ಪಿಎಸ್‌ಐ ಅಕ್ರಮ: ಮತ್ತೊಬ್ಬ ಮಧ್ಯವರ್ತಿ ವಶ: ಸಿಐಡಿ ವಿಶೇಷ ತನಿಖಾ ತಂಡದ ಕಾರ್ಯಾಚರಣೆ
ಗೃಹ ಸಚಿವರಿಗೂ ಬಂಧಿತನಿಗೂ ಸಂಬಂಧವಿಲ್ಲ: ಸರಕಾರ
Team Udayavani, Jul 13, 2022, 7:25 AM IST
ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮತ್ತೂಬ್ಬ ಮಧ್ಯವರ್ತಿ, ಶಿರಸಿ ಮೂಲದ ಗಣಪತಿ ಭಟ್ ಎಂಬಾತನನ್ನು ಸಿಐಡಿ ವಿಶೇಷ ತನಿಖಾ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ಈ ಗಣಪತಿ ಭಟ್ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ಎಂಬ ಮಾತುಗಳು ಕೇಳಿ ಬಂದಿದ್ದವಾದರೂ ಸಿಐಡಿ ವಶಕ್ಕೆ ಪಡೆದಿರುವ ಗಣಪತಿ ಭಟ್‌ಗೂ ಸಚಿವರಿಗೂ ಯಾವುದೇ ಸಂಬಂಧವಿಲ್ಲ. ಆತ ಗೃಹ ಸಚಿವರ ಆಪ್ತ ಸಹಾಯಕನಲ್ಲ ಎಂದು ಸಚಿವರ ಕಚೇರಿ ಸ್ಪಷ್ಟಪಡಿಸಿದೆ.
ಈ ಮಧ್ಯೆ ಗಣಪತಿ ಭಟ್ ಯಾರು ಎಂಬ ಬಗ್ಗೆ ತನಿಖೆ ನಡೆಯಬೇಕು. ಹಗರಣ ನಡೆದ ಸಂದರ್ಭದ ಗೃಹ ಸಚಿವರ ಕಚೇರಿ, ನಿವಾಸದ ಸಿಸಿ ಟಿವಿ ದೃಶ್ಯಾವಳಿ ಬಹಿರಂಗಪಡಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಕಾರವಾರದ ಶಿರಸಿ ಮೂಲದ ಗಣಪತಿ ಭಟ್ ಮಧ್ಯವರ್ತಿಯಾಗಿದ್ದು, ಈ ಹಿಂದೆಯೂ ಸಾಕಷ್ಟು ಮಂದಿಗೆ ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದಿದ್ದ. ಪಿಎಸ್‌ಐ ಅಕ್ರಮ ನೇಮಕದಲ್ಲೂ ಭಾಗಿಯಾಗಿದ್ದು, ಮೂವರು ಅಭ್ಯರ್ಥಿಗಳಿಂದ ಹಣ ಪಡೆದು ಡಿವೈಎಸ್ಪಿ ಶಾಂತಕುಮಾರ್‌ನನ್ನು ಭೇಟಿಯಾಗಿ ಅಕ್ರಮ ವ್ಯವಹಾರ ಕುದುರಿಸಿದ್ದಾನೆ. ಈ ಹಿಂದೆ ಒಎಂಆರ್ ಶೀಟ್ ತಿದ್ದುಪಡಿ ಆರೋಪದಲ್ಲಿ ವಿಚಾರಣೆ ನಡೆಸಿದಾಗ ಕೆಲವು ಅಭ್ಯರ್ಥಿಗಳು ಗಣಪತಿ ಭಟ್ ಬಗ್ಗೆ ಹೇಳಿಕೆ ನೀಡಿದ್ದರು. ಹೀಗಾಗಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಗಣಪತಿ ಭಟ್ಟ ಯಾರು?
ಗಣಪತಿ ಭಟ್ ನೆಲೆಮಾವು ಸಾಮಾಜಿಕ ಕಾರ್ಯಕರ್ತರಾಗಿದ್ದು, ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ಅಣಲೆಬೈಲ್ ಸಹಕಾರಿ ಸಂಘದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದು ಸಂಘದ ಅಧ್ಯಕ್ಷರಾಗಿದ್ದರು.
ನ್ಯಾ|ಮೂ| ಮುಂದೆ ಪೌಲ್ ಸ್ವಇಚ್ಛಾ ಹೇಳಿಕೆ?
ಪೊಲೀಸ್ ಕಸ್ಟಡಿಯಲ್ಲಿರುವ ಎಡಿಜಿಪಿ ಅಮೃತ್ ಪೌಲ್ ನ್ಯಾಯಾಧೀಶರ ಎದುರು ಸ್ವಇಚ್ಛಾ ಹೇಳಿಕೆ ದಾಖಲಿಸಲು ಒಲವು ತೋರಿದ್ದು, ತನಿಖಾಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಕಾನೂನು ಪ್ರಕಾರ ತನಿಖಾಧಿಕಾರಿಗಳು ಆರೋಪಿ ಅಥವಾ ಸಂತ್ರಸ್ತರ ಹೇಳಿಕೆ ದಾಖಲಿಸಲು ನ್ಯಾಯಾಲಯಕ್ಕೆ ಮನವಿ ಮಾಡಬೇಕಿದೆ. ಅಮೃತ್‌ಪೌಲ್ ನೇರವಾಗಿ ತಾನೇ ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸುತ್ತೇನೆ. ಅಕ್ರಮ ನೇಮಕಾತಿಗೆ ತನಗೆ ಯಾರು ಒತ್ತಾಯಿಸಿದರು, ತಾನು ಯಾರಿಗೆಲ್ಲ ಕೋಟ್ಯಂತರ ರೂ. ನೀಡಿದ್ದೇನೆ,
ಯಾವ ಸಚಿವರು, ಶಾಸಕರು ತಮ್ಮ ಅಭ್ಯರ್ಥಿಗಳಿಗೆ ಹುದ್ದೆ ಕೊಡಿಸುವಂತೆ ಬೇಡಿಕೆ ಮಂಡಿಸಿದ್ದರು ಎಂಬ ಬಗ್ಗೆ ಹೇಳಿಕೆ ನೀಡುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಈ ಮಧ್ಯೆ ಅಮೃತ್ ಪೌಲ್ ಪೊಲೀಸ್ ಕಸ್ಟಡಿ ಜು. 13ಕ್ಕೆ ಮುಕ್ತಾಯವಾಗಲಿದ್ದು, ಬುಧವಾರ ಸಂಜೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.