ದ್ವಿತೀಯ ಪಿಯುಸಿ ತರಗತಿ ಪ್ರಾರಂಭಕ್ಕೆ ಪದವಿ ಪೂರ್ವ ಇಲಾಖೆ ಸಿದ್ಧತೆ
Team Udayavani, May 20, 2020, 6:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ದಿನಾಂಕ ಘೋಷಣೆಯಾದ ಬೆನ್ನಲ್ಲೇ ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಪದವಿ ಪೂರ್ವ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಪ್ರತಿ ವರ್ಷ ಮೇ ಮೂರನೇ ವಾರಗಳಲ್ಲಿ ದ್ವಿತೀಯ ಪಿಯುಸಿ ತರಗತಿಗಳನ್ನು ಇಲಾಖೆ ಆರಂಭಿಸುತ್ತಿತ್ತು.
ಆದರೆ, ಪ್ರಸ್ತಕ ಸಾಲಿನ ಅಂತ್ಯದಲ್ಲಿ ಕೋವಿಡ್ ಆವರಿಸಿದ್ದರಿಂದ ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವ ಸಾಧ್ಯತೆಯಿದೆ ಎಂದು ಇಲಾಖೆ ಈಗಾಗಲೇ ಅಂದಾಜಿಸಿದೆ.
ಈಗಾಗಲೇ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದ್ವಿತೀಯ ಪಿಯುಸಿ ಆರಂಭಕ್ಕೆ ಪ್ರವೇಶ ಪ್ರಕ್ರಿಯೆಯ ನಿಯಮ ತುಂಬ ಕಡಿಮೆ ಇರುತ್ತದೆ. ಕಾಲೇಜು ಬದಲಿಸುವ ವಿದ್ಯಾರ್ಥಿಗಳಿಗೆ ಸ್ವಲ್ಪ ನಿಯಮ ಇರುತ್ತದೆ.
ಉಳಿದಂತೆ ಅದೇ ಕಾಲೇಜಿನಲ್ಲಿ ಮುಂದುವರಿಯುವ ವಿದ್ಯಾರ್ಥಿಗಳಿಗೆ ಸಮಸ್ಯೆ ಇರುವುದಿಲ್ಲ. ಹೀಗಾಗಿಯೇ ಪ್ರತಿ ವರ್ಷ ದ್ವಿತೀಯ ಪಿಯುಸಿ ತರಗತಿಗಳನ್ನು ಬೇಗ ಆರಂಭಿಸಿ, ವಾರ್ಷಿಕ ಪರೀಕ್ಷೆಗೆ ಸಜ್ಜುಗೊಳಿಸುವ ಕಾರ್ಯ ನಡೆಯುತ್ತದೆ.
ಮುಂದಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ತರಗತಿ ಆರಂಭಿಸಲು ಇಲಾಖೆಯ ಅಧಿಕಾರಿಗಳು ಈಗಾಗಲೇ ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಪಾಳಿ ಪದ್ಧತಿ ಅನುಸರಿಸುವುದು ಹೀಗೆ ಹಲವು ವಿಷಯದ ಬಗ್ಗೆ ಚರ್ಚೆಯಾಗಿದೆ.
ಆದರೆ, ಸರಕಾರದಿಂದ ಅನುಮತಿ ಸಿಗುವವರೆಗೂ ತರಗತಿ ಆರಂಭಿಸಲು ಸಾಧ್ಯವಿಲ್ಲ. ಸರಕಾರದ ಸೂಚನೆ ಬಂದ ಅನಂತರವೇ ತರಗತಿ ಆರಂಭಿಸಲಾಗುತ್ತದೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸರಕಾರದ ಸೂಚನೆಗಳನ್ನು ಪಾಲಿಸಿಯೇ ಮುನ್ನೆಡೆಯಲಿದ್ದೇವೆ ಎಂದು ಪಿಯು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.