ಪಿಎಸ್‌ಐ ನೇಮಕಾತಿ ಅಕ್ರಮ: ತನಿಖಾ ವರದಿ ಕೇಳಿದ High Court

Team Udayavani, Apr 11, 2023, 7:20 AM IST

ಪಿಎಸ್‌ಐ ನೇಮಕಾತಿ ಅಕ್ರಮ: ತನಿಖಾ ವರದಿ ಕೇಳಿದ High Court

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಆರೋಪದ ಪ್ರಕರಣದಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ 145 ಅಭ್ಯರ್ಥಿಗಳ ಪೈಕಿ ಎಷ್ಟು ಅಭ್ಯರ್ಥಿಗಳು ಯಾವ ರೀತಿಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆಂಬ ಬಗ್ಗೆ ಸ್ಪಷ್ಟ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ.

ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಕೋರಿ ವಸಂತ ನಾಯಕ್‌ ಸೇರಿ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಜಿ. ನರೇಂದರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರು ವಾದ ಮಂಡಿಸಿ, ಈ ಪ್ರಕರಣದಲ್ಲಿ ತನಿಖೆ ಪ್ರಾರಂಭವಾಗಿ ಎ. 9ಕ್ಕೆ ಒಂದು ವರ್ಷ ಆಗಿದೆ. ಆದರೆ ಅರ್ಜಿದಾರರ ಪೈಕಿ ಯಾರೊಬ್ಬರ ವಿರುದ್ಧವೂ ಆರೋಪ ಅಥವಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆಂಬ ಸಂದೇಹವೂ ಇಲ್ಲ. ಆದರೂ ಸರಕಾರ ಸಾರಾಸಗಟಾಗಿ ಎಲ್ಲ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನೂ ರದ್ದುಗೊಳಿಸಿರುವುದು ಅನ್ಯಾಯ. ಆದ್ದರಿಂದ ಆರೋಪಗಳೇ ಇಲ್ಲದ ಅರ್ಜಿದಾರ ಅಭ್ಯರ್ಥಿಗಳು ತನಿಖೆಯ ಅಂತಿಮ ವರದಿಗೆ ಬದ್ಧರಾಗಿರತಕ್ಕದ್ದು ಎಂಬ ಷರತ್ತಿನ ಮೇಲೆ ಅವರನ್ನು ಉಳಿಸಿಕೊಳ್ಳಲು ನಿರ್ದೇಶಿಸಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ. ನಾವದಗಿ, ಹಿರಿಯ ಅಧಿಕಾರಿಗಳು ಪ್ರಾಮಾಣಿಕವಾಗಿ ಸಮಗ್ರ ತನಿಖೆ ನಡೆಸುತ್ತಿದ್ದು, ಸಾಕಷ್ಟು ಪ್ರಗತಿ ಸಾಧಿಸಲಾಗಿದೆ. ಬ್ಲೂ ಟೂತ್‌ ಬಳಕೆ ಮಾಡಿ ಹೊರಗಿನಿಂದ ಅಭ್ಯರ್ಥಿಗಳಿಗೆ ಉತ್ತರ ಹೇಳಿಕೊಟ್ಟಿರುವುದು ಮತ್ತು ನೇಮಕಾತಿ ವಿಭಾಗದÇÉೇ ಒಎಂಆಆರ್‌ ಶೀಟ್‌ಗಳನ್ನು ತಿದ್ದಿರುವುದರ ತನಿಖೆ ಮುಂದುವರಿದಿದೆ. ಒಎಂಆರ್‌ ಶೀಟುಗಳಿಗೆ ಸಂಬಂಧಿಸಿದಂತೆ ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯದಿಂದ ವರದಿ ಪಡೆಯಲಾಗಿದೆ. ಬ್ಲೂ ಟೂತ್‌ ಬಳಕೆ ಮಾಡಿ ನಕಲು ಮಾಡಿರುವುದರ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯ
ಪೀಠ, ಎಲ್ಲರನ್ನೂ ಒಂದೇ ದೃಷ್ಟಿಯಲ್ಲಿ ನೋಡಲಾಗದು. ಅಮಾಯಕರ ದೃಷ್ಟಿಯಿಂದಲೂ ಪರಿಶೀಲನೆ ಮಾಡಬೇಕಿದೆ. ಬೇಕಾದರೆ ಅರ್ಜಿದಾರರ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ. ಆದರೆ ನಾವು ಈ ಸಂಬಂಧ ಯಾವುದೇ ನ್ಯಾಯಾಂಗ ಆದೇಶ ಮಾಡಲು ಹೋಗುವುದಿಲ್ಲ. ಆದರೂ ಅರ್ಜಿದಾರರ ವಿಷಯದಲ್ಲಿ ನಿಮ್ಮ ಸ್ಪಷ್ಟ ನಿಲುವು ಪ್ರದರ್ಶಿಸಬೇಕು. ಒಂದು ವೇಳೆ ಅರ್ಜಿದಾರರಲ್ಲಿ ಯಾರಾದರೂ ಅಕ್ರಮದಲ್ಲಿ ಭಾಗಿಯಾಗಿದ್ದರೆ ಅಂತಹವರ ವಿರುದ್ಧ ತನಿಖೆ ಮುಂದುವರಿಸಬಹುದು. ಹೀಗಾಗಿ ಈ ಪ್ರಕರಣದಲ್ಲಿ ತನಿಖಾಧಿಕಾರಿಗಳು ಕೈಗೊಂಡಿರುವ ಪ್ರಗತಿ ವರದಿಯನ್ನು ಜೂ. 15ರೊಳಗೆ ನ್ಯಾಯಾಯಲಕ್ಕೆ ಸಲ್ಲಿಸಿ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.