ಕಾಶ್ಮೀರದಲ್ಲಿ ಹೂಡಿಕೆಗೆ ಪ್ರಸ್ತಾವನೆ
Team Udayavani, Sep 15, 2019, 3:06 AM IST
ಚಿತ್ರದುರ್ಗ: ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಅಲ್ಲಿನ 370 ಎ ವಿಧಿಯನ್ನು ರದ್ದು ಮಾಡಿರುವುದರಿಂದ ಈಗ ಅಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು, ಆಸ್ತಿ ಖರೀ ದಿಸಬಹುದು. ಈ ನಿಟ್ಟಿನಲ್ಲಿ ಕರ್ನಾಟಕದ ಪ್ರವಾಸೋದ್ಯಮ ಇಲಾಖೆ ಯಿಂದ ಹೂಡಿಕೆ ಮಾಡಲು ಅಲ್ಲಿನ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ. ಅಲ್ಲಿ ಜಾಗ ಸಿಕ್ಕಿದರೆ ಕೆಎಸ್‌ಟಿಡಿಸಿ ಯಾತ್ರಿ ನಿವಾಸ ಹಾಗೂ ಮಾಹಿತಿ ಕೇಂದ್ರ ತೆರೆಯಲಾಗುವುದು ಎಂದು ಸಚಿವ ಸಿ.ಟಿ.ರವಿ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದಾಗಿ ಕಾಶ್ಮೀರದ ಜನರಿಗೆ ಹಾಗೂ ಅಲ್ಲಿಗೆ ಬರುವ ಬೇರೆ, ಬೇರೆ ರಾಜ್ಯದ ಜನರಿಗೆ ಕನ್ನಡ ಸಂಸ್ಕೃತಿಯ ಪರಿಚಯವಾಗುತ್ತದೆ. ಇನ್ನು ಕೇಂದ್ರವನ್ನು ನೋಡಿದ ಅಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ನಮ್ಮ ರಾಜ್ಯಕ್ಕೆ ಬರಬಹುದು. ಇದರಿಂದ ಪರಸ್ಪರ ಸಂಸ್ಕೃತಿಯನ್ನು ಪರಿಚಯಿಸುವ ಕೆಲಸವಾಗುತ್ತದೆ ಎಂದು ಮಾಹಿತಿ ನೀಡಿದರು.
ಗೌರಿಗದ್ದೆ ವಿನಯಕುಮಾರ ಅವಧೂತರು ಯಡಿಯೂರಪ್ಪ ಅವರ ಗಾದಿಗೆ ಆಪ್ತರಿಂದಲೇ ಕಂಟಕವಿದೆ ಎಂಬ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ ರವಿ, ಎಷ್ಟು ದಿನ ಅಧಿ ಕಾರದಲ್ಲಿರುತ್ತೇವೆ ಎನ್ನುವುದು ಮುಖ್ಯವಲ್ಲ. ಅ ಧಿಕಾರದಲ್ಲಿದ್ದಾಗ ಜನಪರ ಕೆಲಸ ಮಾಡಬೇಕು. ಯಾರ ಹಣೆಬರಹವನ್ನು ಯಾರೂ ನಿರ್ಧರಿಸುವುದಿಲ್ಲ. ಎಲ್ಲವನ್ನೂ ಭಗವಂತನೇ ನಿರ್ಧರಿಸಿ ಭೂಮಿಗೆ ಕಳಿಸಿರುತ್ತಾನೆ ಎಂದರು.
ರಾಮಮಂದಿರ ಆದ್ಯತೆ ವಿಷಯ: ರಾಮಮಂದಿರ ನಿರ್ಮಾಣ ಬಿಜೆಪಿಯ ಆದ್ಯತೆಯ ವಿಷಯ. ರಾಮಮಂದಿರ ನಿರ್ಮಾಣ ವಿಚಾರದಲ್ಲಿರುವ ತೊಡಕನ್ನು ನಿವಾರಿಸುವ ತೀರ್ಪು ನ್ಯಾಯಾಲಯದಿಂದ ಬರುವ ವಿಶ್ವಾಸವಿದೆ. ಅದೇ ರೀತಿ ಆಕ್ರಮಣಕಾರಿ ವ್ಯಕ್ತಿತ್ವದ ಬಾಬರ್‌ನನ್ನು ವೈಭವೀಕರಿಸುವುದನ್ನು ದೇಶಭಕ್ತರು ಸಹಿಸುವುದಿಲ್ಲ ಎಂದರು.
ಡಿ.ಕೆ. ಶಿವಕುಮಾರ್‌ರನ್ನು ಕಸ್ಟಡಿಗೆ ಕೊಟ್ಟಿರುವುದು ನ್ಯಾಯಾಲಯವೇ ಹೊರತು ಬಿಜೆಪಿ ಅಲ್ಲ. ಕಾನೂನು ಮತ್ತು ನ್ಯಾಯಾಲಯಕ್ಕಿಂತ ಯಾರೂ ಅತೀತರಲ್ಲ.
-ಸಿ.ಟಿ.ರವಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.