಂತೆ ಉದ್ಯಮಗಳು ನಿರಾಸಕ್ತಿ ತಾಳಿವೆ. ಆದರೆ ಯುವಪೀಳಿಗೆಯೇ ಮುಂದಿನ ಭವಿಷ್ಯವಾದ್ದರಿಂದ ಅವರಿಗೆ ಅವಕಾಶ ನೀಡಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ:ಪತಿ ಕಾರಿನಲ್ಲೇ ಇರಬೇಕು, ಪತ್ನಿ ಶಾಪಿಂಗ್ ಮುಗಿಸಿ ಬರಬೇಕು! ಉಡುಪಿ ನಗರ ಪಾರ್ಕಿಂಗ್ ಅವಸ್ಥೆ
ಡಿಜಿಟಲ್ ಆರ್ಥಿಕತೆಗೆ ಪೂರಕವಾಗಿ ಮಾಹಿತಿ ತಂತ್ರಜ್ಞಾನ ಆಧಾರಿತ ಉದ್ದಿಮೆಗಳಿಗೆ ಹೂಡಿಕೆಗಳನ್ನು ಆಕರ್ಷಿಸಿ 2025ರ ವೇಳೆಗೆ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಕೆಡಿಇಎಂ ಹೊಂದಿದೆ. ಮಾಹಿತಿ ತಂತ್ರಜ್ಞಾನ ಉತ್ಪನ್ನಗಳ ಅಭಿವೃದ್ಧಿ ಮತ್ತು ಸೇವೆಗಳನ್ನು ಒದಗಿಸುವುದು, ಆವಿಷ್ಕಾರಗಳು ಮತ್ತು ನವೋದ್ಯಮಗಳು, ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ತಯಾರಿಕೆ (ಇ.ಎಸ್.ಡಿ.ಎಂ.), ‘ಬೆಂಗಳೂರು ವ್ಯಾಪ್ತಿಯಾಚೆ’ (ಬಿಯಾಂಡ್ ಬೆಂಗಳೂರು) ಮತ್ತು ಪ್ರತಿಭಾ ಸಂವರ್ಧನೆ (ಟ್ಯಾಲೆಂಟ್ ಆಕ್ಸಲರೇಟರ್) ಈ ಐದು ವಲಯಗಳನ್ನು ಗಮನದಲ್ಲಿರಿಸಿಕೊಂಡು ಕೆಲಸ ಮಾಡಲಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.
ಕರ್ನಾಟಕದ ಮಾಹಿತಿ ತಂತ್ರಜ್ಞಾನ ರಫ್ತು ಮೊತ್ತವು 2025ರ ವೇಳೆಗೆ 150 ಶತಕೋಟಿ ಯು.ಎಸ್.ಡಾಲರ್ ಗಳ ಗುರಿ ಮುಟ್ಟಲು ಹಾಗೂ ರಾಜ್ಯದ ಆರ್ಥಿಕತೆಯು 300 ಶತಕೋಟಿ ಡಾಲರ್ ಗಳ ಗುರಿ ಸಾಧಿಸಲು ಕೆಡಿಇಎಂ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾ.ಇ.ವಿ.ರಮಣರೆಡ್ಡಿ ಅವರು ಮಾತನಾಡಿ, ಸದ್ಯ ರಾಜ್ಯದ ಒಟ್ಟಾರೆ ಜಿಡಿಪಿಗೆ ಮಾಹಿತಿ ತಂತ್ರಜ್ಞಾನ ವಲಯದ ಕೊಡುಗೆ ಶೇ 25ರಷ್ಟು ಇದ್ದು, ಇದರಲ್ಲಿ ಬೆಂಗಳೂರಿನ ಕೊಡುಗೆಯೇ ಶೇ 98ರಷ್ಟಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ವ್ಯಾಪ್ತಿಯಾಚೆಗಿನ ಪಾಲು ಹೆಚ್ಚಿಸುವ ಸಲುವಾಗಿ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಲಾಗಿದೆ. ದೇಶವು ಮುಂದಿನ ಐದು ವರ್ಷಗಳಲ್ಲಿ ಒಂದು ಟ್ರಿಲಿಯನ್ (ಒಂದು ಲಕ್ಷ ಕೋಟಿ) ಡಾಲರ್ ಆರ್ಥಿಕತೆಯಾಗುವ ವೇಳೆಗೆ ‘ಬೆಂಗಳೂರು ವ್ಯಾಪ್ತಿಯಾಚೆ’ಗಿನ ಐಟಿ ವಲಯದ ಪಾಲು ರಾಜ್ಯ ಜಿಡಿಪಿಗೆ ಶೇ 10ರಷ್ಟು ಇರಬೇಕು ಎಂಬ ಗುರಿ ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ:ಮಾದರಿ ಕ್ಷೇತ್ರ ಮಾಡಲು ಪ್ರಯತ್ನ : ಸಚಿವ ಬೊಮ್ಮಾಯಿ
ನವೋದ್ಯಮ ದೂರದರ್ಶಿತ್ವ ಸಮಿತಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಮಾತನಾಡಿ, ಉದ್ಯಮ-ಶೈಕ್ಷಣಿಕ ವಲಯ- ಸರ್ಕಾರ, ಇವುಗಳ ನಡುವೆ ಸಂಪರ್ಕ ಸೇತುವೆಯಾಗಿ ಕೆಡಿಇಎಂ ಕೆಲಸ ಮಾಡಲಿದೆ. ಸೂಕ್ತ ಕಾರ್ಯನೀತಿ ರೂಪಿಸಲು, ಕಾರ್ಯತಂತ್ರ ಅಳವಡಿಸಿಕೊಳ್ಳಲು, ರಾಜ್ಯವನ್ನು ಡಿಜಿಟಲ್ ಸಂಶೋಧನಾ ನೆಲೆಯನ್ನಾಗಿಸಲು ಕೆಡಿಇಎಂ ಪ್ರಯತ್ನ ನಿರತವಾಗಲಿದೆ ಎಂದರು.
ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡ ಅವರು ಮಾತನಾಡಿ, ಮೈಸೂರು, ಮಂಗಳೂರು, ಹುಬ್ಬಳ್ಳಿ/ಧಾರವಾಡ, ಕಲಬುರ್ಗಿ, ಶಿವಮೊಗ್ಗ, ತುಮಕೂರು ಈ ಆರು ಕ್ಲಸ್ಟರ್ ಗಳಲ್ಲಿ ಡಿಟಿಜಲ್ ಆರ್ಥಿಕತೆ ಕೊಡುಗೆ ಹೆಚ್ಚಿಸಲು ಅವಕಾಶಗಳಿವೆ ಎಂದರು.
ನ್ಯಾಸ್ ಕಾಂ, ಅಸೋಚಾಮ್, ಭಾರತೀಯ ವಿದ್ಯುನ್ಮಾನ ಮತ್ತು ಅರೆವಾಹಕ ಉದ್ಯಮಗಳ ಸಂಘಟನೆ (ಐಇಎಸ್ಎ) ಮತ್ತು ನವೋದ್ಯಮಗಳ ದೂರದರ್ಶಿತ್ವ ಸಮಿತಿಗಳು ಕೆಡಿಇಎಂ ನಲ್ಲಿ ಶೇ 51ರಷ್ಟು ಪಾಲುದಾರಿಕೆ ಹೊಂದಿವೆ.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ನ್ಯಾಸ್ ಕಾಂ ಉಪಾಧ್ಯಕ್ಷ ವಿಶ್ವನಾಥ್, ಕೆಡಿಇಎಂ ಸದಸ್ಯ ನಾಗೇಶ್, ಎಲೆಕ್ಟ್ರಾನಿಕ್ಸ್ ಮತ್ತು ಐಟಿ/ಬಿಟಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಡಾ.ಮೀನಾ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.