ಬೋರ್‌ವೆಲ್‌ಗೆ ಬಿದ್ದ ಕಾರ್ಮಿಕನ ರಕ್ಷಣೆ
Team Udayavani, Feb 17, 2020, 3:00 AM IST
ಕುಂದಾಪುರ/ಉಪ್ಪುಂದ: ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಹ್ಯಾಂಡ್ ಬೋರ್‌ವೆಲ್ ತೆರೆಯುವ ಸಂದರ್ಭ ಆಕಸ್ಮಿಕವಾಗಿ ಒಳಗೆ ಬಿದ್ದ ಕಾರ್ಮಿಕರೊಬ್ಬರನ್ನು ಸತತ 6 ತಾಸುಗಳ ಕಾರ್ಯಾಚರಣೆ ಮೂಲಕ ಯಶಸ್ವಿಯಾಗಿ ಮೇಲೆತ್ತಿದ ಘಟನೆ ಭಾನುವಾರ ಸಂಭವಿಸಿದೆ. ಉಪ್ಪುಂದ ಫಿಶರೀಸ್ ಕಾಲನಿಯ ಕಂಪ್ಲಿಮನೆ ಸುಬ್ಬ ಖಾರ್ವಿಯವರ ಪುತ್ರ ರೋಹಿತ್ ಖಾರ್ವಿ (35) ಸತತ 6 ಗಂಟೆಗಳ ಕಾಲ ಹೋರಾಡಿ, ಮೇಲೆ ಬಂದವರು.
ಘಟನೆ ನಡೆದುದು ಹೇಗೆ?: ಭಾನುವಾರ ಬೆಳಗ್ಗೆ ಮರವಂತೆಯ ಹೊರ ಬಂದರು ಪ್ರದೇಶದ ಎನ್‌ಎಸ್‌ಕೆ ಸಂಸ್ಥೆಯ ಕಾರ್ಮಿಕರು ನೆಲೆಸಿರುವ ಜಾಗದಲ್ಲಿ ಹ್ಯಾಂಡ್‌ಪಂಪ್ ಬಳಸಲು ಕೊಳವೆ ಬಾವಿ ತೆಗೆಯಲಾಗುತ್ತಿತ್ತು. ಈ ಕಾರ್ಯದಲ್ಲಿ ರೋಹಿತ್ ಖಾರ್ವಿ ಮತ್ತು ಇನ್ನು 3 ಮಂದಿ ತೊಡಗಿಸಿಕೊಂಡಿದ್ದರು.
ರೋಹಿತ್ ಹಾಗೂ ಮತ್ತೂಬ್ಬರು ಕೆಳಗಿಳಿದಿದ್ದು, ಇನ್ನಿಬ್ಬರು ಮೇಲೆ ಇದ್ದರು. ಈ ವೇಳೆ ಸುತ್ತಲಿನ ಮಣ್ಣು ಕೊರೆಯುತ್ತಿದ್ದಂತೆ ಸಡಿಲವಾದ ಮಣ್ಣು ಕುಸಿಯಿತು. ಕೆಳಗಿದ್ದ ಒಬ್ಬರು ಮಣ್ಣು ಕುಸಿಯುತ್ತಿದ್ದಂತೆ ಮೇಲೆ ಬಂದರಾದರೂ ರೋಹಿತ್ ಅವರ ಕಾಲು ಮಣ್ಣಿನಲ್ಲಿ ಸಿಲುಕಿ ಸಿಲುಕಿಕೊಂಡಿತು. ಈ ವೇಳೆ, ಅವರ ಮೇಲೆ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿಕೊಂಡರು. ಕೂಡಲೇ ಅಲ್ಲಿದ್ದವರು ಮೇಲೆತ್ತಲು ಪ್ರಯತ್ನಪಟ್ಟರೂ ಸಾಧ್ಯವಾಗದೆ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು.
6 ತಾಸು ಕಾರ್ಯಾಚರಣೆ: ಬೆಳಗ್ಗೆ 11.30ರ ಸುಮಾರಿಗೆ ಸುದ್ದಿ ತಿಳಿದ ತಕ್ಷಣ ಕುಂದಾಪುರದ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ, ವೈದ್ಯರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಣ ಕಾರ್ಯಾಚರಣೆ ಆರಂಭಿಸಿ 6 ತಾಸಿನ ಬಳಿಕ ರೋಹಿತ್‌ನ ಶರೀರಕ್ಕೆ ಬೆಲ್ಟ್ ಅಳವಡಿಸಿ ಕ್ರೇನ್ ಸಹಾಯದಿಂದ ಸುರಕ್ಷಿತವಾಗಿ ಮೇಲಕ್ಕೆತ್ತಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.