ಕನಿಷ್ಠ ಸವಲತ್ತುಗಳನ್ನಾದರೂ ಒದಗಿಸಿ


Team Udayavani, Feb 28, 2023, 6:35 AM IST

ಕನಿಷ್ಠ ಸವಲತ್ತುಗಳನ್ನಾದರೂ ಒದಗಿಸಿ

ಬೆಂಗಳೂರು: ರಾಜ್ಯಾದ್ಯಂತ ಒಟ್ಟು 63 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ, ಆರೋಗ್ಯ ತಪಾಸಣೆ, ಚುಚ್ಚುಮದ್ದು, ಮಹಿಳೆಯರಿಗೆ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಬಗ್ಗೆ ಜಾಗೃತಿ ಮೂಡಿ ಸುವುದರ ಜತೆಗೆ ವಿವಿಧ ಸೇವೆಗಳನ್ನು ನಿಸ್ವಾರ್ಥದಿಂದ ನೆರವೇರಿಸುತ್ತಾರೆ.

ಕೋವಿಡ್‌-19 ಸಂದರ್ಭದಲ್ಲಿಯೂ ತಮ್ಮ ಪ್ರಾಣವನ್ನು ಲೆಕ್ಕಿಸದೇ, ಫ‌ಲಾನು ಭವಿಗಳ ಗಣನೀಯ ಸೇವೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಕೆಲವು ಸಾವಿಗೂ ತುತ್ತಾಗಿದ್ದಾರೆ. ಆದರೂ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಕನಿಷ್ಠ ಸೌಲಭ್ಯವಿಲ್ಲ, ಸರ್ಕಾರಿ ಸವಲತ್ತುಗಳಿಲ್ಲದೇ ಕೆಲಸ ಮಾಡುತ್ತಿ ದ್ದಾರೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಎಸ್‌.ವರಲಕ್ಷ್ಮಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು:
– ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಪುನರ್‌ರಚನೆಯ ಹೆಸರಿನಲ್ಲಿ ಅಂಗನವಾಡಿಗಳಲ್ಲಿ ಐಸಿಡಿಎಸ್‌ ಅನ್ನು ಖಾಸಗೀಕರ ಣಗೊಳಿಸುವುದನ್ನು ನಿಲ್ಲಿಸಿ.
– “ಪೋಷಣ್‌ ಮಟ್ಕಾ’ದಂತಹ ಯೋಜನೆಗಳ ಪರಿಚಯಿಸುವು ದನ್ನು ಮೊದಲು ಕೈಬಿಡಿ.
– ಎನ್‌ಇಪಿ-2020 ಅನ್ನು ಹಿಂದೆಗೆದುಕೊಂಡು, ಆರ್‌ಇಟಿ ಕಾಯ್ದೆಯಡಿ 0-6 ವಯಸ್ಸಿನ ಮಕ್ಕಳನ್ನು ಒಳಗೊಂಡ ಪ್ರತ್ಯೇಕ ಸಮಗ್ರ ಕಾನೂನು ರಚಿಸಬೇಕು.
– ಅಪೌಷ್ಟಿಕತೆ, ಕಾಯಿಲೆಗಳು, ಅನಕ್ಷರತೆಯಿಂದ ಸಮಾಜ ವನ್ನು ಮುಕ್ತಗೊಳಿಸಲು ಅಂಗನವಾಡಿಗಳನ್ನು ನೋಡಲ್‌ ಕೇಂದ್ರಗಳನ್ನಾಗಿ ಮಾಡಬೇಕು.
– ಎಲ್ಲ ಅಂಗನವಾಡಿ ಕಾರ್ಯಕರ್ತೆಯರನ್ನು 3ನೇ ದರ್ಜೆ ಮತ್ತು ಸಹಾಯಕರನ್ನು 4ನೇ ದರ್ಜೆಯ ಸರಕಾರಿ ನೌಕರರನ್ನಾಗಿ ನೇಮಿಸಬೇಕು.
– ಗ್ರಾಚ್ಯುಟಿ, ಪಿಂಚಣಿ, ಭವಿಷ್ಯ ನಿಧಿ, ವೈದ್ಯಕೀಯ ಸೌಲಭ್ಯಗಳು ಇತ್ಯಾದಿ ಸೇರಿದಂತೆ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಒದಗಿಸಬೇಕು.
– ಇಎಸ್‌ಐ, ಇಪಿಎಫ್ ಯೋಜನೆ ಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸೇರಿಸಬೇಕು.
– ಅಂಗನವಾಡಿ ನೌಕರರಿಗೆಂದು ರಾಷ್ಟ್ರೀಯ ಮಟ್ಟದ ಕಲ್ಯಾಣ ನಿಧಿ ರಚಿಸಬೇಕು.
– ಅಂಗನವಾಡಿ ಕಾರ್ಯಕರ್ತೆಯರಿಗೆ 32,000 ರೂ.ಗಳ ನುರಿತ ಕಾರ್ಮಿಕರ ಕನಿಷ್ಠ ವೇತನ ಮತ್ತು ಅರೆ ಕುಶಲ ಕಾರ್ಯಕರ್ತರಿಗೆ, ಸಹಾಯಕರಿಗೆ ರೂ.26,000 ವೇತನ ನೀಡಬೇಕು.
– ಅಂಗನವಾಡಿ ನೌಕರರಿಗೆ ವೇತನ ಸಹಿತ ವೈದ್ಯಕೀಯ ರಜೆ ನೀಡಬೇಕು.
– ಮಿನಿ-ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿ ರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸಾಮಾನ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನವಾದ ವೇತನ ಮತ್ತು ಸವಲತ್ತುಗಳನ್ನು ನೀಡಬೇಕು.
– “ಪೋಷಣ್‌ ಟ್ರ್ಯಾಕರ್‌’ ಆ್ಯಪ್‌ ಹೆಸರಿನಲ್ಲಿ ಕಾರ್ಮಿಕರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು.
– ಸ್ಮಾರ್ಟ್‌ಫೋನ್‌ಗಳು, ಡೇಟಾ ಮತ್ತು ನಿರ್ವಹಣೆಯ ಎಲ್ಲ ವೆಚ್ಚಗಳನ್ನು ವಾಸ್ತವಿಕವಾಗಿ ಪಾವತಿಸಬೇಕು.
– ದೇಶಾದ್ಯಂತ ಮಕ್ಕಳ ಪೌಷ್ಟಿಕಾಂಶದ ಸ್ಥಿತಿಯನ್ನು ತಿಳಿದುಕೊಳ್ಳಲು ವಾರ್ಷಿಕ ವರದಿಯನ್ನು ಬಡುಗಡೆಗೊಳಿಸಬೇಕು.
– ಅಂಗನವಾಡಿ ನೌಕರರಿಗೆ ವಾರ್ಷಿಕ ಶೇ.10ರಷ್ಟು ವೇತನ ಹೆಚ್ಚಳ ಮಾಡಬೇಕು. ಇದು ಬಾಕಿ ಉಳಿದಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಇರುವ ವೇತನ ಹೆಚ್ಚಳವನ್ನು ಸಹಾಯಕಿಯರಿಗೂ ವಿಸ್ತರಿಸಬೇಕು.
– ಶುದ್ಧ ಕುಡಿಯುವ ನೀರು, ಗ್ಯಾಸ್‌ ಸಂಪರ್ಕ, ಆಧುನಿಕ ಅಡುಗೆ ಸಲಕರಣೆಗಳಾದ ಕುಕ್ಕರ್‌, ಎಲೆಕ್ಟ್ರಿಕ್‌ ರೊಟ್ಟಿ ಮೇಕರ್‌, ಇಡ್ಲಿ ಮೇಕರ್‌ ಮುಂತಾದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಬೇಕು.
– ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರನ್ನು ಎಎನ್‌ಎಂ, ಪ್ರಾಂತಿಕ ಶಾಲಾ ಶಿಕ್ಷಕಿಯರು, ಗ್ರಾಮ ಸೇವಕರು ಎಂಬ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡಬೇಕು.
– ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಅಕಾ ಲಿಕ ಮರಣಕ್ಕೆ ತುತ್ತಾದರೆ, ಅವರ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ಯವುದೇ ಷರತ್ತುಗಳಿಲ್ಲದೇ ಕೆಲಸ ನೀಡಬೇಕು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.