ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ, ಭೂ ಕಂದಾಯ ವಿಧೇಯಕ ಅಂಗೀಕಾರ
Team Udayavani, Sep 19, 2022, 8:50 PM IST
ವಿಧಾನ ಪರಿಷತ್: ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ “ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕ-2022′ ಹಾಗೂ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ-2022ಕ್ಕೆ ಸೋಮವಾರ ಮೇಲ್ಮನೆ ಕೂಡ ಅಂಗೀಕರಿಸಿತು.
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ವಿಧೇಯಕವನ್ನು ಪ್ರಸ್ತಾಪಿಸಿದರು. ಈ ಕಾಯ್ದೆ ಅಡಿ ದೂರು ದಾಖಲಾದರೆ, ಇನ್ಮುಂದೆ ಹಣಕಾಸು ಸಂಸ್ಥೆಗಳ ಮುಖ್ಯಸ್ಥರು, ನಿರ್ದೇಶಕರ ವಿರುದ್ಧದ ಪ್ರಕರಣಗಳಲ್ಲಿನ ಅಪರಾಧವು ಜಾಮೀನುರಹಿತ ಎಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲ, ಒಂದು ಹಣಕಾಸು ಸಂಸ್ಥೆಯ ವಿರುದ್ಧ ಹಲವು ಕಡೆ ಎಫ್‌ಐಆರ್‌ಗಳು ದಾಖಲಾಗಿದ್ದರೆ, ಅದನ್ನು ಒಂದೇ ಪ್ರಕರಣವಾಗಿ ವಿಲೀನಗೊಳಿಸಲು ಅವಕಾಶ ಮಾಡಿಕೊಡಲಾಗಿದೆ.
ಈ ಪ್ರಕರಣಗಳ ವಿರುದ್ಧ ಸಾಮಾನ್ಯ ತನಿಖೆ ಕೈಗೊಳ್ಳಲು ಆದೇಶಿಸಬಹುದು. ಇದಕ್ಕಾಗಿ ಒಬ್ಬ ಅಧಿ ಕಾರಿಯನ್ನು ನೇಮಕ ಮಾಡುವ ಅಧಿ ಕಾರವನ್ನು ಸರ್ಕಾರಕ್ಕೆ ನೀಡಬಹುದು ಎಂದು ತಿದ್ದುಪಡಿ ವಿಧೇಯಕದಲ್ಲಿ ಉಲ್ಲೇಖೀಸಲಾಗಿದೆ. ಜತೆಗೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಸಮ್ಮತಿಯೊಂದಿಗೆ ವಿಶೇಷ ನ್ಯಾಯಾಲಯ ಕೂಡ ಸ್ಥಾಪಿಸಬಹುದಾಗಿದೆ.
ಮುಖ್ಯವಾಗಿ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಸೇರಿ ಹಣಕಾಸು ಸಂಸ್ಥೆಗಳ ವಂಚನೆಗಳಿಂದ ಠೇವಣಿದಾರರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಹಣಕಾಸು ಸಂಸ್ಥೆಗಳಿಗೆ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.