PSI scam;ಎಫ್‌ಐಆರ್‌ಗಳನ್ನು ಕ್ಲಬ್ ಮಾಡುವ ಆರ್‌ಡಿ ಪಾಟೀಲ್ ಮನವಿ ತಿರಸ್ಕಾರ
Team Udayavani, Dec 8, 2023, 9:49 PM IST
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ರುದ್ರಗೌಡ ದೇವೇಂದ್ರಪ್ಪ ಪಾಟೀಲ್ (ಆರ್‌ಡಿ ಪಾಟೀಲ್) ವಿರುದ್ಧ ರಾಜ್ಯಾದ್ಯಂತ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳನ್ನು ಒಟ್ಟು ಸೇರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಪಾಟೀಲ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಜಾಗೊಳಿಸಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಕ್ರಿಯೆಗಳಲ್ಲಿ ಸಲ್ಲಿಸಲಾದ 11 ಎಫ್‌ಐಆರ್‌ಗಳು ಮತ್ತು ಚಾರ್ಜ್‌ಶೀಟ್‌ಗಳನ್ನು ವಿಲೀನಗೊಳಿಸುವಂತೆ ಅರ್ಜಿದಾರ ಆರ್‌ಡಿ ಪಾಟೀಲ್ ಕೋರಿದ್ದರು. ಎ 17ರಂದು ನ್ಯಾಯಾಲಯ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಅರ್ಜಿಯನ್ನು ವಜಾಗೊಳಿಸುವುದರೊಂದಿಗೆ ಈ ತಡೆಯಾಜ್ಞೆ ತೆರವಾಗಿದೆ.
ಪಾಟೀಲ್ ವಿರುದ್ಧ ಕಲಬುರಗಿಯ ಅಶೋಕನಗರ ಠಾಣೆಯಲ್ಲಿ 1, ಸ್ಟೇಷನ್ ಬಜಾರ್ ಠಾಣೆಯಲ್ಲಿ 2, ಚೌಕ್ ಠಾಣೆಯಲ್ಲಿ 1, ಧಾರವಾಡ ಉಪನಗರ ಠಾಣೆಯಲ್ಲಿ 1, ತುಮಕೂರಿನ ಕ್ಯಾತಸಂದ್ರ ಹಾಗೂ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ತಲಾ ಒಂದು ಎಫ್‌ಐಆರ್‌ಗಳು ದಾಖಲಾಗಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.