![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 30, 2022, 2:30 PM IST
ಬೆಂಗಳೂರು: ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಜೊತೆ ಸಭೆ ನಡೆಸಿದ್ದಾರೆ.
ಪ್ರವೀಣ್ ಸೂದ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಬೊಮ್ಮಾಯಿ ಅವರು ಕಾನೂನು ಸುವ್ಯವಸ್ಥೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ಕಾವು ರಾಜ್ಯಾದ್ಯಂತ ಹಬ್ಬಬಹುದೆಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.
ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬಿಜೆಪಿ ಪ್ರಾಬಲ್ಯವಿರುವ ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ತೆಗೆದುಕೊಳ್ಳಬೇಕೆಂದು ಪ್ರವೀಣ್ ಸೂದ್ ಗೆ ಸಿಎಂ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ:ಏಕನಾಥ್ ಶಿಂಧೆ ಸಿಎಂ ಆಗಿ ತಿಂಗಳು ಪೂರ್ತಿ: ಸಂಪುಟ ವಿಸ್ತರಣೆ ಇನ್ನೂ ಇಲ್ಲ
ಒಂದು ವೇಳೆ ಭದ್ರತಾ ಲೋಪ ಕಂಡುಬಂದರೆ ಪೊಲೀಸರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಿಂದುಮುಂದೆ ನೋಡುವುದಿಲ್ಲ ಎಂದು ಸಿಎಂ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದಾರೆ. ಗುಪ್ತಚರ ವಿಭಾಗವನ್ನು ಬಲಪಡಿಸಲಾಗಿದೆ. ವಿಶೇಷವಾಗಿ ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಕೇರಳ ಗಡಿಭಾಗದಲ್ಲಿರುವ ಮಂಗಳೂರು, ಕಾಸರಗೋಡು ಸೇರಿದಂತೆ ಮತ್ತಿತರ ಕಡೆ ಚೆಕ್ ಪೋಸ್ಟ್ ಗಳನ್ನು ಹೆಚ್ಚಳ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬರುತ್ತಿರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.