31ರಂದು ಡೀಸಿ ಕಚೇರಿ ಮುಂದೆ ಪ್ರತಿಭಟನೆ
Team Udayavani, Jan 26, 2020, 3:02 AM IST
ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅ. 31 ರಂದು ಬೆಳಗ್ಗೆ 10.30ಕ್ಕೆ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರ 15 ದೇಶಗಳೊಂದಿಗೆ ಸೇರಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದಲ್ಲಿ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಚಿಂತಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಿದರೆ ನಮ್ಮ ಆಹಾರ ಮತ್ತು ಕೃಷಿ ಕ್ಷೇತ್ರವು ನಷ್ಟಕ್ಕೆ ಗುರಿಯಾಗಲಿದೆ.
ಬಹುತೇಕ ಕೃಷಿ ಉತ್ಪನ್ನಗಳ ಮೇಲೆ ಆಮದು ಸುಂಕವನ್ನು ಶಾಶ್ವತವಾಗಿ ಶೂನ್ಯಕ್ಕೆ ತರಲಾಗುತ್ತದೆ. ಇದೇ ಸಮಯದಲ್ಲಿ ಅನೇಕ ದೇಶಗಳು ತಮ್ಮ ಹೆಚ್ಚುವರಿ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ನೋಡುತ್ತಿದ್ದು, ಇದರಿಂದ ನಮ್ಮ ದೇಶದ ಕೋಟ್ಯಂತರ ಸಣ್ಣ ರೈತರ ಹಾಗೂ ಮಹಿಳೆಯರ ಜೀವನೋಪಾಯವನ್ನು ಬೆಂಬಲಿಸುವ ಹೈನುಗಾರಿಕೆ ಕ್ಷೇತ್ರಕ್ಕೆ ತೀವ್ರ ಅಪಾಯ ಒದಗಲಿದೆ ಎಂದರು.
ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಪರಿಹರಿಸುವ ಕಡೆ ಗಮನ ಹರಿಸದೆ ತಿರಸ್ಕಾರ ಮನೋಭಾವನೆಯಿಂದ ನೋಡುತ್ತಿರುವುದನ್ನು ವಿರೋಧಿಸಿ ನ. 7ರಂದು ಬೆಳಗ್ಗೆ 11ಕ್ಕೆ ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.